ಬೆಂಗಳೂರು: ಯಾವ ಲಾಭಕ್ಕಾಗಿ ಬಂದ್ ಮಾಡುತ್ತೀರಿ? ಕಾವೇರಿ ಪರವಾಗಿ ಸರ್ಕಾರವೇ ಹೋರಾಟಕ್ಕೆ ನಿಂತಿದೆ.ಬಂದ್ ಮಾಡೋದ್ರಿಂದ ಯಾವುದೇ ಅನುಕೂಲ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರು ಬಂದ್ ಕರೆಯ ಹಿನ್ನಲೆಯಲ್ಲಿ ತಮ್ಮ ನಿವಾಸದಲ್ಲಿ ಶನಿವಾರ ಮಾತನಾಡಿದ ಅವರು, ಬೆಂಗಳೂರಿನ ಮರ್ಯಾದೆ ಹಾಳುಮಾಡಬೇಡಿ ಎಂದರು.
ಬೆಂಗಳೂರಿನ ಮರ್ಯಾದೆ ಹಾಳು ಮಾಡಿದರೆ ನೀವೇ ಚುಚ್ಚಿಕೊಂಡಂತೆ. ಬೆಂಗಳೂರಿನಲ್ಲಿ ಎಲ್ಲಾ ಭಾಷೆ, ಬೇರೆ ಬೇರೆ ರಾಜ್ಯದ ಜನ ವಾಸವಾಗಿದ್ದಾರೆ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದ್ರೂ ಹೋರಾಟ ಮಾಡಬಹುದು. ಅವರವರ ಹೋರಾಟ ಅವರು ಮಾಡ್ತಾರೆ. ಒಳಗಡೆ ಬಂದಾಗ ರಾಜ್ಯದ ಹಿತ, ಹೊರಗಡೆ ಹೋದಾಗ ರಾಜಕಾರಣ ಇದು ನಡೆಯುತ್ತದೆ. ನಾವು ರಾಜ್ಯದ ಹಿತ ಕಾಪಾಡುತ್ತಿದ್ದೇವೆ. ಹೊಸ ಹುರುಪು ಪ್ರತಿಭಟನೆ ಮಾಡ್ತಾ ಇದ್ದಾರೆ ಮಾಡಲಿ ಎಂದರು.