ತೌಕ್ತೆ ಚಂಡಮಾರುತದ ಅಬ್ಬರ- ಸಮುದ್ರದಲ್ಲಿ ಸಿಲುಕಿಕೊಂಡ ಬೋಟ್‌- ನಮ್ಮನ್ನು ರಕ್ಷಿಸುವಂತೆ ವಿಡಿಯೋ ಮಾಡಿ ಹರಿಬಿಟ್ಟ ಸಿಬ್ಬಂದಿ

ಅರಬ್ಬಿ ಸಮುದ್ರದಲ್ಲಿ ವಾಯುಬಾರ ಕುಸಿತದಿಂದ  ತೌಕ್ತೆ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೂ  ಬೀರಿದ್ದು, ಕರಾವಳಿ ಮತ್ತು ಮಲೆನಾಡುಭಾಗದಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಜೊತೆಗೆ ರೆಡ್‌ ಅಲರ್ಟ್‌ ಕೂಡ ಘೋಷಣೆ ಮಾಡಲಾಗಿದೆ. ಜಲಾಶಯಗಳ ನದಿದಂಡೆ ಪ್ರದೇಶದಲ್ಲಿ ನೆಲೆನಿಂತ ಜನರಿಗೆ ಎಚ್ಚರಿಕೆ ನೀಡಲಾಗಿದ್ದು, ಮೀನುಗಾರರಿಗೆ ಒಂದು ವಾರಗಳಕಾಲ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಈ ಮಧ್ಯೆ  ಉಡುಪಿಯ ಕಾಪುವಿನಲ್ಲಿ ಸಮುದ್ರ ಮಧ್ಯೆ ಬೋಟ್‌ ಒಂದು ಸಿಲುಕಿಗೊಂಡಿದ್ದು, ಅದರಲ್ಲಿದ್ದ 9 ಜನ ಸಿಬ್ಬಂದಿಗಳು ಅಪಾಯದಲ್ಲಿದ್ದಾರೆ.

ಸಮುದ್ರದ ದೈತ್ಯ ಅಲೆಗಳ ಹೊಡೆತಕ್ಕೆ ಬಂಡೆ ಮಧ್ಯೆ ಸಿಲುಕಿದ  ಬೋಟ್‌ ಮುಳುಗುವ ಅಪಾಯದಲ್ಲಿದ್ದು,  ಕಡಲು ಪ್ರಕ್ಷುಬ್ಧಗೊಂಡ ಕಾರಣ ರಕ್ಷಣಾ ಕಾರ್ಯಚರಣೆಗೂ ಅಡಿಯಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಬೋಟ್‌ನಲ್ಲಿ ಒಟ್ಟು 9 ಜನ ಸಿಬ್ಬಂದಿಗಳಲ್ಲಿದ್ದು, ಪ್ರಾಣಾಪಾಯದಲ್ಲಿರುವ ಅವರು ವಿಡಿಯೋ ಮಾಡಿ ತಕ್ಷಣ  ನಮ್ಮನ್ನು ರಕ್ಷಿಸುವಂತೆ ಅಂಗಲಾಚಿಕೊಂಡಿದ್ದಾರೆ. ಏರ್‌ಲಿಫ್ಟ್‌ ಮೂಲಕ ಸಿಬ್ಬಂದಿಯನ್ನು ರಕ್ಷಿಸುವಂತೆ ಕೊಚ್ಚಿಯ ಕೋಸ್ಟ್‌ ಗಾರ್ಡ್‌ ಕಚೇರಿಗೆ ಮನವಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related posts

Latest posts

ಭಾರತದ ಶ್ರೇಷ್ಠ ಓಟಗಾರ ಮಿಲ್ಖಾ ಸಿಂಗ್ ಇನ್ನಿಲ್ಲ

ಭಾರತದ ಶ್ರೇಷ್ಠ ಓಟಗಾರ ಮಿಲ್ಖಾ ಸಿಂಗ್ ಕೊರೊನಾ ಸೋಂಕಿನಿಂದ ಉಂಟಾದ ಹಲವಾರು ಸಮಸ್ಯೆಗಳಿಂದ ಕೊನೆಯುಸಿರೆಳೆದಿದ್ದಾರೆ. ಚಂಡೀಗಡದ ಪಿಜಿಐ ಆಸ್ಪತ್ರೆಯಲ್ಲಿ ತಮ್ಮ 91 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಕಳೆದ ತಿಂಗಳು ಮಿಲ್ಖಾ ಸಿಂಗ್ ಅವರಿಗೆ...

ಒಂದೇ ದಿನದಲ್ಲಿ ಎರಡು ವಿವಿಧ ಕೋವಿಡ್-19 ಲಸಿಕೆಗಳನ್ನು ಪಡೆದ ಬಿಹಾರದ ಮಹಿಳೆ

ಬಿಹಾರದ 63 ವರ್ಷದ ಮಹಿಳೆಗೆ ಒಂದೇ ದಿನದಲ್ಲಿ ಎರಡು ವಿಭಿನ್ನ ಕಂಪನಿಯ ಕರೋನ ಲಸಿಕೆ ನೀಡಲಾಗಿದೆ. ಅವರು ಈಗ ವೈದ್ಯರ ನಿಗದಲ್ಲಿದ್ದು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಬಿಹಾರದ ಮಹಿಳೆ ಸುನಿಲಾ ದೇವಿ ಎಂಬುವವರಿಗೆ ಜೂನ್ 16...

ಮಸೀದಿಗೆ ಜಾಗ ದಾನ ನೀಡಿದ ಸಿಖ್ ವ್ಯಕ್ತಿ: ಮಸೀದಿಯಲ್ಲಿ ಕಾರ್ಯಕ್ರಮ ಆಯೋಜಿಸಿದ ಗುರುದ್ವಾರ

ಕೋಮು‌‌ ಸಂಘರ್ಷಗಳು, ಪ್ರಚೋದನೆಗಳು ಮತ್ತು ವಿಭಿನ್ನ ಕೋಮಿನ ಜನರ ಮೇಲೆ ವಿನಾಕಾರಣ ಹಲ್ಲೆ, ಕೊಲೆ ನಡೆಯುವ ವಿದ್ಯಮಾನಗಳ ನಡುವೆ ಪಂಜಾಬಿನ‌ ಎರಡು ಜಿಲ್ಲೆಗಳು ಕೋಮುಸಾಮರಸ್ಯವನ್ನು ಉತ್ತೇಜಿಸುವಂತಹ ಘಟನೆಗೆ ಸಾಕ್ಷಿಯಾಗಿವೆ. ಸ್ವಾಭಿಮಾನಕ್ಕೆ, ಕೆಚ್ಚೆದೆಗೆ ಹಠಕ್ಕೆ...