ಬೆಲೆ ಏರಿಕೆ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶವನ್ನ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ಸರ್ಕಾರದ ನಡೆಗಳ ಬಗ್ಗೆ ಆಕ್ರೋಶವನ್ನ ವ್ಯಕ್ತ ಪಡಿಸಿದ್ದಾರೆ.
ತಮ್ಮ ಟ್ವಿಟ್ನಲ್ಲಿ, ʼʼಆಲ್ಕೊಹಾಲಿನ ಬೆಲೆ ಏರಿಸಿದ ನಂತರ @INCKarnataka ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ!!!ʼʼ
”ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು.ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ. 2/4”
ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ.3/4
ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ.
ಒಟ್ಟಾರೆಯಾಗಿ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಪ್ರವೃತ್ತಿಯ ಬಗ್ಗೆ ಆಕ್ರೋಶವನ್ನ ವ್ಯಕ್ತ ಪಡಿಸಿದ್ದು, ಜನಸಾಮಾನ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಹಲವು ರೀತಿಯಾದ ಸಂಕಷ್ಟಗಳನ್ನ ತಂದೊಡ್ಡಿದೆ ಎಂದು ಕಿಡಿಕಾರೋದಕ್ಕೆ ಶುರುಮಾಡಿದ್ದಾರೆ.