• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮೀನುಗಾರಿಕೆಯಿಂದ ರಾಜ್ಯದ ಒಟ್ಟು ಜಿಡಿಪಿಯಲ್ಲಿ ವೃದ್ಧಿ : ಸಿಎಂ ಬೊಮ್ಮಾಯಿ

Any Mind by Any Mind
July 4, 2022
in ಕರ್ನಾಟಕ
0
ಎರಡು ವರ್ಷದಲ್ಲಿ ಅಮೃತ ನಗರೋತ್ಥಾನ ಯೋಜನೆ ಪೂರ್ಣಗೊಳಿಸಲು ಸಿಎಂ ಬೊಮ್ಮಾಯಿ ಸೂಚನೆ
Share on WhatsAppShare on FacebookShare on Telegram

ಮೀನುಗಾರಿಕೆಗೆ ಉತ್ತೇಜನ ನೀಡಿದಷ್ಟೂ ಸ್ವಯಂ ಉದ್ಯೋಗ, ಕೃಷಿಯ ಜೊತೆಗೆ ಮೀನುಗಾರಿಕೆಯಿಂದ ಆದಾಯ ಹೆಚ್ಚಳವಾಗುವುದು ಹಾಗೂ ರಾಜ್ಯದ ಒಟ್ಟು ಜಿಡಿಪಿಯಲ್ಲಿ ವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ADVERTISEMENT

ಅವರು ಇಂದು ಕಬ್ಬನ್ ಪಾರ್ಕಿನಲ್ಲಿ ಸರ್ಕಾರಿ ಮತ್ಸ್ಯಾಲಯದ ಆಧುನೀಕರಣ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಇದನ್ನ ಮನಗಂಡು ನಮ್ಮ ಪ್ರಧಾನಿಗಳು ಮೀನುಗಾರಿಕೆಗೆ ಪ್ರತ್ಯೇಕ ಇಲಾಖೆಯನ್ನು ಮಾಡಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಜಾರಿ ಮಾಡಿದ್ದಾರೆ. ಇದಕ್ಕೆ ಅತಿಹೆಚ್ಚಿನ ಸಹಾಯಧನ ಅತಿ ಹೆಚ್ಚು ಜನರಿಗೆ ದೊರೆತಿದೆ. ಈ ಯೋಜನೆಯ ಸಂಪೂರ್ಣ ಲಾಭವನ್ನು ಮೀನುಗಾರಿಕೆ ಇಲಾಖೆ ಪಡೆದುಕೊಳ್ಳಬೇಕು ಎಂದರು.

ಲಾಲ್‍ಬಾಗ್ ಮತ್ತು ಮಂಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಅಕ್ವೇರಿಯಂ

ಕಬ್ಬನ್ ಪಾರ್ಕ್ ನಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣವಾಗಲಿರುವ ಅಕ್ವೇರಿಯಂ ಉತ್ತಮವಾಗಿ ಮೂಡಿಬರಬೇಕು. ಲಾಲ್‍ಬಾಗ್‍ನಲ್ಲಿ ಪಿಪಿಪಿ ಮಾದರಿಯಲಿ ಅಕ್ವೇರಿಯಂ ನಿರ್ಮಾಣ ಮಾಡಲು ಚಿಂತನೆ ನಡೆದಿದೆ ಹಾಗೂ ಇದೇ ಮಾದರಿಯ ಅಕ್ವೇರಿಯಂ ನ್ನು ಮಂಗಳೂರಿನ ಕಡಲತೀರದಲ್ಲಿ ನಿರ್ಮಿಸುವ ಉದ್ದೇಶವಿದೆ. ಸಿಂಗಪೂರ್, ದುಬೈ, ಯೂರೋಪ್‍ಗಳಲ್ಲಿರುವ ಟನಲ್ ಅಕ್ವೇರಿಯಂಗಳಂತೆ ಮಕ್ಕಳಿಗೆ ಹೆಚ್ಚಿನ ಆಕರ್ಷಣೆ ಉಂಟು ಮಾಡುವ ರೀತಿಯಲ್ಲಿ ನಿರ್ಮಾಣವಾಗಲಿದೆ ಎಂಬ ವಿಶ್ವಾಸವಿದೆ ಎಂದರು.

ಆಲಮಟ್ಟಿಯಲ್ಲಿ ಮೀನಿನ ಮರಿ ಸಾಕಾಣಿಕೆ ಕೇಂದ್ರ ಸ್ಥಾಪಿಸಲು ಮೀನುಗಾರಿಗೆ ಇಲಾಖೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದೇ ವರ್ಷದಲ್ಲಿ ಪ್ರಾರಂಭಿಸಲಾಗುವುದು ಎಂದರು.

ದುಡಿಯುವ ಸಂಸ್ಕತಿ

2021-2022 ನೇ ಸಾಲಿನಲ್ಲಿ ಒಂದು ಮಿಲಿಯನ್ ಟನ್ ಉತ್ಪಾದನೆಯನ್ನು ಮಾಡಿ ಉತ್ತಮೆ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದ ಮುಖ್ಯಮಂತ್ರಿಗಳು ಮೀನುಗಾರಿಕೆ ದೊಡ್ಡ ಉದ್ಯಮವಾಗಿ ಬೆಳೆಯಲು ಅವಕಾಶವಿದೆ. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು. ಮೀನುಗಾರಿಕೆ ವೃತಿಯಲ್ಲಿರುವವರಿಗೆ ಒಟ್ಟು 10 ಸಾವಿರ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗುತ್ತಿದೆ. ರೈತ ವಿದ್ಯಾ ನಿಧಿ ಯೋಜನೆಯನ್ನು ಮೀನುಗಾರರು ಹಾಗೂ ನೇಕಾರರ ಮಕ್ಕಳಿಗೂ ವಿಸ್ತರಿಸಲಾಗಿದೆ. ದುಡಿಯುವ ವರ್ಗದಿಂದಲೇ ದೊಡ್ಡ ಬದಲಾವಣೆ ತರಬಹುದು. ಆರ್ಥಿಕತೆ ಎಂದರೆ ಜನರ ಕ್ರಿಯಾಶೀಲತೆ. ದುಡಿಯುವ ವರ್ಗಕ್ಕೆ ಸಹಾಯ ಮಾಡಿದರೆ ಅವರ ಆದಾಯದ ಜೊತೆಗೆ ರಾಜ್ಯದ ಆದಾಯವೂ ಹೆಚ್ಚಾಗುತ್ತದೆ. ದುಡಿಯುವ ಸಂಸ್ಕತಿಯನ್ನು ಸರ್ಕಾರ ತರುತ್ತಿದೆ. ಉದ್ಯೋಗ ನೀತಿಯನ್ನು ರೂಪಿಸಲಾಗುತ್ತಿದೆ. ಹೆಚ್ಚಿನ ಉದ್ಯೋಗ ನೀಡುವ ಉದ್ಯಮಗಳಿಗೆ ವಿಶೇಷ ಪ್ರೋತ್ಸಾಹಕಗಳನ್ನು ನೀಡಲಾಗುತ್ತಿದೆ. ಆಮೂಲಾಗ್ರ ಬದಲಾವಣೆಯನ್ನು ಉದ್ಯೋಗ ಕ್ಷೇತ್ರದಲ್ಲಿ ತರಲಾಗುತ್ತಿದೆ. ವೈಜ್ಞಾನಿಕವಾಗಿ ಮೀನುಗಾರಿಕೆಯನ್ನು ಅಭಿವೃದ್ಧಿಗೊಳಿಸಿ ದೊಡ್ಡ ಪ್ರಮಾಣದಲ್ಲಿ ರಫ್ತು ಮಾಡುವ ಕನಸಿದೆ. ಅದನ್ನು ನನಸು ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆಯವ್ಯಯದಲ್ಲಿ ಮೀನುಗಾರಿಕೆಗೆ ಉತ್ತೇಜನ:
ಮೀನುಗಾರಿಕೆಯ ಉತ್ಪಾದನೆ, ಸಂಸ್ಕರಣೆ ಹಾಗೂ ರಫ್ತಿನ ಮೇಲೆ ಹೆಚ್ಚಿನ ಒತ್ತು ನೀಡಿ ಅದಕ್ಕೆ ತಕ್ಕಹಾಗೆ ಕಾರ್ಯಕ್ರಮಗಳನ್ನು ಹಾಗೂ ಹಣಕಾಸಿನ ವ್ಯವಸ್ಥೆಗಳನ್ನು ಜೋಡಿಸಿಕೊಳ್ಳಲಾಗುವುದು. ಈಗಾಗಲೇ ಆಯವ್ಯಯದಲ್ಲಿ ಒಳನಾಡು ಮೀನುಗಾರಿಕೆಗೆ ಪ್ರತಿಯೊಂದು ಗ್ರಾಮ ಪಂಚಾಯತಿಗೆ ಒಂದು ಕೆರೆಯನ್ನು ಮೀಸಲಿಟ್ಟು ಅಲ್ಲಿನ ಆದಾಯವನ್ನು ಪಂಚಾಯತಿಯ ಕಾರ್ಯಕ್ರಮಗಳಿಗೆ ಬಳಕೆ ಮಾಡಲಾಗುವುದು. ಸುಮಾರು 2500 ಪಂಚಾಯಿತಿಗಳಲ್ಲಿ ಮೀನುಗಾರಿಕೆ ಕೊಳಗಳನ್ನು ಇದೇ ವರ್ಷದಲ್ಲಿ ಪ್ರಾರಂಭ ಮಾಡಲಾಗುವುದು. ಸಮುದ್ರದಾಳದ ಮೀನುಗಾರಿಕೆಯಲ್ಲಿ ದೊಡ್ಡ ಬದಲಾವಣೆಯನ್ನು ತರಲಾಗುತ್ತಿದೆ. ಎಂಟು ಮೀನಿಗಾರಿಕೆ ಬಂದುರುಗಳ ಹೂಳು ತೆಗೆಸಿ ದೊಡ್ಡ ಸಾಮರ್ಥ್ಯದ ದೋಣಿಗಳು ಅಲ್ಲಿಗೆ ಬರುವಂತೆ ವ್ಯವಸ್ಥೆ ಮಾಡಿ, ಅವುಗಳ ನವೀಕರಣಕ್ಕಾಗಿ ಆಯವ್ಯಯದಲ್ಲಿ ಅನುದಾನ ಒದಗಿಸಲಾಗಿದೆ. ಸಮುದ್ರದಾಳದ ಮೀನುಗಾರಿಕೆಗೆ ವಿಶೇಷವಾದ 100 ಹೈಸ್ಪೀಡ್ ದೋಣಿಗಳನ್ನು ಈ ಬಾರಿಯ ಬಜೆಟ್‍ನಲ್ಲಿ ಮಂಜೂರು ಮಾಡಲಾಗಿದೆ. ಇದಕ್ಕೆ 150 ಅರ್ಜಿಗಳು ಈಗಾಗಲೇ ಸ್ವೀಕೃತವಾಗಿವೆ. ಇದೇ ತಿಂಗಳು ಅವುಗಳಿಗೆ ಮಂಜೂರಾತಿ ನೀಡಲು ಇಲಾಖೆ ನಿದೇರ್ಶಕರಿಗೆ ಸೂಚಿಸಿದ್ದೇನೆ ಎಂದರು. ಸಮುದ್ರದಾಳದ ಮೀನುಗಾರಿಕೆಯಲ್ಲಿ ದೊರೆತ ಮೀನುಗಳಿಗೆ ಸಂಸ್ಕರಣಾ ಘಟಕವನ್ನು ಸ್ಥಾಪಿಸಬಹುದು. ಕೆಲವು ದೊಡ್ಡ ಪ್ರಮಾಣದ ಸಂಸ್ಕರಣಾ ಘಟಕಗಳ ಮುಖ್ಯಸ್ಥರೊಂದಿಗೆ ಮಾತನಾಡಿದ್ದು, ನಮ್ಮ ಕಡಲು ತೀರದಲ್ಲಿಯೂ ಅತಿ ಹೆಚ್ಚು ರಫ್ತನ್ನು ಮೀನುಗಾರಿಕೆಯಲ್ಲಿ ಮುಂದಿನ ದಿನಗಳಲ್ಲಿ ಮಾಡಬೇಕು. ಈಗಾಗಲೇ 50ಕ್ಕಿಂತ ಹೆಚ್ಚು ರೈತ ಉತ್ಪಾದಕರ ಸಂಘಗಳ ರಚನೆಯಾಗಿದ್ದು, ಅವುಗಳಿಗೆ ಹೆಚ್ಚಿನ ಇತ್ತು ನೀಡಿ, ಅವುಗಳ ಮುಖಾಂತರ ಮೀನುಗಾರರಿಗೆ ಅಗತ್ಯವಿರುವ ಸವಲತ್ತುಗಳನ್ನು ನೀಡುವ ಕೆಲಸ ಮಾಡಬಹುದು. ಸಂಪೂರ್ಣ ಹವಾನಿಯಂತ್ರಿತ ವಾಹನಗಳನ್ನು ಅಲ್ಲಲ್ಲಿ ಮರುಕಟ್ಟೆ ವ್ಯವಸ್ಥೆಯನ್ನು ಮಾಡುವ ಯೋಜನೆಗೆ ಶೀಘ್ರವಾಗಿ ಮಂಜೂರಾತಿಯನ್ನು ನೀಡಲಾಗುವುದು ಎಂದರು.

