• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ರಾಷ್ಟ್ರೀಯ ಪಕ್ಷದ ಸ್ಥಾನಮಾನ ಕೋರಿ ಕರ್ನಾಟಕ ಹೈಕೋರ್ಟ್‌ ಮೊರೆ ಹೋದ ಎಎಪಿ

ಪ್ರತಿಧ್ವನಿ by ಪ್ರತಿಧ್ವನಿ
April 6, 2023
in Uncategorized
0
ರಾಷ್ಟ್ರೀಯ ಪಕ್ಷದ ಸ್ಥಾನಮಾನ ಕೋರಿ ಕರ್ನಾಟಕ ಹೈಕೋರ್ಟ್‌ ಮೊರೆ ಹೋದ ಎಎಪಿ
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಆಮ್ ಆದ್ಮಿ ಪಕ್ಷವು (ಎಎಪಿ) ರಾಜ್ಯ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಪಕ್ಷಕ್ಕೆ ರಾಷ್ಟ್ರೀಯ ಸ್ಥಾನಮಾನ ನೀಡಲು ವಿಳಂಬವಾಗುತ್ತಿರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷದ ಸಾಮರ್ಥ್ಯಕ್ಕೆ ಅಡ್ಡಿಯಾಗುತ್ತಿದೆ ಎಂದು ಹೇಳಿದೆ.

ADVERTISEMENT

ರಾಷ್ಟ್ರೀಯ ಪಕ್ಷವಾಗಲು ಬೇಕಾದ ಎಲ್ಲಾ ಮಾನದಂಡಗಳನ್ನು ಪಕ್ಷವು ಪೂರೈಸುತ್ತದೆ, ಆದರೆ ಭಾರತೀಯ ಚುನಾವಣಾ ಆಯೋಗವು (ಇಸಿಐ) ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ನಿರಾಕರಿಸುತ್ತಿದೆ ಎಂದು ಎಎಪಿ ಕರ್ನಾಟಕ ಸಂಚಾಲಕ ಪೃಥ್ವಿ ರೆಡ್ಡಿ ಸಲ್ಲಿಸಿದ ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇಸಿಐ ಮಾರ್ಗಸೂಚಿಗಳ ಪ್ರಕಾರ, ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಚಲಾವಣೆಯಾದ ಮತಗಳಲ್ಲಿ ಕನಿಷ್ಠ ಶೇಕಡಾ 6 ರಷ್ಟು ಮಾನ್ಯ ಮತಗಳನ್ನು ಪಡೆದುಕೊಂಡರೆ ಮತ್ತು ಲೋಕಸಭೆಯಲ್ಲಿ ಕನಿಷ್ಠ ನಾಲ್ಕು ಸ್ಥಾನಗಳನ್ನು ಗೆದ್ದರೆ ಪಕ್ಷವನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಬಹುದು. ಯಾವುದೇ  ರಾಜ್ಯಗಳಿಂದ ಅಥವಾ ಕನಿಷ್ಠ ಮೂರು ವಿಭಿನ್ನ ರಾಜ್ಯಗಳಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಒಟ್ಟು ಲೋಕಸಭೆ ಸ್ಥಾನಗಳಲ್ಲಿ ಕನಿಷ್ಠ 2 ಪ್ರತಿಶತವನ್ನು ಗೆದ್ದರೆ; ಅಥವಾ ಕನಿಷ್ಠ ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಿಕೊಂಡರೆ ರಾಷ್ಟ್ರೀಯ ಪಕ್ಷವೆನಿಸಲು ಅರ್ಹತೆ ಪಡೆಯುತ್ತದೆ.

ದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್‌ನಲ್ಲಿ ಕಳೆದ ಚುನಾವಣೆಗಳಲ್ಲಿ ಎಎಪಿ ತನ್ನ ಸಾಧನೆಯೊಂದಿಗೆ ಈ ಮಾನದಂಡಗಳನ್ನು ಪೂರೈಸುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಪಕ್ಷದಿಂದ ಪದೇ ಪದೇ ವಿನಂತಿಗಳು ಮತ್ತು ಪ್ರಾತಿನಿಧ್ಯಗಳ ಹೊರತಾಗಿಯೂ ಇಸಿಐ ಎಎಪಿಯನ್ನು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ವಿಳಂಬ ಮಾಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ನಿಗದಿತ ಕಾಲಮಿತಿಯೊಳಗೆ ಎಎಪಿಗೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ನೀಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಮುಂದಿನ ತಿಂಗಳು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವುದಾಗಿ ಎಎಪಿ ಘೋಷಿಸಿದೆ. ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯುವುದು ರಾಜ್ಯದಾದ್ಯಂತ ಪ್ರಚಾರ ಮತ್ತು ಬೆಂಬಲವನ್ನು ಕ್ರೋಢೀಕರಿಸಲು ಸಹಾಯ ಮಾಡುತ್ತದೆ ಎಂದು ಪಕ್ಷ ಹೇಳಿದೆ.

Tags: AAPhighcourtKarnataka
Previous Post

ಏ.9ಕ್ಕೆ ಬಿಜೆಪಿ ಟಿಕೆಟ್ ಘೋಷಣೆ : ನನ್ನ ಹೆಸರೂ ಪರಿಗಣನೆಗೆ‌ ಕಳುಹಿಸಲಾಗಿದೆ : ಈಶ್ವರಪ್ಪ

Next Post

KKR vs RCB IPL2023 :‌ ಶಾರ್ದೂಲ್‌ ಬ್ಯಾಟಿಂಗ್ ಅಬ್ಬರಕ್ಕೆ ಮಂಡಿಯೂರಿದ ಆರ್‌ ಸಿಬಿ

Related Posts

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು
Uncategorized

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

by ಪ್ರತಿಧ್ವನಿ
April 13, 2026
0

ಧಾರವಾಡ ನಗರದ ಮಾಳಾಪುರ ಬಡಾವಣೆಯ ಹಾಶ್ಮಿ ನಗರದಲ್ಲಿ ನಡೆದ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣವನ್ನು ಉಪನಗರ ಠಾಣೆ ಪೊಲೀಸರು ಶೀಘ್ರವೇ ಭೇದಿಸಿದ್ದಾರೆ. ಕೊಲೆ...

Read moreDetails
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
Next Post
KKR vs RCB IPL2023 :‌ ಶಾರ್ದೂಲ್‌ ಬ್ಯಾಟಿಂಗ್ ಅಬ್ಬರಕ್ಕೆ ಮಂಡಿಯೂರಿದ ಆರ್‌ ಸಿಬಿ

KKR vs RCB IPL2023 :‌ ಶಾರ್ದೂಲ್‌ ಬ್ಯಾಟಿಂಗ್ ಅಬ್ಬರಕ್ಕೆ ಮಂಡಿಯೂರಿದ ಆರ್‌ ಸಿಬಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada