2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ (Paris olympics) ಭಾರತಕ್ಕೆ 2ನೇ ಪದಕ ಒಲಿದಿದೆ. ಶೂಟರ್ ಮನು ಭಾಕರ್ (Manu bhakar), ಸರಬೋತ್ ಸಿಂಗ್ (sarabjoth singh) ಜೋಡಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಶೂಟಿಂಗ್ ವಿಭಾಗದಲ್ಲಿ ಭಾರತಕ್ಕೆ ಮತ್ತೊಂದು ಕಂಚಿನ ಪದಕ ತಂದುಕೊಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (Pm Narendra modi), ರಾಷ್ಟ್ರಪತಿ ಬ್ರೌಪದಿ ಮುರ್ಮು (Drowpadi murmu), ಭಾರತೀಯ ಮಾಜಿ ಅಂತರಾಷ್ಟ್ರೀಯ ಕ್ರಿಕೆಟಿಗ ಗೌತಮ್ ಗಂಭೀರ್ (Gowtham gambhir ಮತ್ತು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯ ಸದಸ್ಯೆ ನೀತಾ ಅಂಬಾನಿ ಸೇರಿ ಹಲವು ಗಣ್ಯರು ಟ್ವಿಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.






