ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಚಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ದಾ ಆದೇಶ ಹೊರಡಿಸಿದ್ದಾರೆ.
ಪ್ರಚಾರ ಸಮಿತಿಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಹಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೂ ಸೇರಿದಂತೆ 25 ಮಂದಿಯನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಚುನಾವಣಾ ನಿರ್ವಹಣಾ ಸಮಿತಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಂಚಾಲಕರನ್ನಾಗಿ ಮಾಡಲಾಗಿದೆ. ಈ ಸಮಿತಿಯಲ್ಲಿ 14 ಮಂದಿ ಸದಸ್ಯರಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ನಿರ್ದೇಶನದ ಮೇರೆಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರು ಸಮಿತಿಗಳನ್ನು ರಚನೆ ಮಾಡಿದ್ದಾರೆ.

ಪ್ರಚಾರ ಸಮಿತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯ ಚುನಾವಣಾ ಪ್ರಚಾರ ಸಮಿತಿಯ ಸದಸ್ಯರನ್ನಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪಕ್ಷದ ನಾಯಕರಾದ ಡಿ.ವಿ ಸದಾನಂದ ಗೌಡ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಎ ನಾರಾಯಣಸ್ವಾಮಿ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಸಚಿವರಾದ ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಆರ್. ಅಶೋಕ್, ಶಶಿಕಲಾ ಜೊಲ್ಲೆ, ಸಿ.ಸಿ ಪಾಟೀಲ್, ಎಸ್.ಟಿ ಸೋಮಶೇಖರ್, ಡಾ. ಕೆ. ಸುಧಾಕರ್, ಪ್ರಭು ಚೌಹಾಣ್, ಅಶ್ವತ್ಥನಾರಾಯಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಸಂಸದರಾದ ವಿ. ಶ್ರೀನಿವಾಸ್ ಪ್ರಸಾದ್, ಪಿ.ಸಿ ಮೋಹನ್, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ರಮೇಶ್ ಜಾರಕಿಹೊಳಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಿಸಲಾಗಿದೆ.
ಚುನಾವಣಾ ನಿರ್ವಹಣಾ ಸಮಿತಿ: ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ. ಕೇಂದ್ರ ಸಚಿವ ಭಗವಂತ ಖೂಬಾ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮುಖಂಡರಾದ ಅರವಿಂದ ಲಿಂಬಾವಳಿ, ರಘುನಾಥರಾವ್ ಮಲ್ಕಾಪುರೆ, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನ, ತೇಜಸ್ವಿನಿ ಅನಂತಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಎನ್. ರವಿಕುಮಾರ್, ಸಿದ್ದರಾಜು, ಸಚಿವ ಅಶ್ವತ್ಥನಾರಾಯಣ, ಮಹೇಶ್ ಟೆಂಗಿನಕಾಯಿ, ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್, ಎಸ್ಸಿ ಮೋರ್ಚಾ ರಾಜ್ಯಾದ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹಾಗೂ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಅವರನ್ನ ಸದಸ್ಯರನ್ನಾಗಿ ನೇಮಿಸಲಾಗಿದೆ.