• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

BBMP ಕಚೇರಿಯಲ್ಲಿ ಅಗ್ನಿ ಅನಾಹುತ.. ಉದ್ದೇಶ ಪೂರ್ವಕ ಘಟನೆಯೇ..?

ಕೃಷ್ಣ ಮಣಿ by ಕೃಷ್ಣ ಮಣಿ
August 12, 2023
in ಅಂಕಣ, ಅಭಿಮತ
0
BBMP ಕಚೇರಿಯಲ್ಲಿ ಅಗ್ನಿ ಅನಾಹುತ.. ಉದ್ದೇಶ ಪೂರ್ವಕ ಘಟನೆಯೇ..?
Share on WhatsAppShare on FacebookShare on Telegram

ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಅನ್ನೋ ಕಾರಣಕ್ಕೆ ಗುತ್ತಿಗೆದಾರರಿಗೆ ಬಿಲ್​ ಬಿಡುಗಡೆ ಮಾಡದೆ ಸರ್ಕಾರ ತನಿಖೆಗೆ ಆದೇಶ ಮಾಡಿದೆ. ಈ ನಡುವೆ ಬಿಬಿಎಂಪಿ ವ್ಯಾಪ್ತಿಯ ಗುತ್ತಿಗೆದಾರರು ಬಿಲ್​ ಬಿಡುಗಡೆಗೆ ಆಗ್ರಹ ಮಾಡುತ್ತಿದ್ದಾರೆ. ಈ ನಡುವೆ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಪ್ರಯೋಗಾಲಯ ಹಾಗು ದಾಖಲೆಗಳು ಇರುವ ಕೊಠಡಿಗೆ ಬೆಂಕಿ ಬಿದ್ದಿದೆ. ಗುಣ ನಿಯಂತ್ರಣ ಕೊಠಡಿಗೆ ಬೆಂಕಿ ಬಿದ್ದಿದ್ದು, ಪ್ರಯೋಗಾಲಯದಲ್ಲಿ ತನಿಖೆ ಮಾಡುವಾಗ ಕೆಮಿಕಲ್​ ರಿಯಾಕ್ಷನ್​​ನಿಂದ ಅಗ್ನಿ ಅವಘಡ ಸಂಭವಿಸಿದೆ ಅನ್ನೋ ಮಾತುಗಳು ಮೇಲ್ನೋಟಕ್ಕೆ ಗೊತ್ತಾಗಿದೆ. ಆದರೆ ಈ ಬೆಂಕಿ ಘಟನೆ ಬಗ್ಗೆ ಆಕಸ್ಮಿಕ ಅಲ್ಲ, ಉದ್ದೇಶ ಪೂರ್ವಕ ಎಂದು ಕಾಂಗ್ರೆಸ್​ ಟ್ವೀಟ್​ ಮಾಡಿದೆ.

ADVERTISEMENT

9 ಜನರಿಗೆ ಸುಟ್ಟ ಗಾಯ, ನಾಲ್ವರ ಸ್ಥಿತಿ ಗಂಭೀರ..!

ಬಿಬಿಎಂಪಿ ಕಚೇರಿಯಲ್ಲಿ ನಡೆದಿರುವ ಅಗ್ನಿ ಅನಾಹುತದಲ್ಲಿ ಹಿರಿಯ ಅಧಿಕಾರಿಗಳಾದ ಚೀಫ್ ಎಂಜಿನಿಯರ್ ಶಿವಕುಮಾರ್, ಎಕ್ಸಿಕ್ಯೂಟಿವ್ ಎಂಜಿನಿಯರ್​ಗಳಾದ ಸಂತೋಷ್ ಕುಮಾರ್, ವಿಜಯಲಕ್ಷ್ಮಿ, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಶ್ರೀಧರ್, ಜ್ಯೂನಿಯರ್ ಎಂಜಿನಿಯರ್ ಜ್ಯೋತಿ ಹಾಗು ಶ್ರೀನಿವಾಸ್, ಕಂಪ್ಯೂಟರ್ ಆಪರೇಟರ್ ಮನೋಜ್, ಎಕ್ಸಿಕ್ಯೂಟಿವ್ ಎಂಜಿನಿಯರ್ ಕಿರಣ್, ಪ್ರಥಮ ದರ್ಜೆ ಸಹಾಯಕ ಸಿರಾಜ್ ಗಾಯಗೊಂಡಿದ್ದಾರೆ. ಇದರಲ್ಲಿ ಮುಖ್ಯ ಎಂಜಿನಿಯರ್​​ ಶಿವಕುಮಾರ್​ ಸೇರಿದಂತೆ ನಾಲ್ವರ ಸ್ಥಿತಿ ಗಂಭೀರ ಎನ್ನಲಾಗಿದೆ. ಸೇಂಟ್​ ಮಾರ್ಥಾಸ್​ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಎಲ್ಲರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಹಾಗು ಫೊರೆನ್ಸಿಕ್​ ತಜ್ಞರು ಸ್ಥಳಕ್ಕೆ ಭೇಟಿ ನೀಡಿ, ಘಟನೆಗೆ ಕಾರಣ ಏನು ಅನ್ನೋ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಬಿಬಿಎಂಪಿ ಅಗ್ನಿ ಅನಾಹುತಕ್ಕೆ ಟ್ವಿಸ್ಟ್​ ಕೊಟ್ಟ ಕಾಂಗ್ರೆಸ್​ ಟ್ವೀಟ್​..

ಬಿಬಿಎಂಪಿ ದಾಖಲೆಗಳು ಇದ್ದ ಕೊಠಡಿಗೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ, ಇದೊಂದು ಷಡ್ಯಂತ್ರ ಎಂದು ಕಾಂಗ್ರೆಸ್​ ಟ್ವೀಟ್​ ಮಾಡಿದೆ. 40 ಪರ್ಸೆಂಟ್​ ಕಮಿಷನ್‌ ಬಗ್ಗೆ ಕಾಮಗಾರಿಗಳ ತನಿಖೆ ಬೆನ್ನಲ್ಲೇ ಕೊಠಡಿಗೆ ಬೆಂಕಿ ಬಿದ್ದಿರುವುದು ಅನುಮಾನಕ್ಕೆ ಕಾರಣ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿ ಗಂಭೀರ ಆರೋಪ ಮಾಡಿದೆ. ಬಿಬಿಎಂಪಿ ಕಚೇರಿಯ ಕಾಮಗಾರಿಗಳ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ ಬಿದ್ದಿದೆ. ಆದರೆ ಅರ್ಧಗಂಟೆ ಆದರೂ ಅಗ್ನಿಶಾಮಕ ವಾಹನಗಳು ಬಂದಿಲ್ಲ ಎನ್ನುವುದೇ ಅಚ್ಚರಿಯ ಸಂಗತಿ. ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಿದ ಬೆನ್ನಲ್ಲೇ ಬೆಂಕಿ ಬಿದ್ದಿರುವುದು ಅನುಮಾನ ಮೂಡಿಸಿದೆ. ದಾಖಲೆಗಳಿದ್ದ ಕೊಠಡಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು ಹೆಡೆಮುರಿ ಕಟ್ಟುವುದು ನಿಶ್ಚಿತ ಎಂದು ಕಾಂಗ್ರೆಸ್​​ ಬಿಜೆಪಿ ಕಡೆಗೆ ಬೊಟ್ಟು ಮಾಡುವ ಕೆಲಸ ಮಾಡಿದೆ.

ಬಿಬಿಎಂಪಿ ಕಚೇರಿಯಲ್ಲೇ ಬೆಂಕಿ ನಂದಿಸುವ ವ್ಯವಸ್ಥೆ ಇಲ್ವಾ..?

ಬೆಂಗಳೂರಿನ ಯಾವುದೇ ವಾಣಿಜ್ಯ ಕಟ್ಟಡದಲ್ಲಿ ಅಗ್ನಿಶಾಮಕ ವ್ಯವಸ್ಥೆ ಇರಬೇಕು ಎನ್ನುವುದು ನಿಯಮ. ಅಗ್ನಿಶಾಮಕ ವ್ಯವಸ್ಥೆ ಇದೆಯಾ ಇಲ್ಲವಾ..? ಅನ್ನೋ ಬಗ್ಗೆ ಸ್ವತಃ ಬಿಬಿಎಂಪಿ ಅಧಿಕಾರಿಗಳು ಪರಿಶೀಲನೆ ಮಾಡಿ NOC ಕೊಡುತ್ತಾರೆ. ಆದರೆ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಬೆಂಕಿ ಬಿದ್ದಾಗ ಅಲ್ಲಿನ ಸಿಬ್ಬಂದಿ ಹೊರ ಬರುವುದಕ್ಕೆ ಯಾವುದೇ ವ್ಯವಸ್ಥೆ ಇರಲಿಲ್ಲ ಅನ್ನೋದು ಬಯಲಾಗಿದೆ. ಇನ್ನು ಬೆಂಕಿ ಬಿದ್ದ ಅರ್ಧ ಗಂಟೆಗಳ ಕಾಲ ಅಗ್ನಿಶಾಮಕ ವಾಹನ ಬಾರಲಿಲ್ಲ. ಕಚೇರಿಯಲ್ಲಿ ಬೆಂಕಿ ನಂದಿಸುವುದಕ್ಕೆ ಯಾವುದೇ ವ್ಯವಸ್ಥೆ ಇರಲಿಲ್ಲ. ಅಷ್ಟೇ ಅಲ್ಲದೆ ಅಗ್ನಿ ನರ್ತನ ಶುರುವಾದಾಗ ಬೆಂಕಿ ನಂದಿಸಲು ಯಾವುದೇ ಸಲಕರಣೆ ಇರಲಿಲ್ಲ, ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡುವ ವ್ಯವಸ್ಥೆಯೂ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಇರಲಿಲ್ಲ ಎನ್ನುವುದು ಬಯಲಾಗಿದೆ. ಅಂದರೆ ಇಡೀ ಕಟ್ಟಡದಲ್ಲಿ ಅಗ್ನಿಶಾಮಕ ವ್ಯವಸ್ಥೆ ಇರಲಿಲ್ವಾ..? ಅನ್ನೋದಕ್ಕೆ ಬಿಬಿಎಂಪಿ ಅಧಿಕಾರಿಗಳೇ ಉತ್ತರ ಕೊಡಬೇಕಿದೆ.

ಕೃಷ್ಣಮಣಿ

Tags: BBMPBBMP CommissionerBJP
Previous Post

Breaking: ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಬೆಂಕಿ ಅವಘಡ | ಮಹಿಳೆಯರು ಸೇರಿ 10 ಮಂದಿಗೆ ತೀವ್ರ ಗಾಯ

Next Post

ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಬಂಧನ | ವರ್ಷದವರೆಗೆ ಜಾಮೀನು ಇಲ್ಲ

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 18, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ  ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್.‌ ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

April 15, 2026
ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.

ಭಾರತದ ಪಂಚಾಯತ್‌ನಿಂದ ಪಾರ್ಲಿಮೆಂಟ್‌ವರೆಗೆ ರಾಜಕೀಯ ವ್ಯವಸ್ಥೆಯಲ್ಲಿ ಮಹಿಳಾ ಮೀಸಲಾತಿ: ಸವಾಲುಗಳು ಮತ್ತು ಸಾಧ್ಯತೆಗಳು.

April 15, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಪುನೀತ್‌ ಕೆರೆಹಳ್ಳಿ

ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಬಂಧನ | ವರ್ಷದವರೆಗೆ ಜಾಮೀನು ಇಲ್ಲ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada