ಕೋವಿಡ್ ಚಿಕಿತ್ಸೆಗೆ ₹5 ಲಕ್ಷದವರೆಗೆ ಸಾಲ: ಸಾರ್ವಜನಿಕ ವಲಯದ ಬ್ಯಾಂಕುಗಳು ಘೋಷಣೆ

ಕರೋನಾ ಚಿಕಿತ್ಸಾ ವೆಚ್ಚ ಹಿನ್ನೆಲೆ, ಸಾರ್ವಜನಿಕ ವಲಯದ ಬ್ಯಾಂಕ್ಗಳು (ಪಿಎಸ್ಬಿ) ಅಸುರಕ್ಷಿತ ಸಾಲ ನೀಡಲು ನಿರ್ಧರಿಸಿವೆ.

ಕೋವಿಡ್‌ ಎರಡನೇ ಅಲೆ ದೇಶಾದ್ಯಂತ ಹೆಚ್ಚು ವ್ಯಾಪಿಸಿ ಸಂದಿಗ್ಧ ಪರಿಸ್ಥಿತಿ ಉಂಟು ಮಾಡಿದ್ದು, ಇದರಿಂದ ಅಸುರಕ್ಷಿತ ಸಾಲ ನೀಡುಲು ನಿರ್ಧಾರ ಮಾಡಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿವೆ.

ಇಂಡಿಯನ್ ಬ್ಯಾಂಕುಗಳ ಸಂಘ (ಐಬಿಎ) ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಪ್ರಕಟಣೆ ಪ್ರಕಾರ, ಸಂಬಳ ಪಡೆಯುವವರು, ಸಂಬಳ ಪಡೆಯದವರು, ಪಿಂಚಣಿದಾರರು ಸೇರಿದಂತೆ ವ್ಯಕ್ತಿಗಳು ಕೋವಿಡ್ ಚಿಕಿತ್ಸೆಗಾಗಿ (Covid-19 Treatment) ಅಸುರಕ್ಷಿತ ವೈಯಕ್ತಿಕ ಸಾಲಗಳನ್ನು ₹ 25,000 ದಿಂದ 5 ಲಕ್ಷದವರೆಗೆ ಪಡೆಯಬಹುದು . ಮರುಪಾವತಿ ಅವಧಿ 5 ವರ್ಷಗಳು ಮತ್ತು ಎಸ್‌ಬಿಐ ವಾರ್ಷಿಕ 8.5% ಬಡ್ಡಿ ವಿಧಿಸುತ್ತದೆ. ಇತರ ಬ್ಯಾಂಕುಗಳು ತಮ್ಮ ಬಡ್ಡಿದರವನ್ನು ನಿರ್ಧರಿಸಲು ಮುಕ್ತವಾಗಿವೆ ಎಂದಿದೆ.

ಆರ್‌ಬಿಐ ಮಾರ್ಗ ಸೂಚಿ ಪ್ರಕಾರ ಎಮರ್ಜೆನ್ಸಿ ಕ್ರೆಡಿಟ್ಲೈನ್‌ ಗ್ಯಾರಂಟಿ ಯೋಜನೆ ಅಡಿ ಆಮ್ಲಜನಕ ಘಟಕ ಸ್ಥಾಪಿಸಲು ಆಸ್ಪತ್ರೆ, ನರ್ಸಿಂಗ್‌ ಹೋಂಗಳಿಗೆ 7.5% ಬಡ್ಡಿ ದರದಲ್ಲಿ 2 ಕೋಟಿ ವರೆಗೆ ಸಾಲ ನೀಡಲಾಗುತ್ತದೆ.

ಆರೋಗ್ಯ ರಕ್ಷಕ ಯೋಜನೆಯಡಿ- ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ಸ್ಥಾಪಿಸಲು, ಅಭಿವೃದ್ಧಿಗೊಳಿಸಲು, ಉತ್ಪನ್ನ ತಯಾರಿಸಲು 100 ಕೋಟಿ ವರೆಗೆ ಸಾಲನೀಡಲಾಗುವುದು. ಜೊತೆಗೆ ತುರ್ತು ವೈದ್ಯಕೀಯ ಸೇವೆಗಳಿಗೆ ಆರ್ಥಿಕ ನೆರವು ನೀಡುವ ಸಲುವಾಗಿ 50 ಕೋಟಿ ರೂ ವಾಯಿದಿ ಸಾಲ ನೀಡುವ ವ್ಯವಸ್ಥೆ ರೂಪಿಸುವುದಾಗಿ ಈ ಹಿಂದೆ ರಿಸರ್ವ್‌ ಬ್ಯಾಂಕ್ ತಿಳಿಸಿತ್ತು.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...