• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
June 15, 2026
in Top Story, ಕರ್ನಾಟಕ, ರಾಜಕೀಯ
0
ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬದಲಾಗುತ್ತಿದ್ದಂತೆ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಕೆಲ ಪರಿಷ್ಕರಣೆಗಳನ್ನು ಮಾಡಲಾಗುತ್ತಿದೆ. ಈ ನಡುವೆ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎನ್ನುವ ಗಾಳಿ ಸುದ್ದಿಗಳು ಹರಿದಾಡುತ್ತಿದ್ದು, ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ADVERTISEMENT
DK Shivakumar on MLA Iqbal Hussain: ಶಾಸಕ ಇಕ್ಬಾಲ್‌ ಹುಸೇನ್‌ ಆರೋಗ್ಯವಾಗವ್ರೆ, ಗಾಬರಿ ಪಡಬೇಡಿ.! #pratidhvani

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ, ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ, ಅದರ ನಂತರವೂ ಅದು ಮುಂದುವರಿಯಲಿದೆ. ಯೋಜನೆಗಳ ಅನುಷ್ಠಾನದಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸುವ ಕೆಲಸ ಪ್ರಾರಂಭದಿಂದಲೇ ನಡೆಯುತ್ತಾ ಬಂದಿದೆ, ಈಗಲೂ ಮುಂದುವರೆದಿದೆ. ಈ ಯೋಜನೆಗಳ ಫಲಾನುಭವಿಗಳು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಟ್ಟು ಆತಂಕಕ್ಕೆ ಈಡಾಗಬೇಕಾಗಿಲ್ಲ ಎಂದಿದ್ದಾರೆ.

ಬಿಜೆಪಿ ಮೂಲತ: ಬಡವರ ವಿರೋಧಿ ಪಕ್ಷ.‌ ಅದು ಗ್ಯಾರಂಟಿ ಯೋಜನೆಗಳನ್ನು ಮೊದಲ ದಿನದಿಂದಲೇ ವಿರೋಧಿಸುತ್ತಾ ಬಂದಿದೆ. ಮೊದಲು ಗ್ಯಾರಂಟಿ ಯೋಜನೆಗಳ ಜಾರಿಯೇ ಅಸಾಧ್ಯ ಎಂದರು, ನಂತರದ ದಿನಗಳಲ್ಲಿ ಹಣಕಾಸಿನ ಕೊರತೆಯಿಂದ ಸರ್ಕಾರ ದಿವಾಳಿಯಾಗಲಿದೆ ಎಂದರು. ಈಗ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎನ್ನುವ ಪುಕಾರು ಹಬ್ಬಿಸುತ್ತಿದ್ದಾರೆ. ಇದು ಅವರ ರಾಜಕೀಯ ಹತಾಶೆಯ ಪ್ರತೀಕ.

Nirmala Sitharaman : ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಏನೆಲ್ಲಾ ಕೊಟ್ಟಿದೆ..? ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು..?

ಮುಖ್ಯಮಂತ್ರಿಯಾಗಿ ಐದು ಯೋಜನೆಗಳನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೆ ತಂದಿದ್ದಲ್ಲದೆ, ಇದರಿಂದಾಗಿ ರಾಜ್ಯದ ಆರ್ಥಿಕತೆ ಮೇಲೆ ಏನೂ ದುಷ್ಪರಿಣಾಮ ಬೀರದಂತೆ ನೋಡಿಕೊಂಡಿದ್ದೇನೆ. ಇಂದು ಕರ್ನಾಟಕ ರಾಜ್ಯವು ತಲಾವಾರು ಆದಾಯದಲ್ಲಿ ದೇಶಕ್ಕೇ ಮೊದಲನೇ ಸ್ಥಾನದಲ್ಲಿದೆ, ಜಿಎಸ್‌ಟಿ ಸಂಗ್ರಹದಲ್ಲಿ ಮಹಾರಾಷ್ಟ್ರದ ನಂತರದ ಎರಡನೇ ರಾಜ್ಯ ಕರ್ನಾಟಕ. ಖಜಾನೆ ಖಾಲಿಯಾಗಿದ್ದರೆ, ಸರ್ಕಾರ ದಿವಾಳಿ ಸ್ಥಿತಿಯಲ್ಲಿದ್ದರೆ ಈ ಸಾಧನೆ ಸಾಧ‍್ಯವೇ?

