ರಾಜ್ಯದಲ್ಲಿ ಈಗ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿಯನ್ನ ಹಿಡಿದಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವಂತ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಎಲ್ಲಾ ರೀತಿಯಾದ ತಯಾರಿಯನ್ನ ಮಾಡಿಕೊಂಡಿದೆ. ಅಧಿಕಾರಕ್ಕೆ ಬಂದ ಹನ್ನೊಂದೇ ದಿನಗಳಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ನಡೆದಿರುವ ಅಕ್ರಮದ ತನಿಖೆ ನಡೆಸುವ ಸಲುವಾಗಿ ಮೊದಲ ಎಫ್ಐಆರ್ ದಾಖಲಿಸಿದೆ.
ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ, ಸರ್ಕಾರ ರಚನೆಯನ್ನ ಕೂಡ ಮಾಡಿದೆ. ಈಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ಶುರು ಮಾಡಲು ಉನ್ನತ ಮಟ್ಟದ ಅಧಿಕಾರಿಗಳಿಗೆ ಕಾಂಗ್ರೆಸ್ ನಾಯಕರು ಅದೇಶವನ್ನ ಹೊರಡಿಸಿದ್ದಾರೆ ಎನ್ನಲಾಗ್ತಾ ಇದೆ.

ಇನ್ನು ಈ ಗಂಗಾ ಕಲ್ಯಾಣ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಅಂತ ಈ ಹಿಂದಿನಿಂದಲೂ ಸಾಕಷ್ಟು ಆರೋಪಗಳು ಕೇಳಿ ಬಂದಿದ್ವು.. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಈ ಬಗ್ಗೆ ಈಗ ಸಂಪೂರ್ಣವಾಗಿ ತನಿಖೆ ನಡೆಸಲು ಉತ್ಸುಕವಾಗಿದೆ ಅನ್ನೋ ಮಾತುಗಳು ಕೇಳಿ ಬಂದಿದೆ. ಹೀಗಾಗಿ ಮೊದಲ ಎಫ್ಐಆರ್ ಈಗ ದಾಖಲಿಸಲಾಗಿದೆ


ಈ ಬಗ್ಗೆ ಈಗಾಗ್ಲೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ನಡೆದಿದೆ ಎನ್ನಲಾಗ್ತಾ ಇರೋ ಕೋಟ್ಯಂತರ ರೂಪಾಯಿ ಅಕ್ರಮದ ಬಗ್ಗೆ ತನಿಖೆ ಕೈಗೊಳ್ಳುವಂತೆ, ಸರ್ಕಾರ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಈ ಮೂಲಕ ಬಿಜೆಪಿ ಅವಧಿಯ ಅಕ್ರಮಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ತನಿಖೆ ನಡೆಸೋದಕ್ಕೆ ಮುಂದಾಗಿರೋದು, ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತಿದ್ದ ಅಧಿಕಾರಿಗಳಿಗೆ ನಡುಕ ಹುಟ್ಟಿದೆ.
ಇನ್ನು ಈ ಗಂಗಾಕಲ್ಯಾಣ ಯೋಜನೆಯಲ್ಲಿ ಅರ್ಹ ಫಲಾನುಭವಿಗಳಿಗೆ ಯೋಜನೆ ಲಾಭ ತಲುಪದೇ ಕೋಟ್ಯಾಂತರ ರೂಪಾಯಿಗಳಷ್ಟು ಅವ್ಯವಹಾರ ನಡೆದಿರುವ ಆರೋಪ ಸಾರ್ವಜನಿಕರಿಂದ ಕೂಡ ಕೇಳಿ ಬಂದಿತ್ತು, ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್, ಮತ್ತು ಅದರ ಇತರ ನಾಯಕರು ಕೂಡ ಈ ಬಗ್ಗೆ ತನಿಖೆ ನಡೆಸುವಂತೆ ಬಿಜೆಪಿ ಸರ್ಕಾರವನ್ನ ಒತ್ತಾಯ ಮಾಡಿತ್ತು. ಆದ್ರೆ ಇದಕ್ಕೆ ಬಿಜೆಪಿ ಮಣೆ ಹಾಕಿರಲಿಲ್ಲ ಆದ್ರೆ ಈ ಬಾರಿ ಅಧಿಕಾರದ ಚುಕ್ಕಾಣಿ ಗಹಿಡಿದಿರುವ ಕಾಂಗ್ರೆಸ್, ಎಫ್ಐಆರ್ ದಾಖಲಿಸುವಲ್ಲಿ ಯಶಸ್ವಿಯಾಗಿದೆ.