ಬೆಂಗಳೂರು :ಏ.೦೩: ಆರು ಬಾರಿ ಶಾಸಕರಾಗಿದ್ದ ಕೂಡ್ಲಗಿಯ ಬಿಜೆಪಿ ಹಿರಿಯ ಮುಖಂಡ ಎನ್.ವೈ.ಗೋಪಾಲಕೃಷ್ಣ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಕಾಂಗ್ರೆಸ್ ನಿಂದ ಕಾಂಗ್ರೆಸ್ ನಾಲ್ಕು ಸಲ ಮೊಳಕಾಲ್ಮೂರು, ಒಂದು ಸಲ ಬಳ್ಳಾರಿ ಗ್ರಾಮೀಣ, 2018ರಲ್ಲಿ ಬಿಜೆಪಿಯಿಂದ ಕೂಡ್ಲಿಗಿ ಶಾಸಕರಾಗಿ ಆಯ್ಕೆಯಾಗಿದ್ದರು. ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಶುಕ್ರವಾರ ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದ್ದ ಗೋಪಾಲಕೃಷ್ಣ ಅವರು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಭಾವುಟ ನೀಡಿ ಡಿಕೆಶಿ ಮತ್ತು ಸಿದ್ದರಾಮಯ್ಯ ಅವರು, ಗೋಪಾಲಕೃಷ್ಣ ಅವರನ್ನ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.






