Bengalore: ಮೇ.30 : ಜೂನ್ 1ಕ್ಕೆ ಸಿಎಂ ಸಿದ್ದರಾಮಯ್ಯ (cmsiddaramaiah) ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ (cabinetmeeting) ನಡೆಯಲಿದೆ. ಸಚಿವರಿಗೆ ಖಾತೆಗಳ ಹಂಚಿಕೆ ಮಾಡಿದ ಬಳಿಕ ನಡೆಯುತ್ತಿರುವ ಮೊದಲ ಸಚಿವ ಸಂಪುಟ ಸಭೆ ಇದಾಗಿದ್ದು, ವಿಧಾನಸೌಧ ಸಮ್ಮೇಳನ ಸಭಾಂಗಣದ ಕೊಠಡಿ ಸಂಖ್ಯೆ 334ರಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಮಧ್ಯಾಹ್ನ 12ಗಂಟೆಗೆ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕಾಂಗ್ರೆಸ್ ನ 5 ಗ್ಯಾರಂಟಿ (Congress Guarantees) ಯೋಜನೆಗಳ ಜಾರಿ ಸಂಬಂಧ ಚರ್ಚೆ ನಡೆಯಲಿದೆ.


ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರು (New Ministers) ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಸಂಪುಟ ಸಭೆ ಬಳಿಕ ಘೋಷಣೆಯಾಗುತ್ತಾ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು?