• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲಿ ನವೆಂಬರ್‌ 4 ರಿಂದ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ

ಪ್ರತಿಧ್ವನಿ by ಪ್ರತಿಧ್ವನಿ
September 19, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕೌಶಲ್ಯ, ನಾವೀನ್ಯತೆ, ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡಲು ಸರ್ಕಾರ ಬದ್ಧ

ADVERTISEMENT

ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, ಹಲವಾರು ಮಾಹಿತಿ ನೀಡಿದರು.

ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ನವೆಂಬರ್ 4 ರಿಂದ 6 ರವರೆಗೆ ಈ ಶೃಂಗಸಭೆ ನಡೆಯಲಿದೆ. ಇದೇ ಮೊದಲ ಬಾರಿಗೆ ಇಂಥ ಮಹತ್ವಾಕಾಂಕ್ಷೆಯ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಈ ಶೃಂಗಸಭೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

“ಬೆಂಗಳೂರು ಕೌಶಲ್ಯ ಶೃಂಗಸಭೆಯ ಮೂಲಕ ಯುವ ಸಮುದಾಯಕ್ಕೆ ಮುಖ್ಯವಾಗಿ ಮಹಿಳೆಯರು, ಗ್ರಾಮೀಣ ಸಮುದಾಯಗಳು ಮತ್ತು ಅಂಗವಿಕಲರಿಗೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗುವುದು. ಕೌಶಲ್ಯದ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಲು ನಮ್ಮ ಸರ್ಕಾರ ಅವಕಾಶಗಳ ಬೃಹತ್‌ ವೇದಿಕೆ ಒದಗಿಸುತ್ತಿದೆ ಎಂದು ಡಾ. ಪಾಟೀಲ್‌ ವಿವರಿಸಿದರು.

ಕೈಗಾರಿಕೆ, ಶೈಕ್ಷಣಿಕ, ತರಬೇತಿ ಮತ್ತು ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಯುವ ಸಮೂಹವನ್ನು ಬೆಳೆಸಲು ಹಾಗೂ ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಈ ಶೃಂಗಸಭೆ ಹೊಂದಿದೆ ಎಂದು ಸಚಿವರು ತಿಳಿಸಿದರು.

ಮುಖ್ಯಮಂತ್ರಿ ಸಕಾರಾತ್ಮಕ ಸ್ಪಂದನೆ
ಕರ್ನಾಟಕದಲ್ಲಿ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಹೀಗಾಗಿ ಕೌಶಲ್ಯ ಶೃಂಗಸಭೆ ಆಯೋಜಿಸಬೇಕು ಎಂದು ಈ ಹಿಂದೆಯೇ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ ಹಿನ್ನೆಲೆಯಲ್ಲಿ ಸ್ಕಿಲ್‌ ಸಮ್ಮಿಟ್‌ ಕಾರ್ಯರೂಪಕ್ಕೆ ಬರುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (KSDC) ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ (KSDA) ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ಜಂಟಿ ಸಹಯೋಗದೊಂದಿಗೆ ಈ ಶೃಂಗಸಭೆಯನ್ನು ಆಯೋಜಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಮುಂದಿನ ದಿನಗಳಲ್ಲಿ ಕೌಶಲ್ಯ ನೀತಿ
ಮುಂಬರುವ ದಿನಗಳಲ್ಲಿ ಕೌಶಲ್ಯ ನೀತಿ ರೂಪಿಸಲಾಗುತ್ತದೆ. ಕರ್ನಾಟಕದಲ್ಲಿ ಮಾನವ ಸಂಪನ್ಮೂಲ ಅಗಾಧವಾಗಿದೆ. ಅದಕ್ಕೆ ಸ್ಪಷ್ಟ ರೂಪ, ಕೌಶಲ್ಯ ತರಬೇತಿ ನೀಡಿದರೆ ನಮ್ಮ ರಾಜ್ಯ ಮತ್ತು ನಮ್ಮ ರಾಜಧಾನಿ ಅತ್ಯಂತ ವೇಗವಾಗಿ ಬೆಳೆಯುವ ವಿಶ್ವಾಸವಿದೆ ಎಂದರು.

ಯುವ ಸಮೂಹಕ್ಕೆ ಅತ್ಯುತ್ತಮ ವೇದಿಕೆ
ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಇ.ವಿ. ರಮಣ ರೆಡ್ಡಿ ಮಾತನಾಡಿ, ಯುವನಿಧಿ ಗ್ಯಾರಂಟಿ ಯೋಜನೆಯಿಂದ ಸಾವಿರಾರು ಯುವಕರಿಗೆ ಅನುಕೂಲವಾಗಿದೆ. ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಬೇಕು ಎನ್ನುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಈ ರೀತಿಯ ವಿಶೇಷ ತರಬೇತಿ ದೊರೆತರೆ ಯುವ ಸಮೂಹ ಅಂತಾರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಉದ್ಯೋಗ ಗಿಟ್ಟಿಸಲು ಸಮರ್ಥವಾಗುತ್ತದೆ. ಈ ನಿಟ್ಟಿನಲ್ಲಿ ಕೌಶಲ್ಯ ಶೃಂಗಸಭೆ ಅತ್ಯುತ್ತಮ ವೇದಿಕೆ ಒದಗಿಸಲಿದೆ ಎಂದು ತಿಳಿಸಿದರು.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಿವಕಾಂತಮ್ಮ ನಾಯಕ್, ಕೌಶಲ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎನ್.ಎಂ. ನಾಗರಾಜ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags: | siddaramaiahc m siddaramaiah danceCM Siddaramaiahcm siddaramaiah dancecm siddaramaiah housecm siddaramaiah newscm siddaramaiah speechsiddaramaiahsiddaramaiah angersiddaramaiah angrysiddaramaiah bdaysiddaramaiah comedysiddaramaiah dancesiddaramaiah dancingsiddaramaiah in delhisiddaramaiah jdssiddaramaiah new dancesiddaramaiah newssiddaramaiah panchesiddaramaiah pcsiddaramaiah slip downsiddaramaiah speechsiddaramaiah stylesiddaramaiah today news
Previous Post

DK Shivakumar: ಎಲ್ಲಾ ಗೊಂದಲ ಸರಿಪಡಿಸಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ..

Next Post

“ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ‌ ವರ್ಷ ಬೊಳ್ಳಮ್ಮ .

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post

"ಮಹಾನ್" ಚಿತ್ರದ ಪ್ರಮುಖಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ‌ ವರ್ಷ ಬೊಳ್ಳಮ್ಮ .

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada