• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ ಐದು ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ’ -ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 15, 2024
in Top Story, ಅಂಕಣ, ಇತರೆ / Others, ಕರ್ನಾಟಕ
0
‘ ಐದು ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ’ -ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ ಮೂಲ ಆದಾಯ (ಯುನಿವರ್ಸಲ್ ಬೇಸಿಕ್ ಇನ್‌ಕಮ್) Universal Basic Income,ಪರಿಕಲ್ಪನೆಯನ್ನು ಅತಿದೊಡ್ಡ ಪ್ರಮಾಣದಲ್ಲಿ ಸಾಕಾರಗೊಳಿಸುತ್ತಿರುವ ರಾಜ್ಯ ಕರ್ನಾಟಕ ಎಂಬುದು ಹೆಮ್ಮೆಯ ವಿಷಯವಾಗಿದೆ.ಈ ಯೋಜನೆಗಳು ಮುಂದುವರಿಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Chief Minister Siddaramaiah)ಹೇಳಿದರು.

ADVERTISEMENT

ಇಲ್ಲಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕರ್ನಾಟಕ ಸರ್ಕಾರ, ಬೃಹತ್ ಬೆಂಗಳೂರು ಮಹಾನಗರಪಾಲಿಕೆ,ಬೆಂಗಳೂರು ನಗರ ಜಿಲ್ಲಾಡಳಿತ ಸಹಯೋಗದಲ್ಲಿ ಆಯೋಜಿಸಲಾಗಿದ್ದ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ,ಗೌರವ ರಕ್ಷೆ ಸ್ವೀಕರಿಸಿ ಅವರು ಮಾತನಾಡಿದರು,

ಗೃಹಲಕ್ಷ್ಮಿ,ಶಕ್ತಿ,ಗೃಹಜ್ಯೋತಿ,ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿಯುತ್ತಿರುವವರಿಗೆ ರಾಜ್ಯದಲ್ಲಿ ಆರ್ಥಿಕ ಪ್ರಗತಿ ಪ್ರಗತಿ ಸಾಧಿಸಿ ತೋರಿಸುವ ಮೂಲಕ ನಾವು ಉತ್ತರ ನೀಡಲಿದ್ದೇವೆ.

ಹೊಸ ಅವಿಷ್ಕಾರಗಳನ್ನು ನಡೆಸಿ ಅವು ಫಲಾನುಭವಿಗಳಿಗೆ ಇನ್ನಷ್ಟು ಹೆಚ್ಚು ನೆರವಾಗುವ ರೀತಿಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಉದ್ಯುಕ್ತವಾಗಿದೆ ಎಂದರು.

ಶಕ್ತಿ ಯೋಜನೆಯಡಿ ಮಹಿಳೆಯರು 270 ಕೋಟಿ ಟ್ರಿಪ್ ಉಚಿತ ಪ್ರಯಾಣ ಸೌಲಭ್ಯ ಪಡೆದಿದ್ದಾರೆ. ಮಹಿಳೆಯರು 6541 ಕೋಟಿ ರೂ.ಗಳಷ್ಟು ಪ್ರಯಾಣ ವೆಚ್ಚ ಉಳಿತಾಯ ಮಾಡಿದ್ದಾರೆ. ಅನ್ನ ಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರದ ಅಸಹಕಾರದಿಂದಾಗಿ ಅಕ್ಕಿಯ ಬದಲಿಗೆ ನಗದು ವರ್ಗಾವಣೆ ಮಾಡಲಾಗುತ್ತಿದೆ. ನಮ್ಮ ಸರ್ಕಾರದ ಜನಕಲ್ಯಾಣ ಯೋಜನೆಗಳು ಐದು ಗ್ಯಾರಂಟಿಗಳಿಗಷ್ಟೇ ಸೀಮಿತವಾಗಿಲ್ಲ,ದುರ್ಬಲ ವರ್ಗದವರಿಗೆ ಸಾಮಾಜಿಕ ಭದ್ರತೆ ನೀಡುವ ವಿವಿಧ ಯೋಜನೆಗಳಡಿ 13,027 ಕೋಟಿ ರೂ.ವೆಚ್ಚ ಮಾಡಲಾಗಿದೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಮುಂಗಾರು ಹಂಗಾಮುಗಳಲ್ಲಿ ರಾಜ್ಯ ಸಂಪೂರ್ಣ ವಿಭಿನ್ನ ಪರಿಸ್ಥಿತಿಯನ್ನು ಎದುರಿಸಿದೆ.

ಕಳೆದ ವರ್ಷ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೆ,ಈ ಬಾರಿ ಅತಿವೃಷ್ಟಿಗೆ ಒಳಗಾಗಿದೆ.ಕೇಂದ್ರ ಸರ್ಕಾರ ಬರಪರಿಹಾರ ಮೊತ್ತವನ್ನು ತಡವಾಗಿ ನೀಡಿದರೂ ಸಹ ರಾಜ್ಯದಲ್ಲಿ ಬರದಿಂದ ಜನರಿಗೆ ಹೆಚ್ಚು ಅನಾನುಕೂಲಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಲಾಯಿತು.ಪ್ರಸಕ್ತ ಸಾಲಿನಲ್ಲಿ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ.

ಜೀವಹಾನಿ,ಜಾನುವಾರುಗಳ ಸಾವು ಹಾಗೂ ಮನೆ ಹಾನಿಗಳಿಗೆ ತ್ವರಿತವಾಗಿ ಪರಿಹಾರ ಒದಗಿಸುವಂತೆ ಸೂಚಿಸಲಾಗಿದೆ.ಮನೆ ಕಳೆದುಕೊಂಡವರಿಗೆ 1.2 ಲಕ್ಷ ರೂ.ಪರಿಹಾರದೊಂದಿಗೆ ಮನೆ ಹಂಚಿಕೆ ಮಾಡಲು ಕ್ರಮವಹಿಸಲಾಗಿದೆ.ಅಭಿವೃದ್ಧಿ ಮತ್ತು ಪರಿಸರದ ನಡುವೆ ಸಮತೋಲನ ಸಾಧಿಸುವುದು ಅತ್ಯಗತ್ಯ ಎಂಬ ಪ್ರಕೃತಿಯ ಎಚ್ಚರಿಕೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.

Tags: 78 Independence DayCM Siddaramaiah‌Congress PartyDCM DK ShivakumarFive guarantee schemes
Previous Post

ಯಾವುದೇ ಕಾರಣಕ್ಕೂ ಗ್ಯಾರೆಂಟಿ ಯೋಜನೆ ನಿಲ್ಲಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ !

Next Post

ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್:‌ ಆ.17ರಂದು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post

ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್:‌ ಆ.17ರಂದು 'ವಿಶೇಷ ಸಾಂದರ್ಭಿಕ ರಜೆ' ಮಂಜೂರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada