ಜಮ್ಮು ಕಾಶ್ಮೀರದಲ್ಲಿ ಸಿಕ್ಕಿಬಿದ್ದ ಲಷ್ಕರೆ ತೋಯ್ಬಾ ಉಗ್ರ ಬಿಜೆಪಿ ಸಕ್ರಿಯ ಕಾರ್ಯಕರ್ತನಾಗಿದ್ದು, ಜಮ್ಮುವಿನಲ್ಲಿ ಬಿಜೆಪಿ ಅಲ್ಪಸಂಖ್ಯಾತ ವಿಭಾಗದ ಐಟಿ ಸೆಲ್ ಮುಖ‍್ಯಸ್ಥನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಲಷ್ಕರೆ ತೋಯ್ಬಾ ಉಗ್ರ ತಾಲಿಬ್ ಹುಸೇನ್ ಶಾನನ್ನು ಜಮ್ಮುವಿನ ರಾಸಿ ಪ್ರದೇಶದಲ್ಲಿ ಬಂಧಿಸಲಾಗಿತ್ತು. ಬಂಧಿತನಿಂದ 2 ಎಕೆ ರೈಫಲ್ಸ್, ಹಲವಾರು ಗ್ರೇನೇಡ್ ಸೇರಿದಂತೆ ಹಲವಾರು ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಯಾವುದೇ ವ್ಯಕ್ತಿಯ ಹಿನ್ನೆಲೆ ತಿಳಿಯದೇ ಮನಸೋ ಇಚ್ಛೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿರುವ ಬಗ್ಗೆ ಬಿಜೆಪಿ ಹಿರಿಯ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.