ಬೆಂಗಳೂರು (Bengaluru): ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳ ಹೆಸರಿನಲ್ಲಿ 1 ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯ ನಿರ್ಮಿಸಲು ಸಚಿವ ಎಂ.ಬಿ.ಪಾಟೀಲ್ ಸೂಚಿಸಿದ್ದಾರೆ.
ವಿಜಯಪುರ ಹೊರವಲಯದ ಭೂತನಾಳ ಕೆರೆಯ ಗೆಸ್ಟ್ ಹೌಸ್ ನಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳ ಹೆಸರಿನಲ್ಲಿ 1 ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯ ನಿರ್ಮಿಸಿ ಎಂದು ಸೂಚಿಸಿದ್ದಾರೆ.

ಅರಣ್ಯದಲ್ಲಿ ಮಕ್ಕಳಿಗೆ ಪರಿಸರದ ಬಗೆಗೆ ಅರಿವು ಮೂಡಿಸಲು ವಿಜ್ಞಾನ ಮತ್ತು ಧ್ಯಾನ ಕೇಂದ್ರ, ತಾರಾಲಯ ಸ್ಥಾಪಿಸಲು ಸ್ಥಳ ಗುರುತಿಸುವಂತೆ ಸೂಚಿಸಿದ್ದಾರೆ.

ಇದೇ ವೇಳೆ ಭೂತನಾಳ ಮತ್ತು ಬಾಬಾನಗರ ಬಳಿ 200 ಹೆಕ್ಟೇರ್ ಪ್ರದೇಶವನ್ನು ಅರಣ್ಯೀಕರಣಕ್ಕೆ ಗುರುತಿಸಲು ಹಾಗೂ ಈ ಪ್ರದೇಶದಲ್ಲಿ ಕಾಡು ಬೆಳೆಸುವ ಕುರಿತು ಸಮಗ್ರ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.
#karnataka #bengaluru #siddeshwaraswamiji #forest #mbpatil