• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Priyanka Kharge: ಮಹಾರಾಷ್ಟ್ರ ದಲ್ಲಿ ಸುರಿದ ಮಳೆಯಿಂದ ಭೀಮಾ‌ನದಿ ತೀರದಲ್ಲಿ ಪ್ರವಾಹ ಸ್ಥಿತಿ..!!

ಪ್ರತಿಧ್ವನಿ by ಪ್ರತಿಧ್ವನಿ
September 26, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕಲಬುರಗಿ. ಜಿಲ್ಲೆ ಸೇರಿದಂತೆ ಮಹಾರಾಷ್ಟ್ರ ದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಭೀಮಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹವಾಗಿದೆ. ಮಹಾರಾಷ್ಟ್ರದಲ್ಲಿ ರೆಡ್ ಅಲರ್ಟ್ ಹಾಗೂ ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಲಾಗಿದೆ. ಪ್ರವಾಹ ಪರಿಹಾರ ಸಮೋರಾಪದಿಯಲ್ಲಿ ನಡೆಯುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ADVERTISEMENT

ಪ್ರವಾಹ ಪೀಡಿತ ಅಫಜಲ್‌ಪುರ ತಾಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿ ಹಾನಿಗೊಳಗಾದ ಪ್ರದೇಶ ಹಾಗೂ ಬೆಳೆ ಹಾನಿ ಜಮೀನುಗಳ ಪರಿಶೀಲನೆ ನಡೆಸಿದ ನಂತರ ಕಲಬುರಗಿ ಯ ಜಿಲ್ಲಾಧಿಕಾರಿ‌ ಕಚೇರಿ‌ಸಭಾಂಗಣದಲ್ಲಿ ನಡೆದ‌ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ವಾಡಿಕೆಗಿಂತ ಹೆಚ್ಚು ಮಳೆ:
ಜಿಲ್ಲೆಯಲ್ಲಿ ಜನೇವರಿ 2025 ರಿಂದ ಸೆಪ್ಟೆಂಬರ್ 25.ರವೆಗಿನ ವಾಡಿಕೆ ಮಳೆ 614 ಮಿಮಿ ಇದ್ದು 901 ಮಿಮಿ (ಶೇ 47%) ಹೆಚ್ಚುವರಿ ಮಳೆಯಾಗಿದೆ. ಅಗಷ್ಟ್ ತಿಂಗಳ ವಾಡಿಕೆ 156 ಮಿಮಿ ಇದ್ದು 263 ಮಿಮಿ ( ಶೇ 69%) ಹೆಚ್ಚುವರಿಯಾಗಿದೆ. ಸೆಪ್ಟೆಂಬರ್ 1 ರಿಂದ 25 ರವರೆಗೆ ವಾಡಿಕೆ ಮಳೆ 145 ಮಿಮಿ ಇದ್ದು 202 ಮಿಮಿ (39% ) ಹೆಚ್ಚುವರಿ ಯಾಗಿದೆ. ಕಳೆದ ಒಂದು ವಾರದಿಂದ ವಾಡಿಕೆ ಮಳೆ 47 ಮಿಮಿ ಇದ್ದು 88 ಮಿಮಿ ಮಳೆಯಾಗಿದ್ದು, 85% ಹೆಚ್ಚುವರಿಯಾಗಿದೆ. ಇದರಿಂದಾಗಿ ತೊಗರಿ, ಉದ್ದು, ಹತ್ತಿ, ಹೆಸರು ಸೇರಿದಂತೆ ಪ್ರಮುಖ ಬೆಳೆಗಳು ಹಾನಿಯಾಗಿವೆ ಎಂದರು.

ಪುನರ್ ವಸತಿ ಬೇಡಿಕೆ ಪರಿಶೀಲನೆ:
ಇನ್ನು ಮುಂದಿನ ಮೂರು‌ದಿನಗಳ‌ ಕಾಲ ಜಿಲ್ಲೆಯಲ್ಲಿ ಮಳೆ ಮುಂದುವರೆಯಲಿದ್ದು ನದಿ ಪಾತ್ರದ ಜನರು ಯಾವುದೇ ಕಾರಣಕ್ಕೂ ನದಿಗೆ ಇಳಿಯಬಾರದು ಎಂದು ಮನವಿ‌ ಮಾಡಿದ ಸಚಿವರು, ನದಿ ಪಾತ್ರದ‌ ಕೆಲವು ಕಡೆ ಜನರು ಪುನರ್ ವಸತಿಗಾಗಿ ಆಗ್ರಹಿಸಿದ್ದಾರೆ. ಯಾವ ಗ್ರಾಮದ ಜನರು ಪುನರ್ ವಸತಿ ಬಯಸಿದ್ದಾರೆ ಅವರು ಜಿಲ್ಲಾಡಳಿತಕ್ಕೆ ವಿವರ ಒದಗಿಸಿದರೆ ಆ ಬಗ್ಗೆಯೂ ಕೂಡಾ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಚಿವರು‌ ಭರವಸೆ ನೀಡಿದರು.

3.45 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ:
ಮಹಾರಾಷ್ಟ್ರದ ಉಜ್ಜನಿ ಜಲಾಶಯದಿಂದ 45,000 ಕ್ಯೂಸೆಕ್ಸ್, ಸಿನಾ ಜಲಾಶಯದಿಂದ 2,70,000 ಕ್ಯೂಸೆಕ್ಸ್, ವಿರಾ ಜಲಾಶಯದಿಂದ 30,000 ಕ್ಯೂಸೆಕ್ಸ್ ಹಾಗೂ ಭೋರಿ ಹಳ್ಳದಿಂದ 5,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ್ದರಿಂದ ಭೀಮಾ ನದಿಗೆ 3,50,000 ಕ್ಯೂಸೆಕ್ಸ್ ನೀರು ಹರಿದು ಬಂದಿದೆ. ಅಫಜಲ್ ಪುರ ತಾಲೂಕಿನ ಸೊನ್ನ ಬ್ಯಾರೇಜ್‌ನಿಂದ 3.45 ಲಕ್ಷ ಕ್ಯೂಸೆಕ್ಸ್ ನೀರು ಭೀಮಾ ನದಿಗೆ ಬಿಡಲಾಗಿದೆ ಹಾಗಾಗಿ ನದಿ ಪಾತ್ರದಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಕಾಳಜಿ ಕೇಂದ್ರಗಳ ಸ್ಥಾಪನೆ:
ಜಿಲ್ಲೆಯಲ್ಲಿ ಒಟ್ಟು 36 ಗ್ರಾಮಗಳು ಪ್ರವಾಹ ಪೀಡಿತವಾಗಿವೆ.‌ಇವುಗಳಲ್ಲಿ ಅಫಜಲ್‌ಪುರ ತಾಲೂಕಿನ 17, ಜೇವರ್ಗಿ ತಾಲೂಕಿನ 8 ಹಾಗೂ ಕಲಬುರಗಿ ಮತ್ತು ಚಿತ್ತಾಪುರ ತಾಲೂಕಿನಲ್ಲಿ ತಲಾ 5 ಗ್ರಾಮಗಳು ಸೇರಿವೆ. ಜಿಲ್ಲೆಯಲ್ಲಿ 31 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ಅಫಜಲ್‌ಪುರ ತಾಲೂಕಿನ 17, ಜೇವರ್ಗಿ ತಾಲೂಕಿನ 8 ಹಾಗೂ ಕಲಬುರಗಿ ಮತ್ತು ಚಿತ್ತಾಪುರ ತಾಲೂಕಿನಲ್ಲಿ ತಲಾ 5 ಗ್ರಾಮಗಳು ಸೇರಿವೆ.

ಜಿಲ್ಲೆಯಲ್ಲಿ ಒಟ್ಟು 12 ಕಾಳಜಿ ಕೇಂದ್ರಗಳನ್ನು ತೆಗೆಯಲಾಗಿದೆ. ಅಫಜಲ್‌ಪುರ ತಾಲೂಕಿನ 3 ಜೇವರ್ಗಿ ತಾಲೂಕಿನ 8 ಹಾಗೂ ಕಲಬುರಗಿ ತಾಲೂಕಿನಲ್ಲಿ‌ 1 ತೆರೆಯಲಾಗಿದೆ. ಒಟ್ಟು 1436 ಜನರಿಗೆ ಈ‌ ಕಾಳಜಿ ಕೇಂದ್ರಗಳಲ್ಲಿ ವಾಸಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಿಯಾಂಕ್ ವಿವರಿಸಿದರು‌.

ಆಹಾರ ಪದಾರ್ಥ ಗಳ ಕಿಟ್ ವಿತರಣೆ:
ಮಳೆ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಗ್ರಾಮಗಳ ಜನರಿಗೆ ಸುಮಾರು 2500 ಆಹಾರ‌ ಸಾಮಗ್ರಿಗಳ ಕಿಟ್ ನ್ನು ಕಲಬುರಗಿ ‌ಸಂಸದರಾದ ರಾಧಾಕೃಷ್ಣ ದೊಡ್ಡಮನಿ ಅವರು ಜಿಲ್ಲಾಡಳಿತದ ಮೂಲಕ ವಿತರಿಸಲಾಗುತ್ತಿದೆ.

ಪರಿಹಾರ ತಂಡ ನಿಯೋಜನೆ:
ಪ್ರವಾಹ ಸಂದರ್ಭದಲ್ಲಿ ರಕ್ಷಣೆ ಕಾರ್ಯ ಕೈಗೊಳ್ಳಲು 20 ಅಧಿಕಾರಿಗಳ ಒಳಗೊಂಡ ಪರಿಣಿತ 1 ಎನ್ ಡಿ ಆರ್ ಎಫ್ ತಂಡವನ್ನು ದೇವಲಗಾಣಗಾಪುರಲ್ಲಿ ಇರಿಸಲಾಗಿದೆ. ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಕಂದಾಯ ಇಲಾಖೆ ಸೇರಿದಂತೆ ಇತರೆ ಇಲಾಖೆ ಗಳ ಅಧಿಕಾರಿಗಳನ್ನು ಸೇವೆಗೆ ನಿಯೋಜಿಸಲಾಗಿದೆ ಎಂದರು.

ಜಂಟಿ‌ ಸಮೀಕ್ಷೆ
ಮಳೆಯಿಂದ ಜಿಲ್ಲೆಯಲ್ಲಿ ಮೇಲ್ಮೋಟದ ಅಂದಾಜಿನಂತೆ 1.05 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಬೆಳೆ ಹಾನಿಯಾಗಿದೆ. ಕೃಷಿ, ಕಂದಾಯ, ತೋಟಗಾರಿಕೆ ಸೇರಿದಂತೆ ಇತರೆ ಇಲಾಖೆಗಳ ಜಂಟಿ ಸಮೀಕ್ಷೆ ನಡೆಸಲಾಗುತ್ತಿದ್ದು ಶೇ 90 ರಷ್ಟು ಸಮೀಕ್ಷೆ ಮುಗಿದಿದೆ. ಪೂರ್ಣ ಸಮೀಕ್ಷೆ ಮುಗಿದ ನಂತರ ಬೆಳೆ ಹಾನಿ ಗೊತ್ತಾಗಲಿದೆ. ಈ ನಡುವೆ ಸೆಪ್ಟೆಂಬರ್ 17 ರಂದು ಜಿಲ್ಲೆಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ನವರಿಗೆ ಬೆಳೆ ಹಾನಿ ಬಗ್ಗೆ ವಿವರಿಸಲಾಗಿದೆ ಎಂದರು.

ಬೆಳೆ‌ವಿಮೆ:
2025-26 ನೇ ಸಾಲಿನ 3,00,952 ರೈತರು ಬೆಳೆ ವಿಮೆ ನೋಂದಣಿ ಮಾಡಿಸಿದ್ದು, ಶೇ 59 ರೈತರು ಬೆಳೆ ಹಾನಿ ಬಗ್ಗೆ ದೂರು ಸಲ್ಲಿಸಿರುತ್ತಾರೆ. ದೂರು ನೀಡಿದ ರೈತರ ಬೆಳೆ ಹಾನಿ ಸಮೀಕ್ಷೆ ಶೇ 75 ಮುಗಿದಿದೆ. ಈಗಾಗಲೇ 2024-25 ನೇ ಸಾಲಿನ ಎರಡನೆಯ ಕಂತಿನ ಬೆಳೆವಿಮೆ‌ ಪರಿಹಾರವಾಗಿ ರೂ 315.64 ಕೋಟಿ ಬಿಡುಗಡೆಯಾಗಿದ್ದು ಸಧ್ಯದಲ್ಲೇ ರೈತರ ಅಕೌಂಟ್ ಗೆ ಜಮೆ‌ಮಾಡಲಾಗುವುದು ಎಂದು ಸಚಿವರು ಹೇಳಿದರು.

ಪರಿಹಾರ:
ಬೆಳೆ ಪರಿಹಾರ ಸೇರಿದಂತೆ ರೈತರಿಗೆ ಸೇರಬೇಕಾಗಿರುವ ಪರಿಹಾರ ಒದಗಿಸಿಕೊಡುವಲ್ಲಿ ಕಾಂಗ್ರೆಸ್ ಸರ್ಕಾರ ಬಿಜೆಪಿಗಿಂತಲೂ ಮುಂದಿದೆ ಆದರೂ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಚಿವರು, 2023-24 ರ ಸಾಲಿನಲ್ಲಿ ಇನ್ ಪುಟ್ ಸಬ್ಸಿಡಿ‌ ಹಾಗೂ ಬೆಳೆ ವಿಮೆ ಸೇರಿದಂತೆ 8,91,277 ರೈತರಿಗೆ ರೂ 1417 ಕೋಟಿ‌ ಪರಿಹಾರ ಒದಗಿಸಲಾಗಿದೆ. 2023-24 ಹಾಗೂ 2014-25 ರ ಸಾಲಿನ‌ ಬೆಳೆ ವಿಮೆಯಾಗಿ 3,63,368 ರೈತರಿಗೆ ರೂ 846.03 ಕೋಟಿ ಪರಿಹಾರ ಒದಗಿಸಲಾಗಿದೆ.ಕಲಬುರಗಿ ಜಿಲ್ಲೆಯಲ್ಲಿ‌ ನೆಟೆರೋಗದಿಂದ ತೊಗರಿ ಬೆಳೆ ಹಾನಿಯಾದಾಗ 1,78,354 ರೈತರಿಗೆ ರೂ 182 ಕೋಟಿ ಪರಿಹಾರ ನೀಡಲಾಗಿದೆ. ಬರ/ ನೆರೆ‌ಪರಿಹಾರವಾಗಿ ರೂ 389.14 ಕೋಟಿ ಪರಿಹಾರ ನೀಡಲಾಗಿದೆ. ಬಿಜೆಪಿಯ ಅಧಿಕಾರವಾಧಿಯಲ್ಲಿ ರೂ 206 ಕೋಟಿ ಮಾತ್ರ ಬಿಡುಗಡೆ ಮಾಡಲಾಗಿತ್ತು. ಬಿಜೆಪಿ ನಾಯಕರು ಎನ್ ಡಿ ಆರ್ ಎಫ್ ನಿಯಮಾವಳಿಗಳ‌ ಸರಳೀಕರಣಕ್ಕಾಗಿ ಕೇಂದ್ರ ಸರ್ಕಾರಕ್ಕೆ‌ ಆಗ್ರಹಿಸಲಿ ಎಂದರು.

ಬಿಜೆಪಿಗೆ ಉತ್ತರದಾಯಿಯಲ್ಲ:
ಸಚಿವ ಖರ್ಗೆ ಕಾಣೆಯಾಗಿದ್ದಾರೆ ಎನ್ನುವ ಬಿಜೆಪಿ ಸೋಷಿಯಲ್ ಮೀಡಿಯಾ ಪೋಸ್ಟ್ ವಿಚಾರ, ನಾನು ಬಿಜೆಪಿಗೆ ಉತ್ತರದಾಯಿಯಲ್ಲ. ನಾನು ಜನರಿಗೆ ಮಾತ್ರ ಉತ್ತರದಾಯಿಯಾಗಿರುತ್ತೇನೆ. ನನ್ನ ಹೆಸರು ಹೇಳಿದರೆ ಅವರಿಗೆ ಮುಂಬಡ್ತಿ‌‌ ಸಿಗುತ್ತದೆ. ಹಾಗಾಗಿ, ಮೊದಲು ಸಿಎಂ, ನಂತರ ಡಿಸಿಎಂ ಹಾಗೂ ತದನಂತರ ನನಗೆ ಅವರು ಬೈಯುತ್ತಾರೆ ಎಂದು ಟೀಕಿಸಿದರು.

Tags: Minister Priyank KhargePriyank Khargepriyank kharge attackpriyank kharge audiopriyank kharge bytepriyank kharge missingpriyank kharge newspriyank kharge on bjppriyank kharge on modipriyank kharge on pm modipriyank kharge on rsspriyank kharge rss banpriyank kharge speechpriyank kharge updatespriyank kharge videopriyank kharge vs bjppriyank kharge vs cm hmpriyank kharge vs rssPriyanka Khargepriyanka kharge on rsspriyanka kharge press meetrss priyank kharge
Previous Post

Basavaraj Bommai: ಸನಾತನ ಧರ್ಮದ ಬಗ್ಗೆ ಅಧ್ಯಯನ ಮಾಡಿ ತಿಳಿಯಲು ಸಾಧ್ಯವಿಲ್ಲ, ಅನುಭವಿಸಿ ತಿಳಿಯಬೇಕು..!!

Next Post

ಸಿದ್ದರಾಮಯ್ಯನ ಜೊತೆಯಲ್ಲೇ 5ವರ್ಷ ಇದೀನಿ ಅವರು ಹೆಂಗೆ ಅಂತ ಗೊತ್ತು

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post

ಸಿದ್ದರಾಮಯ್ಯನ ಜೊತೆಯಲ್ಲೇ 5ವರ್ಷ ಇದೀನಿ ಅವರು ಹೆಂಗೆ ಅಂತ ಗೊತ್ತು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada