ಸಾರ್ವಜನಿಕ ಸ್ಥಳಗಳಲ್ಲಿ ಜಾತಿ ಬಗ್ಗೆ ನಿಂದನೆ ಮಾಡಿದರೆ ಅಷ್ಟೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ (SC-ST) ದೌರ್ಜನ್ಯ ತಡೆ ಕಾಯ್ದೆ ಅನ್ವಯವಾಗುತ್ತದೆ ಎಂದು ರಾಜ್ಯ ಹೈಕೋರ್ಟ್ ತೀರ್ಪು ನೀಡಿದೆ.
ಜಯಕುಮಾರ್ ನಾಯರ್ ಅವರು ತಮ್ಮ ವಿರುದ್ಧ ದಾಖಲಿಸಿದ್ದ ಜಾತಿ ನಿಂದನೆ ಪ್ರಕರಣ ರದ್ದುಪಡಿಸಬೇಕೆಂದು ಕೋರಿ ಮಂಗಳೂರಿನ ರಿತೇಶ್ ಪಯಾಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಕಟ್ಟಡದ ನೆಲಮಹಡಿ ಸಾರ್ವಜನಿಕ ಸ್ಥಳವಲ್ಲ. ಹಾಗಾಗಿ ಅಲ್ಲಿಂದ ಬಯ್ಯುವುದು ಅಥವಾ ನಿಂದನೆ ಮಾಡಿದರೆ ಅದು ಪರಿಶಿಷ್ಠ ಜಾತಿ, ಪಂಗಡದ ಮೇಲಿನ ದೌರ್ಜನ್ಯ ತಡೆ ಕಾಯ್ದೆ ವ್ಯಾಪ್ತಿಗೆ ಅನ್ವಯವಾಗುವುದಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ದೌರ್ಜನ್ಯ ತಡೆ ಕಾಯ್ದೆ ಸೆ. 3(1)(ಆರ್)(ಎಸ್)(ವಿಎ) ಅನ್ವಯವಾಗುವುದಿಲ್ಲ ಎಂದು ಹೇಳಿರುವ ಕೋರ್ಟ್ ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿ ರಿತೇಶ್ ಪಯಾಸ್ ವಿರುದ್ಧ ಹೂಡಿದ್ದ ಅಟ್ರಾಸಿಟಿ ಕೇಸ್ ಅನ್ನು ರದ್ದುಪಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಆರೋಪಿ ರಿತೇಶ್ ಪಯಾಸ್ ಮತ್ತು ಜಯಕುಮಾರ್ ನಾಯರ್ ನಡುವೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯವಿತ್ತು.ನಾಯರ್ ವಿರುದ್ಧ ಪಯಾಸ್ ನಿರ್ಬಂಧಕಾಜ್ಞೆ ಪಡೆದಿದ್ದರು. ನಾಯರ್ ಕಟ್ಟಡದ ಕೆಲಸಗಾರನಿಂದ ಪಯಾಸ್ ವಿರುದ್ಧ ದೂರು SC-ST ದೌರ್ಜನ್ಯ ತಡೆ ಕಾಯ್ದೆಯಡಿ ಪುತ್ತೂರು ಟೌನ್ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ ಕೇಸ್ ದಾಖಲಿಸಿದ್ದರು. ಹಾಗಾಗಿ ಪಯಾಸ್ , ದುರುದ್ದೇಶದಿಂದ ದೂರು ಕೊಡಿಸಲಾಗಿದೆ. ಸಿವಿಲ್ ವ್ಯಾಜ್ಯಕ್ಕೆ ಪ್ರತಿಯಾಗಿ ಜಾತಿನಿಂದನೆ ಕೇಸ್ ಹಾಕಿಸಲಾಗಿದೆ. ಹಾಗಾಗಿ ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸಬೇಕೆಂದು ಹೈಕೋರ್ಟ್ ಮೊರೆ ಹೋಗಿದ್ದರು.
Inputs : India express