ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ನೀರನ್ನು ಭಾರೀ ಪ್ರಮಾಣದಲ್ಲಿ ಹೊರಗೆ ಬಿಡುತ್ತಿರುವುದರಿಂದ ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗುತ್ತಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯ ಭರ್ತಿಯಾಗಲು ಕೇವಲ ಅಡಿ ಅಡಿ ಮಾತ್ರ ಬಾಕಿ ಇದ್ದು, 72,964 ಕ್ಯೂಸೆಕ್ ನೀರನ್ನ ಡ್ಯಾಂನಿಂದ ಹೊರಕ್ಕೆ ಬಿಡಲಾಗಿದೆ.
ನೀರು ರಿಲೀಸ್ ಮಾಡಿದ ಹಿನ್ನೆಲೆ ಕಾವೇರಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ನದಿ ತೀರದ ಜಮೀನುಗಳು ಜಲಾವೃತವಾಗಿವೆ. ಇನ್ನು ನದಿಬಳಿ ಪ್ರವಾಸಿಗರು ತೆರಳದಂತೆ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ನಿಮಿಷಾಂಬ ದೇಗುಲ, ಸ್ನಾನಘಟ್ಟದ ಬಳಿ ಬ್ಯಾರಿಕೇಡ್ ಅಳವಡಿಸಲಾಗಿದೆ.
ಕೃಷ್ಣರಾಜಸಾಗರದ ಅಣೆಕಟ್ಟು ಡ್ಯಾಮಿನಿಂದ 75000 ಕ್ಯೂಸೆಕ್ ಹಾಗೂ ಕಬಿನಿ ಜಲಾಶಯದಿಂದ 30. 30 ಕ್ಯೂಸೆಕ್ಸ್ ನೀರನ್ನು ಹೊರ ಬಿಡುತ್ತಿದ್ದು, ಚಾಮರಾಜನಗರದ ಶಿವನಸಮುದ್ರದ ಭರಚುಕ್ಕಿ ಮತ್ತು ಮಂಡ್ಯ ಜಿಲ್ಲೆಯ ಗಗನಚುಕ್ಕಿಯಲ್ಲಿ ಇಂದು ಪ್ರವಾಹ ತುಂಬಿಬಂದಿದ್ದು ಪ್ರವಾಸಿಗರಿಗೆ ಆಕರ್ಷಿಸುತ್ತಿದೆ.

ರಾಜ್ಯದಲ್ಲೇಮೊದಲು ತುಂಬುವ ಜಲಾಶಯ ಎಂ ಹೆಗ್ಗಳಿಕೆ ಹೊಂದಿರುವ ಕಬಿನಿ ಜಲಾಶಯ ಸಂಪೂರ್ಣ ಭರ್ತಿ ಯಾಗಿದೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಕಬಿನಿಯಲ್ಲಿರುವ ಜಲಾಶಯ ಭರ್ತಿಯಾಗಿದೆ. ಜಲಾಶಯದ ಹಿತ ದೃಷ್ಠಿಯಿಂದ 30 ಸಾವಿರ ಕ್ಯೂಸೆಕ್ಸ್ ನೀರನ್ನ ನದಿಗೆ ಬಿಡಲಾಗಿದೆ.ಇದರಿಂದಾಗಿ ತಗ್ಗು ಪ್ರದೇಶದ ಜನರು ಪರದಾಡುವ ದುಸ್ಥಿತಿ ಎದುರಾಗಿದೆ. ನಂಜನಗೂಡು, ಸುತ್ತೂರು ಸೇರಿ ಹಲವಡೆ ಮುಳುಗಡೆಯ ಭೀತಿ ಎರದುರಾಗಿದೆ.











