• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಹೈಕೋರ್ಟ್‌..!!

ಪ್ರತಿಧ್ವನಿ by ಪ್ರತಿಧ್ವನಿ
December 13, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

“ಕನ್ನಡದ ಅವಸಾನ ಆಗಬಾರದು ಎನ್ನುವುದಾದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳಲ್ಲಿಯೂ ಕನ್ನಡದಲ್ಲಿ ವ್ಯವಹಾರ ನಡೆಯಬೇಕು” ಎಂದು ಪ್ರತಿವಾದಿಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌.

ADVERTISEMENT
Session : ಹೊಸ ವಿಡಿಯೋ ಬಿಟ್ಟ ಯತ್ನಾಳ್ ಸದನದಿಂದ ಓಡಿದ ಕಾಂಗ್ರೆಸ್ ನಾಯಕರು #pratidhvani

ಕರ್ನಾಟಕ ಹೈಕೋರ್ಟ್‌ ನ್ಯಾಯಾಂಗ ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸುವ ಮೂಲಕ ನ್ಯಾಯಮೂರ್ತಿಗಳಾದ ಕೃಷ್ಣ ಎಸ್.‌ ದೀಕ್ಷಿತ್‌ ಮತ್ತು ಸಿ ಎಂ ಜೋಶಿ ಅವರ ವಿಭಾಗೀಯ ಪೀಠವು ಗುರುವಾರ ಇತಿಹಾಸ ಬರೆದಿದೆ. ನಿನ್ನೆ ಭಾರತದ ಭಾಷಾ ದಿನದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಐತಿಹಾಸಿಕ ನಿರ್ಧಾರವನ್ನು ಕಾರ್ಯಗತಗೊಳಿಸಿದೆ. ಇದರೊಂದಿಗೆ ಹೈಕೋರ್ಟ್‌ನಲ್ಲಿ ಕನ್ನಡಕ್ಕೆ ಆದ್ಯತೆ ದೊರೆಯಬೇಕು ಎಂಬ ಬಹು ವರ್ಷಗಳ ಕೂಗಿಗೆ ನಾಂದಿಯಾಡಿದೆ.

Oplus_131072

ತುಮಕೂರಿನ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿರುವ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ನಂಜಾವಧೂತ ಸ್ವಾಮೀಜಿ (ವರ್ಸಸ್‌ ಎಸ್‌ ಲಿಂಗಣ್ಣ ಮತ್ತು ಇತರರು) ಅವರು ಸಲ್ಲಿಸಿದ್ದ ಮೂಲ ಮೇಲ್ಮನವಿಯನ್ನು (Original side appeal) ಪೀಠ ಪುರಸ್ಕರಿಸಿದೆ.

Oplus_131072

ಈ ಪ್ರಕರಣದ ತೀರ್ಪನ್ನು ಇಂಗ್ಲಿಷ್‌ ಮತ್ತು ಕನ್ನಡದಲ್ಲಿ (English and Kannada) ಪ್ರತ್ಯೇಕವಾಗಿ ನ್ಯಾಯಮೂರ್ತಿಗಳು ಬರೆದಿದ್ದಾರೆ. ತೀರ್ಪಿನ ಆಪರೇಟಿವ್‌ ಭಾಗವನ್ನು ನ್ಯಾ. ದೀಕ್ಷಿತ್‌ ಅವರು ಕನ್ನಡದಲ್ಲಿ ಓದುವ ಮೂಲಕ ಹೊಸ ಭಾಷ್ಯ ಬರೆದಿದ್ದಾರೆ.

ತೀರ್ಪನ್ನು ಓದಿದ ನಂತರ ನ್ಯಾ. ದೀಕ್ಷಿತ್‌ ಅವರು “ಕನ್ನಡದ ಅವಸಾನ ಆಗಬಾರದು ಎನ್ನುವುದಾದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳಲ್ಲಿಯೂ ಕನ್ನಡದಲ್ಲಿ ವ್ಯವಹಾರ ನಡೆಯಬೇಕು” ಎಂದು ಪ್ರತಿಪಾದಿಸಿದರು.

ತೀರ್ಪು ಓದುವುದಕ್ಕೂ ಮುನ್ನ, ಡಿ.11, ಬುಧವಾರ ಭಾರತದ ಭಾಷಾ ದಿನವಾದ ಹಿನ್ನೆಲೆಯಲ್ಲಿ ಇಂದು ಕನ್ನಡದಲ್ಲಿ ಆದೇಶ ಮಾಡುತ್ತಿದ್ದೇವೆ. ಭಾರತದ ಭಾಷೆಗಳಿಗೆ ಮಾನ್ಯತೆ ನೀಡುವ ದಿವಸವೇ ಭಾರತ ಭಾಷಾ ದಿನದ ಉದ್ದೇಶ.

ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ (SM Krishna) ಅವರು ತೀರಿಕೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ರಜೆಯೂ ಇತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಗ್ಲಿಷ್‌ ಮತ್ತು ಕನ್ನಡದಲ್ಲಿ ಪ್ರತ್ಯೇಕವಾಗಿ ನಾವೇ ಎರಡು ಆದೇಶ ಬರೆದಿದ್ದೇವೆ. ಇದು ತರ್ಜುಮ್ಮೆಯಲ್ಲ. ನಾವೇ ಕನ್ನಡದಲ್ಲಿ ಬರೆದಿದ್ದೇವೆ. ಕವಿ ರವೀಂದ್ರನಾಥ್‌ ಠ್ಯಾಗೋರ್‌ ಅವರು ಹೇಗೆ ಬಂಗಾಳಿ ಮತ್ತು ಇಂಗ್ಲಿಷ್‌ನಲ್ಲಿ ಪದ್ಯ ಬರೆಯುತ್ತಿದ್ದರೋ ಹಾಗೆ” ಎಂದು ನ್ಯಾ. ದೀಕ್ಷಿತ್ ವಿವರಿಸಿದರು.

“ನಾವು ಹೊಸ ಟ್ರೆಂಡ್‌ ಸೆಟ್‌ ಮಾಡಲು ನಿರ್ಧರಿಸಿದ್ದೇವೆ. ಈಗ ನಮ್ಮೆಲ್ಲಾ ತೀರ್ಪುಗಳನ್ನು ಇಂಗ್ಲಿಷ್‌ ಭಾಷೆಯಲ್ಲಿ ನೀಡುತ್ತಿದ್ದೇವೆ. ಹೀಗೆ ಮಾಡಿದರೆ ಜನಸಾಮಾನ್ಯರಿಗೆ ಅರ್ಥವಾಗುವುದು ಹೇಗೆ? ಇಂಗ್ಲೆಂಡ್‌ನಲ್ಲಿ 1730ರವರೆಗೆ ಲ್ಯಾಟಿನ್‌ ಭಾಷೆಯಲ್ಲಿ ನ್ಯಾಯಾಲಯದ ಕಲಾಪ ನಡೆಯುತ್ತಿತ್ತು. ಹೀಗಾಗಿ, ಇಂಗ್ಲೆಂಡ್‌ ನ್ಯಾಯಾಲಯದ ಆದೇಶ/ತೀರ್ಪು ಸ್ಥಳೀಯ ಭಾಷೆಯಲ್ಲಿ ನೀಡಬೇಕು ಎಂದು ಶಾಸನ ರೂಪಿಸಿದ್ದರು. ಹೀಗಾಗಿ, 1730ರಿಂದ ಇಂಗ್ಲೆಂಡ್‌ನಲ್ಲಿ ಇಂದಿನವರಿಗೆ ಆಂಗ್ಲ ಭಾಷೆಯಲ್ಲಿಯೇ ಕಲಾಪ ನಡೆಯುತ್ತಿದೆ” ಎಂದರು.

ಎಲ್ಲರಿಗೂ ತಿಳಿಯಬೇಕು ಎನ್ನುವ ಉದ್ದೇಶದಿಂದ ಹಾಗೆ ಮಾಡಲಾಗಿದೆ. ಆದರೆ, ನಮ್ಮಲ್ಲಿ ಕೇಶವಾನಂದ ಭಾರತಿ ತೀರ್ಪು ನಮಗೇ ತಿಳಿಯುವುದಿಲ್ಲ. ನಿಮಗೆ ತಿಳಿಯಬಹುದು. ಆದೇಶದ ಸಕಾರಣಗಳನ್ನು ಒಳಗೊಂಡ ಭಾಗ ತಿಳಿಯಲಿ, ಬಿಡಲಿ, ಆಪರೇಟಿವ್‌ ಭಾಗವನ್ನಾದರೂ ಕನ್ನಡದಲ್ಲಿ ನೀಡಬೇಕು. ಆಗ ದಾವೆದಾರರಿಗೆ ತೀರ್ಪು ಅರ್ಥವಾಗುತ್ತದೆ” ಎಂದರು.

ಸಂವಿಧಾನದ 348ನೇ ವಿಧಿಯ ಪ್ರಕಾರ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ನ ಭಾಷೆಯಾಗಿದೆ. ಆದರೆ, ಅಲ್ಲಿ ಇಂಗ್ಲಿಷ್‌ ಮಾತ್ರ ಎಂದು ಹೇಳಿಲ್ಲ. 348(1)ನೇ ವಿಧಿಯ ಅಡಿ ಸರ್ಕಾರವು ರಾಷ್ಟ್ರಪತಿಗಳಿಂದ ಅನುಮತಿ ಪಡೆದು ರಾಜ್ಯಪಾಲರ ಮೂಲಕ ಕಾನೂನು ಮಾಡಬಹುದು ಎಂದು ಹೇಳಿದೆ. ಆದರೆ, ಸಂಬಂಧಪಟ್ಟವರು ಅದರ ಬಗ್ಗೆ ನಿರ್ಧಾರ ಕೈಗೊಳ್ಳಬಹುದಿತ್ತು. ಆದರೆ, ಅವರಾರೂ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ, ನಾವು ಕಾಯಲಾಗದು. ಕನ್ನಡದಲ್ಲಿ ತೀರ್ಪು ಬರುವುದು ಆರಂಭವಾಗಬೇಕು. ಅದಕ್ಕಾಗಿ ನಾವು ಆರಂಭಿಸಿದ್ದೇವೆ” ಎಂದರು.

ಮೊದಲಿಗೆ ಸಂವಿಧಾನದಲ್ಲಿ ಹೇಳಿರುವಂತೆ ಇಂಗ್ಲಿಷ್‌ನಲ್ಲಿ ತೀರ್ಪು ಓದಿದ ನ್ಯಾ. ದೀಕ್ಷಿತ್‌. ಆನಂತರ ಕನ್ನಡದಲ್ಲಿ“ಮೇಲ್ಕಾಣಿಸಿದ ಕಾರಣಗಳಿಂದಾಗಿ ಈ ಮೇಲ್ಮನವಿಯನ್ನು ಪುರಸ್ಕರಿಸಲಾಗಿದೆ. ಏಕಸದಸ್ಯ ನ್ಯಾಯಾಧೀಶರ ಪ್ರಶ್ನಿತ ತೀರ್ಪು ಮತ್ತು ಆದೇಶವನ್ನು ರದ್ದುಗೊಳಿಸಲಾಗಿದೆ. ಪ್ರತಿವಾದಿಗಳು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಲಾಗಿದೆ. ತತ್‌ಪರಿಣಾಮವಾಗಿ ಟಿಒಎಸ್‌ ಸಂಖ್ಯೆ ೧/೨೦೨೩ರಲ್ಲಿ ಮೇಲ್ಮನವಿದಾರರ ದಾವೆಯನ್ನು ಪುನರುಜ್ಜೀವನಗೊಳಿಸಲಾಗಿದೆ. ಅದನ್ನು ಕಾನೂನು ರೀತ್ಯಾ ವಿಚಾರಣೆ ಮತ್ತು ವಿಲೇವಾರಿ ಮಾಡಬೇಕಾಗುತ್ತದೆ. ಯಾರೂ ವೆಚ್ಚವನ್ನು ಭರಿಸುವಂತಿಲ್ಲ” ಎಂದು ಓದಿದರು.

ಆನಂತರ ವಕೀಲರೊಬ್ಬರು “ಇದು ಸಾಮಾನ್ಯ ಜನರಿಗೆ ಅರ್ಥವಾಗುತ್ತದೆ. ನ್ಯಾಯಮೂರ್ತಿಗಳ ಈ ತೀರ್ಪು ಇತರ ನ್ಯಾಯಮೂರ್ತಿಗಳು ಉತ್ತಮ ಸಂದೇಶ ರವಾನಿಸಲಿದೆ” ಎಂದರು.

ಇದಕ್ಕೆ ನ್ಯಾ. ದೀಕ್ಷಿತ್‌ ಅವರು “ಹೌದು, ಸಾಮಾನ್ಯ ಜನರಿಗೆ ಅರ್ಥವಾಗಬೇಕು. ಇಂಗ್ಲಿಷ್‌ ಅಥವಾ ಅವರಿಗೆ ತಿಳಿಯದ ಭಾಷೆಯಲ್ಲಿ ಹೇಳಿದರೆ ಆಗದು. (ಇನ್ನು ಕನ್ನಡದಲ್ಲಿ ನೀಡಿರುವ ತೀರ್ಪಿನ ಕುರಿತು) ಅದು ನಮಗೆ ಗೊತ್ತಿಲ್ಲ. ಆದರೆ, ನಾವು ನಮ್ಮ ಕೆಲಸ ಮಾಡಿದ್ದೇವೆ” ಎಂದರು.

ಈ ಮಧ್ಯೆ, ನ್ಯಾಯಮೂರ್ತಿ ಸಿ ಎಂ ಜೋಶಿ ಅವರು “ಸುಪ್ರೀಂ ಕೋರ್ಟ್‌ ಸಹ ಪ್ರಾದೇಶಿಕ ಭಾಷೆಗಳಿಗೆ ಆದ್ಯತೆ ನೀಡಬೇಕು ಎಂದು ತೀರ್ಪುಗಳನ್ನು ಅನುವಾದ ಮಾಡಬೇಕು ಎಂದು ಹೇಳಿದೆ. ಸುಪ್ರೀಂ ಕೋರ್ಟ್‌ನ 2,400 ತೀರ್ಪುಗಳು ಸದ್ಯ ಕನ್ನಡಕ್ಕೆ ಅನುವಾದಗೊಂಡಿದ್ದು, ಲಭ್ಯ ಇವೆ. 1,400 ಹೈಕೋರ್ಟ್‌ ತೀರ್ಪುಗಳು ಕನ್ನಡಕ್ಕೆ ಅನುವಾದವಾಗಿವೆ” ಎಂದರು.

ವಿಶೇಷವೆಂದರೆ ಉಚ್ಚ ನ್ಯಾಯಾಲಯದ ತೀರ್ಪುಗಳನ್ನು ಕೃತಕ ಬುದ್ದಿಮತ್ತೆ (Artificial Intelligence) ಬಳಕೆ ಮಾಡಿ ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದ ಮಾಡುವುದಕ್ಕೆ ಸಂಬಂಧಿಸಿದ ಪ್ರಕ್ರಿಯೆಯನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಈಚೆಗೆ ಆರಂಭಿಸಲಾಗಿದೆ. ಇದರ ಭಾಗವಾಗಿ ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಕೃಷ್ಣ ಎಸ್‌. ದೀಕ್ಷಿತ್‌ ಮತ್ತು ಸಿ ಎಂ ಜೋಶಿ ಅವರ ನೇತೃತ್ವದಲ್ಲಿ ಕೃತಕ ಬುದ್ದಿಮತ್ತೆ ಬಳಕೆ ಮಾಡಿ ನ್ಯಾಯಾಂಗ ದಾಖಲೆಗಳನ್ನು ಅನುವಾದ ಮಾಡುವ ಸಲಹಾ ಸಮಿತಿಯನ್ನು 2023ರ ಫೆಬ್ರವರಿಯಲ್ಲಿ ರಚಿಸಲಾಗಿದೆ.

Tags: high courtjudgementKannadasupreme court
Previous Post

ಪಂಚಮಸಾಲಿ ಮೀಸಲಾತಿ ಫೈಟ್‌‌.. ಕಾಂಗ್ರೆಸ್‌ ಸರ್ಕಾರದಲ್ಲಿ ಲಿಂಗಾಯತರ ಒಗ್ಗಟ್ಟು ಛಿದ್ರ ಛಿದ್ರ..

Next Post

ನಾಳೆ ದರ್ಶನ್‌ ಜಾಮೀನು ಭವಿಷ್ಯ.. ನಾಳೆ ಮತ್ತೆ ಜೈಲಿಗೆ ಹೋಗ್ತಾರಾ ದರ್ಶನ್‌..?

Related Posts

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
0

ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy stadium) ಕಾಲ್ತುಳಿತ ದುರಂತದ (Stamped case) ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದ ಸಮಾರಂಭಗಳಿಗೆ ಎಸ್‌ಒಪಿ (SOP) ರಚನೆ ಮಾಡಿ...

Read moreDetails
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post

ನಾಳೆ ದರ್ಶನ್‌ ಜಾಮೀನು ಭವಿಷ್ಯ.. ನಾಳೆ ಮತ್ತೆ ಜೈಲಿಗೆ ಹೋಗ್ತಾರಾ ದರ್ಶನ್‌..?

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

by Chetan
July 2, 2025
ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 
Top Story

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

by Chetan
July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!