ಮೀನುಗಾರಿಕೆಗೆ ವಿಫುಲ ಅವಕಾಶ:

ಕರ್ನಾಟಕದಲ್ಲಿ ಮೀನುಗಾರಿಕೆಯಲ್ಲಿ ವಿಫುಲ ಅವಕಾಶಗಳಿದೆ. ಒಳನಾಡು ಮೀನುಗಾರಿಕೆಗೆ ಸ್ಪಷ್ಟ ನೀತಿ ಇಲ್ಲ. ಕರಾವಳಿ ಮೀನುಗಾರಿಕೆಗೂ, ಒಳನಾಡು ಮೀನುಗಾರಿಕೆಗೆ ವ್ಯತ್ಯಾಸಗಳಿವೆ. ಒಳನಾಡು ಮೀನುಗಾರಿಕೆಗೆ ಮಹತ್ವ ನೀಡಿ, ಮೀನು ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ಸ್ಥಳೀಯ ಉತ್ಪಾದನೆಗೊಂಡು ಸ್ಥಳೀಯರಿಗೆ ಲಾಭ ಸಿಗಬೇಕಿರುವುದು ಮುಖ್ಯ. ಮೀನುಗಾರಿಕೆಯೂ ಕೃಷಿಯಿದ್ದಂತೆ, ಸಮಗ್ರ ಕೃಷಿಯಲ್ಲಿ ಮೀನುಗಾರಿಕೆ, ಹೈನುಗಾರಿಕೆ, ಕುರಿ ಮತ್ತು ಹಂದಿ ಸಾಕಾಣಿಕೆ, ಆಹಾರ ಸಂಸ್ಕರಣೆ, ಮಾರುಕಟ್ಟೆ ಸೇರಿದಂತೆ ಎಲ್ಲವೂ ಒಳಗೊಂಡಿರುತ್ತದೆ. ಈ ಎಲ್ಲ ಅಂಶಗಳನ್ನು ಜೋಡಿಸುವ ಮೂಲಕ ಮೀನುಗಾರಿಕೆ ವಲಯ ಹಾಗೂ ಮೀನುಗಾರರ ಅಭಿವೃದ್ಧಿ ಗೆ ಮೀನುಗಾರಿಕೆ ಇಲಾಖೆ ಗಮನಹರಿಸಬೇಕು. ರಾಜ್ಯದಲ್ಲಿ 330 ಕಿ.ಮೀ. ಕರಾವಳಿ ಪ್ರದೇಶವಿದ್ದು, ಮೀನುಗಾರಿಕೆ ಹೆಚ್ಚಿಸಿ, ಸಂಸ್ಕರಿಸಿ, ಮೀನು ರಫ್ತಿಗೆ ವಿಫುಲ ಅವಕಾಶಗಳಿವೆ. ಬರುವ ದಿನಗಳಲ್ಲಿ ಮೀನುಗಾರಿಕೆ ಉತ್ಪಾದನೆ, ಸಂಸ್ಕರಣೆ ಹಾಗೂ ರಫ್ತಿಗೆ ಒತ್ತು ನೀಡುವ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಮೀನುಗಾರಿಕೆಯಿಂದ ರಾಜ್ಯದ ಒಟ್ಟು ಜಿಡಿಪಿಯಲ್ಲಿ ವೃದ್ಧಿ : ಬೊಮ್ಮಾಯಿ

Next Post

ವರುಷ ಎಂಟು; ಅವಾಂತರ ನೂರೆಂಟು ಸುಳ್ಳು ಎಂದು ಸಾಬೀತುಪಡಿಸಿ: ಪ್ರಹ್ಲಾದ್ ಜೋಷಿಗೆ ಸಿದ್ದರಾಮಯ್ಯ ಸವಾಲು

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ರಾಜ್ಯದಲ್ಲಿ 150 ಸ್ಥಾನ ಗೆಲ್ಲುವುದು ನಮ್ಮ ಗುರಿ: ಸಿದ್ದರಾಮಯ್ಯ

ವರುಷ ಎಂಟು; ಅವಾಂತರ ನೂರೆಂಟು ಸುಳ್ಳು ಎಂದು ಸಾಬೀತುಪಡಿಸಿ: ಪ್ರಹ್ಲಾದ್ ಜೋಷಿಗೆ ಸಿದ್ದರಾಮಯ್ಯ ಸವಾಲು

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada