
ಕೋಲಾರ (Kolar)ಎಪಿಎಂಸಿ ಮಾರುಕಟ್ಟೆಯಲ್ಲಿ (APMC market)ಭೀಕರ ಅಗ್ನಿ ಅವಘಡ ಸಂಭವಿಸಿದೆ. ನೋಡ ನೋಡುತ್ತಿದ್ದಂತೆಯೇ ಬೆಂಕಿಯ (fire)ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು,ಧಗ ಧಗನೆ ಹೊತ್ತಿ ಉರಿದಿದೆ.ಎಪಿಎಂಸಿ ಮಾರುಕಟ್ಟೆಯಲ್ಲಿ ಸೋಮಣ್ಣ ಎಂಬುವವರಿಗೆ ಸೇರಿದ ಮಂಡಿಯಲ್ಲಿ ಈ ಘಟನೆ ನಡೆದಿದೆ.

ಸುಮಾರು 1000ಕ್ಕೂ ಹೆಚ್ಚು ಟೊಮೆಟೊ ಕ್ರೇಟ್ ಗಳು ಬೆಂಕಿಗಾಹುತಿಯಾಗಿವೆ ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ (Fire extinguisher(ಕಾರ್ಯದಲ್ಲಿ ನಿರತರಾಗಿದ್ದಾರೆ ಕೋಲಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.