ದೆಹಲಿಯ ನ್ಯೂ ಅಶೋಕ್ ನಗರದಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.
ಮಧ್ಯಾಹ್ನ ಸುಮಾರು 3:35ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಅಗ್ನಿಶಾಮಕ ದಳದ 5 ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ ಎಂದು ಆಗ್ನಿಶಾಮಕ ಇಲಾಖೆಯ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.
ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈವರೆಗೂ ಯಾವುದೇ ಸಾವು ನೋವು ಸಂಭವಿಸಿಲ್ಲ ಬೆಂಕಿಯನ್ನು ಹತ್ತೋಟಿಗೆ ತರಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.







