• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

26 ತಾರಾ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಮಾಂಸ, ಕೊಳೆತ ತರಕಾರಿ ಪತ್ತೆ!

ಪ್ರತಿಧ್ವನಿ by ಪ್ರತಿಧ್ವನಿ
August 8, 2026
in ಕರ್ನಾಟಕ
0
26 ತಾರಾ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ದಾಳಿ: ಅವಧಿ ಮೀರಿದ ಮಾಂಸ, ಕೊಳೆತ ತರಕಾರಿ ಪತ್ತೆ!
Share on WhatsAppShare on FacebookShare on Telegram

ಬೆಂಗಳೂರು ವ್ಯಾಪ್ತಿಯ ತ್ರಿತಾರಾ ಹಾಗೂ ಪಂಚತಾರಾ ಸೇರಿದಂತೆ ಒಟ್ಟು 26 ತಾರಾ ಹೋಟೆಲ್‌ಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಹೋಟೆಲ್‌ಗಳಲ್ಲಿ ಅವಧಿ ಮೀರಿದ ಆಹಾರ, ಮಾಂಸ, ಕೊಳೆತ ತರಕಾರಿ ಸೇರಿದಂತೆ ಗಂಭೀರ ಲೋಪಗಳು ಪತ್ತೆಯಾಗಿವೆ.ತಪಾಸಣೆ ವೇಳೆ ಕೆಲವು ಹೋಟೆಲ್‌ಗಳಲ್ಲಿ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರ ಪದಾರ್ಥಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸದಿರುವುದು, ಅಡುಗೆಮನೆ ಹಾಗೂ ಆಹಾರ ಸಂಗ್ರಹಣಾ ಸ್ಥಳಗಳಲ್ಲಿ ಸ್ವಚ್ಛತೆ ಕೊರತೆ, ಅವಧಿ ಮೀರಿದ ಉತ್ಪನ್ನಗಳ ಬಳಕೆ, ಲೇಬಲ್‌ ಇಲ್ಲದ ಮಾಂಸ ಉತ್ಪನ್ನಗಳು ಹಾಗೂ ತರಕಾರಿಗಳ ಮೇಲೆ ಶಿಲೀಂಧ್ರ ಬೆಳೆದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.

ADVERTISEMENT

ಲೋಪಗಳು ಕಂಡುಬಂದಿರುವ ಹೋಟೆಲ್‌ಗಳಿಗೆ ಆಹಾರ ಸುರಕ್ಷತಾ ಇಲಾಖೆ ನೋಟಿಸ್‌ ಜಾರಿ ಮಾಡಿದ್ದು, ಸಂಬಂಧಪಟ್ಟವರ ವಿರುದ್ಧ ನ್ಯಾಯ ನಿರ್ಣಾಯಕ ಅಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಶಿಫಾರಸು ಮಾಡಲಾಗಿದೆ ಎಂದು ಇಲಾಖೆ ಆಯುಕ್ತರು ತಿಳಿಸಿದ್ದಾರೆ.ತಪಾಸಣೆಯ ವೇಳೆ ದಿ ಲಲಿತ್ ಅಶೋಕ್‌ ಹೋಟೆಲ್‌ನಿಂದ 76 ಕೆ.ಜಿ. ಮಾಂಸ, 200 ಕೆ.ಜಿ. ತರಕಾರಿ ಹಾಗೂ 32 ಲೀಟರ್ ಅವಧಿ ಮೀರಿದ ಹಾಲು ವಶಪಡಿಸಿಕೊಳ್ಳಲಾಗಿದೆ. ಅವಧಿ ಮೀರಿದ ಹಾಲನ್ನು ನಾಶಪಡಿಸಲಾಗಿದೆ.

Amit Shah : ಯಾವ ಮಂತ್ರಿ ಬಂದು ಉತ್ತರಿಸಬೇಕೆಂಬುದು ನಮ್ಮ ಸರ್ಕಾರ ತೀರ್ಮಾನಿಸುತ್ತದೆ ಎಂದ ರಿಜಿಜು..

ಇನ್ನು ಶಾಂಗ್ರಿ-ಲಾ ಹೋಟೆಲ್‌ನಲ್ಲಿ 15 ಕೆ.ಜಿ. ಮಾಂಸ, ಫೋರ್ ಸೀಸನ್ಸ್‌ ಹೋಟೆಲ್‌ನಲ್ಲಿ 19 ಕೆ.ಜಿ. ಮಾಂಸ ಹಾಗೂ ತಾಜ್ ವಿವಾಂತ ವೈಟ್‌ಫೀಲ್ಡ್‌ನಲ್ಲಿ 3 ಕೆ.ಜಿ. ಅವಧಿ ಮೀರಿದ ಬೇಕರಿ ಉತ್ಪನ್ನಗಳನ್ನು ಜಪ್ತಿ ಮಾಡಲಾಗಿದೆ.ಯಶವಂತಪುರದ ತಾಜ್ ಹೋಟೆಲ್‌ನಲ್ಲಿ 72 ಕೆ.ಜಿ. ಮಾಂಸ ಹಾಗೂ ಸಾಲಮನ್‌ ಮೀನು ವಶಪಡಿಸಿಕೊಳ್ಳಲಾಗಿದೆ. ಏಟ್ರಿಯಾ ಹೋಟೆಲ್‌ನಲ್ಲಿ ಒಟ್ಟು 105 ಕೆ.ಜಿ. ಅವಧಿ ಮೀರಿದ ಆಹಾರ ಪದಾರ್ಥಗಳು ಪತ್ತೆಯಾಗಿದ್ದು, ಇದರಲ್ಲಿ 50 ಕೆ.ಜಿ. ಕೋಳಿ ಮಾಂಸ, 25 ಕೆ.ಜಿ. ಮಾಂಸ, 23 ಕೆ.ಜಿ. ಮೀನು ಹಾಗೂ 7 ಕೆ.ಜಿ. ತರಕಾರಿ ಸೇರಿದೆ. ವಶಪಡಿಸಿಕೊಂಡ ಆಹಾರ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ.

ವಿಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯದೆ ಬಿಲ್‌ ಪಾಸ್‌ ಮಾಡೋದು ಸಂವಿಧಾನ ಬಾಹಿರ.. #pratidhvani

ಹಲವು ಹೋಟೆಲ್‌ಗಳ ಅಡುಗೆಮನೆ ಮತ್ತು ಆಹಾರ ಸಂಗ್ರಹಣಾ ಸ್ಥಳಗಳಲ್ಲಿ ಸ್ವಚ್ಛತೆಯ ಕೊರತೆ ಕಂಡುಬಂದಿದೆ. ಎಫ್‌ಎಸ್‌ಎಸ್‌ಎಐ ನಿಯಮಗಳಿಗೆ ಅನುಗುಣವಾದ ಲೇಬಲಿಂಗ್‌ ಇಲ್ಲದ ಮಾಂಸ ಉತ್ಪನ್ನಗಳು, ಅವಧಿ ಮೀರಿದ ಹಾಲು ಮತ್ತು ಹಾಲಿನ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, ಕೋಳಿ ಮಾಂಸ, ಮೀನು ಹಾಗೂ ತರಕಾರಿಗಳನ್ನು ಸಂಗ್ರಹಿಸಿರುವುದು ಪತ್ತೆಯಾಗಿದೆ.ಕೆಲವು ಆಹಾರ ಪದಾರ್ಥಗಳು ಮತ್ತು ತರಕಾರಿಗಳಲ್ಲಿ ಶಿಲೀಂಧ್ರವೂ ಕಂಡುಬಂದಿದೆ. ಸಸ್ಯಾಹಾರಿ ಹಾಗೂ ಮಾಂಸಾಹಾರಿ ಆಹಾರಗಳನ್ನು ಸೂಕ್ತ ರೀತಿಯಲ್ಲಿ ಪ್ರತ್ಯೇಕವಾಗಿ ಸಂಗ್ರಹಿಸಲಾಗಿದೆಯೇ ಎಂಬುದನ್ನೂ ಅಧಿಕಾರಿಗಳು ಪರಿಶೀಲಿಸಿದ್ದಾರೆ.

 

ಆಹಾರ ಸುರಕ್ಷತಾ ಇಲಾಖೆ ಆಯುಕ್ತ ಶ್ರೀನಿವಾಸ್ ಮಾತನಾಡಿ, ತಾರಾ ಹೋಟೆಲ್‌ಗಳಲ್ಲಿ ಸ್ವಚ್ಛತೆ ಹಾಗೂ ಆಹಾರದ ಗುಣಮಟ್ಟ ಪರಿಶೀಲಿಸಲು ದಾಳಿ ನಡೆಸಲಾಗಿದೆ. ಲೋಪಗಳು ಪತ್ತೆಯಾದ ಹೋಟೆಲ್‌ಗಳಿಗೆ ನೋಟಿಸ್‌ ನೀಡಲಾಗಿದ್ದು, ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಗಂಭೀರ ಸ್ವರೂಪದ ಲೋಪಗಳು ಕಂಡುಬಂದರೆ ಹೋಟೆಲ್‌ಗಳ ಆಹಾರ ಪರವಾನಗಿಯನ್ನೇ ರದ್ದುಪಡಿಸುವ ಸಾಧ್ಯತೆಯಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಬರ ಪರಿಶೀಲನೆ ಬಳಿಕ ಮುಖ್ಯಮಂತ್ರಿಗಳಿಗೆ ಸಮಗ್ರ ವರದಿ ಒಪ್ಪಿಸಿ ಪರಿಹಾರ ನೀಡ್ತೇವೆ.. #pratidhvani

ಆರೋಗ್ಯ ಸಚಿವ ಯು.ಟಿ. ಖಾದರ್ ಮಾತನಾಡಿ, ತಾರಾ ಹೋಟೆಲ್‌ಗಳಲ್ಲಿ ಗುಣಮಟ್ಟ ಉತ್ತಮವಾಗಿರುತ್ತದೆ ಎಂಬ ನಂಬಿಕೆಯಿಂದ ಜನರು ಅಲ್ಲಿಗೆ ತೆರಳುತ್ತಾರೆ. ಆದರೆ, ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯ ನೈಜ ಸ್ಥಿತಿ ಜನರಿಗೆ ತಿಳಿಯಬೇಕು. ಜನರ ಆರೋಗ್ಯ ರಕ್ಷಣೆಯೇ ಸರ್ಕಾರದ ಪ್ರಮುಖ ಉದ್ದೇಶ ಎಂದು ಹೇಳಿದ್ದಾರೆ.

Tags: bangalore newsbengalurubengaluru newsBreaking NewsExpired FoodExpired MeatFive Star HotelsFood DepartmentFood HygieneFood InspectionFood QualityFood SafetyFood Safety DepartmentFood Safety NewsFood Safety RaidFood Safety ViolationFSSAIHealth SafetyHotel InspectionHotel Raidindia newskarnataka newsSpoiled VegetablesStar HotelsThree Star Hotels
Previous Post

‘ಹೊರಟ್ಟಿಗೆ ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ’: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

Next Post

ಎಸ್‌ಐಆರ್‌  ಪ್ರಕ್ರಿಯೆ ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ ಭಾಗ 2

Related Posts

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*
ಕರ್ನಾಟಕ

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

by ಪ್ರತಿಧ್ವನಿ
August 8, 2026
0

*ಬೆಂಗಳೂರು, ಆಗಸ್ಟ್ 8, 2026*: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ ವ್ಯವಸ್ಥಾಪಕ ನಿರ್ದೇಶಕ...

Read moreDetails
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

August 8, 2026
SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

August 8, 2026
ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ**: ಸರ್ಕಾರದಿಂದ 10 ಲಕ್ಷ ಪರಿಹಾರ

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ**: ಸರ್ಕಾರದಿಂದ 10 ಲಕ್ಷ ಪರಿಹಾರ

August 8, 2026
Next Post
‘ಹೊರಟ್ಟಿಗೆ ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ’: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಎಸ್‌ಐಆರ್‌  ಪ್ರಕ್ರಿಯೆ ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ ಭಾಗ 2

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada