ಇಂಫಾಲ್: ಮಣಿಪುರ (Manipur) ಸಿಎಂ ನಿವಾಸದ ಬಳಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿರುವ ಘಟನೆ ನಡೆದಿದೆ.
ಮಣಿಪುರದ ರಾಜಧಾನಿ ಇಂಫಾಲ್ ನಲ್ಲಿರುವ ಸಿಎಂ ಎನ್.ಬಿರೇನ್ ಸಿಂಗ್ (N. Biren Singh) ನಿವಾಸದ ಹತ್ತಿರ ಈ ಘಟನೆ ನಡೆದಿದೆ. ಅಲ್ಲಿನ ಹೈ ಸೆಕ್ಯುರಿಟಿ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್ ಹತ್ತಿರ ಇರುವ ಕಟ್ಟಡದಲ್ಲಿ ಈ ಘಟನೆ ನಡೆದಿದೆ.
ಸಂಭವಿಸಿದೆ ಸಿಎಂ ಬಿರೇನ್ ಸಿಂಗ್ ಅವರ ಅಧಿಕೃತ ಬಂಗಲೆಯಿಂದ ಕೇವಲ 100 ಮೀಟರ್ ದೂರದಲ್ಲಿ ಈ ಘಟನೆ ನಡೆದಿದೆ. ಹೀಗಾಗಿ ಆತಂಕ ಮನೆ ಮಾಡಿತ್ತು. ಸಾವು- ನೋವುಗಳ ಕುರಿತು ಯಾವುದೇ ವರದಿಯಾಗಿಲ್ಲ. ಅವಘಡಕ್ಕೆ ನಿಖರ ಕಾರಣ ಕೂಡ ತಿಳಿದು ಬಂದಿಲ್ಲ.
ಇತ್ತೀಚೆಗಷ್ಟೇ ಮಣಿಪುರದ ಹಿಂಸಾಚಾರ ಪೀಡಿತ ಜಿರಿಬಾಮ್ ಜಿಲ್ಲೆಗೆ ಭೇಟಿ ನೀಡಿದ್ದ ಸಿಎಂ ಎನ್.ಬಿರೇನ್ ಸಿಂಗ್ ಅವರ ಬೆಂಗಾವಲು ಪಡೆ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಗುಂಡಿನ ದಾಳಿಯಲ್ಲಿ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದರು. ಬೆಂಗಾವಲು ಪಡೆ ಹಿಂಸಾಚಾರ ಪೀಡಿತ ಜಿರಿಬಾಮ್ ಜಿಲ್ಲೆಗೆ ತೆರಳುತ್ತಿತ್ತು. ಆದರೆ, ಅದೃಷ್ಟವಶಾತ್ ದಾಳಿ ವೇಳೆ ಸಿಎಂ ಇರಲಿಲ್ಲ.