ಬೆಂಗಳೂರು : ತಮ್ಮ ಮೇಲೆ ಪೋಕ್ಸೋ ಪ್ರಕರಣದ ದಾಖಲಾಗಿರುವ ಕುರಿತು ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಅಜ್ಞಾತ ಸ್ಥಳದಿಂದಲೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ, ಭಕ್ತರ ಯಾವುದೇ ಆತಂಕ ಪಡೆಬೇಡಿ ಎಂದು ಮನವಿ ಮಾಡಿದ್ದಾರೆ. ಪೊಲೀಸರು ಮಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಮಾಹಿತಿ ನನಗೂ ತಿಳಿದಿದೆ. ಪೊಲೀಸರ ತನಿಖೆಗೆ ಸಹಕರಿಸುವೆ. ಯಾವಾಗ ವಿಚಾರಣೆಗೆ ಕರೆಯುತ್ತಾರೋ ಆಗ ನಾನು ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಡಾ ರಾಜಕುಮಾರ ಅಪರಣ ಕೇಸ್: 24 ವರುಷಗಳ ಕಾನೂನು ಹೋರಾಟ ಅಂತ್ಯ
ಮಾರ್ಚ್ ತಿಂಗಳ 13 ರಂದು ಮಹಲ್ ರೋಜಾದ ಮಠದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಹೀಗಾಗಿ ಅದರ ಆಮಂತ್ರಣಕ್ಕಾಗಿ ನಾನು ಬೇರೆ ಕಡೆಗೆ ಬಂದಿದ್ದೇನೆ. ಭಕ್ತರು ಆತಂಕ ಪಡಬೇಡಿ ಎಂದು ಮಲ್ಲಿಕಾರ್ಜುನ ಮುತ್ಯಾ ವಿಡಿಯೋದಲ್ಲಿ ಹೇಳಿದ್ದಾರೆ.
ಪ್ರಕರಣದ ಹಿನ್ನೆಲೆ ಏನು..?
ಶಹಾಪುರ ತಾಲೂಕಿನ ಮಹಲ್ ರೋಜಾ ಮಠದ 30 ವರ್ಷದ ಮಲ್ಲಿಕಾರ್ಜುನ ಮುತ್ಯಾ (Mallikarjuna Muttya) ವಿರುದ್ಧ ಫೆಬ್ರವರಿ 19, 2026 ರಂದು ಮಠದಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಗೋಗಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಈ ಸಂಬಂಧದ ವಿಡಿಯೋ ವೈರಲ್ (viral Video) ಆದ ನಂತರ ಪೊಲೀಸರು ಪೋಕ್ಸೋ ಕಾಯ್ದೆಯಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮುತ್ಯಾ ವಿರುದ್ಧ ಫೆಬ್ರವರಿ 25 ರಂದು ಶಹಾಪುರದ ಮಕ್ಕಳ ಅಭಿವೃದ್ಧಿ ಯೋಜನಾ ಅಧಿಕಾರಿ ಮಲ್ಲಣ್ಣ ಉಮಾಪತಿ (41) ಅವರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ನೀಡಿದ ಸೂಚನೆಗಳಂತೆ ಪ್ರಕರಣ ದಾಖಲು ಮಾಡಿದ್ದಾರೆ.
ವೈರಲ್ ಆದ ವಿಡಿಯೋದ ನಂತರ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಯಾದಗಿರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ (DCPO) ಅವರಿಗೆ ವಿಡಿಯೋದ ಆಧಾರದ ಮೇಲೆ ತೆಗೆದುಕೊಂಡ ಕ್ರಮದ ಕುರಿತು ವರದಿ ಸಲ್ಲಿಸುವಂತೆ ಕೋರಿದೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.