Kumaraswamy on DkShivakumar: ಸಿಎಂ ಡಿಕೆಶಿವಕುಮಾರ್ ಬಗ್ಗೆ ಕುಮಾರಣ್ಣ ಶಾಕಿಂಗ್ ಸ್ಟೇಟ್​ಮೆಂಟ್ #pratidhvani

ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಬಂದಿರುವ ಬಿಜೆಪಿ, ಅದೇ ಯೋಜನೆಗಳನ್ನು ಮಧ್ಯಪ್ರದೇಶ, ಬಿಹಾರ, ಪಶ್ಚಿಮಬಂಗಾಳ ರಾಜ್ಯಗಳಲ್ಲಿ ನಕಲು ಹೊಡೆದು ಅಧಿಕಾರಕ್ಕೆ ಬಂದಿದೆ. ಇವರಿಗೆ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಯಾವ ನೈತಿಕತೆ ಇದೆ? ಕೆಲವು ರಾಜ್ಯಗಳ ಚುನಾವಣಾ ಪೂರ್ವದಲ್ಲಿ ಬಿಜೆಪಿ ಗ್ಯಾರಂಟಿ ಯೋಜನೆಗಳ ಆಶ್ವಾಸನೆ ನೀಡಿದರೂ ಅವುಗಳನ್ನು ಸಂಪೂರ್ಣವಾಗಿ ಜಾರಿಗೆ ತರಲು ಸಾಧ್ಯವಾಗುತ್ತಿಲ್ಲ.

DK Shivakumar: ಗೃಹಲಕ್ಷ್ಮಿಯರ ಫೋನ್ ನಂಬರ್‌ಗೆ ಟ್ರೈ ಮಾಡಿದ್ರೆ ಯಾರಿಗೋ ಕಾಲ್‌ ಹೋಗ್ತಿದೆ #pratidhvani

ಈ ಯೋಜನೆಗಳು ನಿಜವಾದ ಅರ್ಹರಿಗೆ ಸಿಗಬೇಕು, ಅದು ಅನರ್ಹರ ಪಾಲಾದಾಗ ಅದನ್ನು ತಡೆಗಟ್ಟುವುದು ಚುನಾಯಿತ ಸರ್ಕಾರದ ಕರ್ತವ್ಯವಾಗಿದೆ. ನಮ್ಮ ಜನರು ಕೂಡಾ ಈ ಬಗ್ಗೆ ಯೋಚನೆ ಮಾಡಬೇಕಾಗಿದೆ. ದುರಾಸೆಗೆ ಬಲಿಬಿದ್ದು ಸರ್ಕಾರಕ್ಕೆ ಮೋಸ ಮಾಡಿ ಗ್ಯಾರಂಟಿ ಯೋಜನೆಗಳ ಲಾಭ ತೆಗೆದುಕೊಳ್ಳುವುದು ಕಾನೂನಿನ ಉಲ್ಲಂಘನೆ ಮಾತ್ರವಲ್ಲ, ರಾಜ್ಯದ ಜನತೆಗೆ ಬಗೆವ ದ್ರೋಹವಾಗಿದೆ. ಇಂತಹ ವಿಷಯದಲ್ಲಿ ವಿರೋಧ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಅಪಪ್ರಚಾರ ಮಾಡಲು ಹೋಗದೆ, ಅರ್ಹರಿಗೆ ಯೋಜನೆಗಳನ್ನು ತಲುಪಿಸಲು ಸರ್ಕಾರಕ್ಕೆ ನೆರವಾಗಬೇಕು ಎಂದು ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Previous Post

ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಭರವಸೆ

Next Post

RSS ಅಸ್ತಿತ್ವ ಮತ್ತು ಕಾರ್ಯವೈಖರಿ: ಮೋಹನ್‌ ಭಾಗವತ್‌ಗೆ ಪ್ರಿಯಾಂಕ್ ಖರ್ಗೆ ಬಹಿರಂಗ ಪತ್ರ

Related Posts

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
Top Story

ಜಮೀರ್ ಪ್ರಕರಣದಲ್ಲಿ ರಾಜ್ಯಪಾಲರ ಮಹತ್ವದ ನಡೆ; ತಾಂತ್ರಿಕ ಲೋಪ ಉಲ್ಲೇಖಿಸಿ ಕಡತ ವಾಪಸ್

by ಪ್ರತಿಧ್ವನಿ
July 14, 2026
0

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ಮುಂದುವರಿಸಲು ಹಾಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ...

Read moreDetails
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

LPG ಗ್ರಾಹಕರಿಗೆ ಹೊಸ ನಿಯಮಗಳು ಜಾರಿ: ಸಿಲಿಂಡರ್ ಬುಕ್ಕಿಂಗ್‌ನಿಂದ ಕನೆಕ್ಷನ್ ರದ್ದತಿವರೆಗೆ ಮಹತ್ವದ ಬದಲಾವಣೆ

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ?ಕುವೆಂಪು ನಾಡಗೀತೆಗೆ ಹೊಸ ರೂಪ? 

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

July 14, 2026
AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

July 14, 2026
Next Post
RSS ಅಸ್ತಿತ್ವ ಮತ್ತು ಕಾರ್ಯವೈಖರಿ: ಮೋಹನ್‌ ಭಾಗವತ್‌ಗೆ ಪ್ರಿಯಾಂಕ್ ಖರ್ಗೆ ಬಹಿರಂಗ ಪತ್ರ

RSS ಅಸ್ತಿತ್ವ ಮತ್ತು ಕಾರ್ಯವೈಖರಿ: ಮೋಹನ್‌ ಭಾಗವತ್‌ಗೆ ಪ್ರಿಯಾಂಕ್ ಖರ್ಗೆ ಬಹಿರಂಗ ಪತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada