ಉಡುಪಿ ಜಿಲ್ಲೆ ಮಣಿಪಾಲದ ಹೆರ್ಗದಲ್ಲಿ ವೈಯಕ್ತಿಕ ಕಾರಣಕ್ಕೆ ವಿದ್ಯಾರ್ಥಿನಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ 20 ವರ್ಷದ ಶ್ರೀನಿಧಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಪ್ಪ ತಾಲೂಕು ಹರಂದೂರು ಗ್ರಾಮದ ಮಹೇಶ್ ಎಂಬುವವರ ಮಗಳಾಗಿರುವ ಶ್ರೀನಿಧಿ ಶೆಟ್ಟಿ, ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದಳು. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಮಣಿಪಾಲ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಬೇಕಿದ್ದ ಹಿನ್ನಲೆಯಲ್ಲಿ ಮಹೇಶ್ ಹೆರ್ಗ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಪತ್ನಿ ಹಾಗೂ ಮಗಳೊಂದಿಗೆ ವಾಸವಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ರೂಮ್ನಲ್ಲಿ ಯಾರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.