ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ 25 ನೇ ಚಿತ್ರ “ಬಲರಾಮನ ದಿನಗಳು”.ಡಿಸೆಂಬರ್ 3 ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬ.ಹಾಗಾಗಿ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.
ಇದು 1980ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ. ಆ ಕಾಲಮಾನದ ಗೆಟಪ್ ನಲ್ಲಿ ವಿನೋದ್ ಪ್ರಭಾಕರ್ ಅವರು ಕಾಣಿಸಿಕೊಂಡಿದ್ದಾರೆ. ಟೈಗರ್ ಅವರ ಈ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
“ಅಟ್ಟಕತ್ತಿ”, ” ಕಾಲ”, “ಕಬಾಲಿ”, “ಭೈರವ”, “ದಸರಾ”, “ಕಲ್ಕಿ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿರುವ ಭಾರತದ ಖ್ಯಾತ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಇದು ಅವರು ಸಂಗೀತ ಸಂಯೋಜಿಸುತ್ತಿರುವ 51ನೇ ಚಿತ್ರ. ಈಗಾಗಲೇ ಸಂಗೀತ ನಿರ್ದೇಶನಕ್ಕೆ ಸಂಬಂಧಿಸಿದ ಕೆಲಸಗಳು ಆರಂಭವಾಗಿದೆ.
ಬಹು ನಿರೀಕ್ಷಿತ “ಬಲರಾಮನ ದಿನಗಳು” ಚಿತ್ರಕ್ಕೆ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ.