ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರಕ್ಕೆ ಮುಹೂರ್ಥ ಫಿಕ್ಸ್ ಆಗಿದೆ. ಲೋಕಸಭಾ ಚುನಾವಣೆಗೆ ಮಾರ್ಚ್ 28 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಆರಂಭದ ದಿನವೇ ನಾಮಪತ್ರ ಸಲ್ಲಿಸಲು ಡಿ.ಕೆ.ಸುರೇಶ್ ನಿರ್ಧಾರ ಮಾಡಿದ್ದಾರೆ.

ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾರ್ಚ್ 28 ರಂದು ಬೆಳಗ್ಗೆ 11ಕ್ಕೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಕಾಂಗ್ರೆಸ್ ನ ಹಿರಿಯ ನಾಯಕರು ಭಾಗಿಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಡಿ.ಕೆ ಸುರೇಶ್ ಮಾಹಿತಿ ನೀಡಿದ್ದಾರೆ. ಸಾವಿರಾರು ಜನರನ್ನು ಸೇರಿಸಿ ಸಮಾವೇಶ ಮಾಡಲು ಭರ್ಜರಿ ತಯಾರಿ ನಡೆದಿದೆ.







