ಗುವಾಹಟಿ: ಸಿಕ್ಕಿಂ(Sikkim)ನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ (Rain). ಪರಿಣಾಮ ಅಲ್ಲಿಯ ಮಂಗನ್ ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿ 6 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, 1,200ಕ್ಕೂ ಅಧಿಕ ಜನ ಪ್ರವಾಸಿಗರು ಸಿಲುಕಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಬೇರೆ ಬೇರೆ ರಾಜ್ಯಗಳ ಸುಮಾರು 1,200ಕ್ಕೂ ಅಧಿಕ ಪ್ರವಾಸಿಗರು ಹಾಗೂ ವಿದೇಶಿ ಪ್ರವಾಸಿಗರು ಮಂಗನ್ ಪಟ್ಟಣದಿಂದ ಸುಮಾರು 50 ಕಿಮೀ ದೂರದಲ್ಲಿರುವ ಲಾಚುಂಗ್ ಗ್ರಾಮದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ಹೇಳಿದೆ.
ಪ್ರವಾಸಿಗರನ್ನು ರಕ್ಷಿಸಿ ವಿಮಾನದಲ್ಲಿ ಕರೆತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ವಿ.ಬಿ ಪಾಠಕ್ ಕೇಂದ್ರದೊಂದಿಗೆ ಮಾತುಕತೆ ನಡೆಸಿದೆ ಎನ್ನಲಾಗುತ್ತಿದೆ. ಮಂಗನ್ ಜಿಲ್ಲೆಯಲ್ಲಿನ ಭೂಕುಸಿತದಲ್ಲಿ ಪಕ್ಷೆಪ್ ಮತ್ತು ಅಂಭಿತಾಂಗ್‍ನಲ್ಲಿ 6 ಜನ ಸಾವನ್ನಪ್ಪಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ.