• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕದಲ್ಲಿ ಜನನಾಯಕರಾಗಿ ಬೆಳೆದವರಲ್ಲಿ ಮಾಜಿ ಮುಖ್ಯ ಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರೂ ಒಬ್ಬರು….

ಪ್ರತಿಧ್ವನಿ by ಪ್ರತಿಧ್ವನಿ
August 4, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಕರ್ನಾಟಕದಲ್ಲಿ ಜನನಾಯಕರಾಗಿ ಬೆಳೆದವರಲ್ಲಿ ಮಾಜಿ ಮುಖ್ಯ ಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರೂ ಒಬ್ಬರು….
Share on WhatsAppShare on FacebookShare on Telegram

ಜನನಾಯಕರು ಸಂದರ್ಭಕ್ಕೆ ಪೂರಕವಾಗಿ ತಮ್ಮ ನಿಲುವು ಮತ್ತು ಹೇಳಿಕೆಗಳನ್ನು ಬದಲಾಯಿಸಿದರೆ ಅವರು ಜನನಾಯಕರಾಗುವುದಿಲ್ಲ. ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಕುಮಾರ ಸ್ವಾಮಿ ಅವರೊಂದಿಗೆ ಸಮ್ಮಿಶ್ರ ಸರ್ಕಾರ ನಡೆಸಿದ ಯಡಿಯೂರಪ್ಪನವರು, ಕುಮಾರಸ್ವಾಮಿ ಅವರಿಂದ ಅಧಿಕಾರ ವಂಚಿತರಾಗಿ ವಚನ ಭ್ರಷ್ಟತೆಯ ಆರೋಪ ಮಾಡಿ ಇದೇ ಕಾರಣಕ್ಕಾಗಿ ಹೋರಾಟ ಮಾಡಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರು. ತದನಂತರ ಬೇರೆಬೇರೆ ಸಂದರ್ಭಗಳಲ್ಲಿ ಜೆಡಿಎಸ್ ಪಕ್ಷದ ಮೇಲೆ, ದೇವೇಗೌಡರ ಮೇಲೆ ಮತ್ತು ಅವರ ಕುಟುಂಬದ ಮೇಲೆ ವಿಧಾನ ಮಂಡಲದ ಒಳಗಡೆ ಗುರುತರವಾದ ಆರೋಪಗಳನ್ನು ಮಾಡಿ ಆ ಆರೋಪಗಳು ಧಾಖಲೆ ಆಗಿರುತ್ತವೆ. ಆದರೆ ಮಗನ ರಾಜಕಾರಣದ ಭವಿಷ್ಯದ ಅನಿವಾರ್ಯತೆಗಾಗಿ ಜೆಡಿಎಸ್ ಪಕ್ಷ ಮತ್ತು ಹೆಚ್. ಡಿ. ಕುಮಾರಸ್ವಾಮಿ ಅವರೊಂದಿಗೆ ಕೈ ಜೋಡಿಸಿ ನೆನ್ನೆ ದಿನ ಪಾದಯಾತ್ರೆಗೆ ಚಾಲನೆ ನೀಡುವುದರ ಮೂಲಕ ವರ್ತಮಾನ ಕಾಲದ ದುರಂತ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಮಾನ್ಯ ಯಡಿಯೂರಪ್ಪನವರು ಕರ್ನಾಟಕದ ಜನರಿಗೆ ಕೆಳಕಂಡ ಪ್ರಶ್ನೆಗಳಿಗೆ ಸಾರ್ವಜನಿಕವಾಗಿ ಉತ್ತರಿಸಲು ಕಾಂಗ್ರೆಸ್ ಪಕ್ಷದ ಪರವಾಗಿ ಒತ್ತಾಯಿಸುತ್ತೇನೆ:

ADVERTISEMENT
  1. ಯಡಿಯೂರಪ್ಪನವರು 2008ರಲ್ಲಿ ಜೆಡಿಎಸ್ ಪಕ್ಷದ ಮೇಲೆ, ಹೆಚ್. ಡಿ. ಕುಮಾರ ಸ್ವಾಮಿ ಅವರ ಮೇಲೆ ಮಾಡಿದ್ದ ವಚನ ಭ್ರಷ್ಟತೆಯ ಆರೋಪವನ್ನು ಹಿಂದಕ್ಕೆ ಪಡೆಯುತ್ತಾರೆಯೇ?
  2. 17-03-2011 ರಲ್ಲಿ ಈ ರಾಜ್ಯದ ಮುಖ್ಯ ಮಂತ್ರಿಯಾಗಿ ಕರ್ನಾಟಕದ ವಿಧಾನ ಪರಿಷತ್ ನಲ್ಲಿ ಮಾತನಾಡಿ ದೇವೇಗೌಡರು ಅವರ ಕುಟುಂಬದವರಿಗೆ ಮೈಸೂರಿನ ಮೂಡ ದಲ್ಲಿ ಅಕ್ರಮವಾಗಿ 48 ನಿವೇಶನಗಳನ್ನು ನೀಡಿರುವುದಾಗಿ ಮಾಡಿದ್ದ ಆರೋಪವನ್ನು ಹಿಂದಕ್ಕೆ ಪಡೆಯುತ್ತಾರೆಯೇ?
  3. ಅದೇ ದಿನ ವಿಧಾನ ಪರಿಷತಿನಲ್ಲಿ ಆರೋಪ ಮಾಡಿ ಜಂತ್ ಕಲ್ ಮೈನಿಂಗ್ ನವೀಕರಣದಲ್ಲಿ ದೇವೇಗೌಡರ ಕುಟುಂಬದವರು ಪಾಲುಗರಿಕೆ ಪಡೆದಿದ್ದಾರೆ ಎಂದು ಮಾಡಿದ್ದ ಆರೋಪವನ್ನು ಹಿಂದಕ್ಕೆ ಪಡೆಯುತ್ತಾರೆಯೇ?
  4. ಕುಮಾರ ಸ್ವಾಮಿ ಅವರಿಗೆ ಮೂಡದಲ್ಲಿ ನಿವೇಶನ ಸಂಖ್ಯೆ. 17B(1) ವಿಸ್ತೀರ್ಣ 75X280 ಅಡಿ 1984 ರಲ್ಲಿ ಅಕ್ರಮವಾಗಿ ಹಂಚಿಕೆಯಾಗಿದೆ ಎಂದು ಮಾಡಿದ್ದ ಆರೋಪವನ್ನು ಹಿಂದಕ್ಕೆ ಪಡೆಯುತ್ತಾರೆಯೇ?
  5. 25-05-2018 ರಲ್ಲಿ ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾಗಿ ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡುವಾಗ, ಹೆಚ್. ಡಿ. ಕುಮಾರ ಸ್ವಾಮಿ ರವರು ತಾವು ಬೆಂಬಲ ವಾಪಸ್ಸು ಪಡೆದ ನಂತರ ಅಂದಿನ ಮುಖ್ಯ ಮಂತ್ರಿಯಾಗಿ 22 ಗಣಿಗಾರಿಕೆ ಗುತ್ತಿಗೆ ಅನುಮೋದನೆ ಮಾಡಿ ಅಕ್ರಮ ಎಸಗಿದ್ದಾರೆ ಎಂದು ಮಾಡಿದ್ದ ಆರೋಪವನ್ನು ಹಿಂದಕ್ಕೆ ಪಡೆಯುತ್ತಾರೆಯೇ?
  6. ಅದೇ ದಿನ ವಿಧಾನ ಸಭೆಯಲ್ಲಿ ಮಾತನಾಡುವಾಗ 1984 ರಲ್ಲಿ ದೇವೇಗೌಡರು ಅವರ ಕುಟುಂಬದವರಿಗೆ ಮೂಡದಲ್ಲಿ 46 ನಿವೇಶನ ಹಂಚಿಕೆ ಮಾಡಿದ್ದರು ಎಂದು ಮಾಡಿದ್ದ ಆರೋಪವನ್ನು ಹಿಂದಕ್ಕೆ ಪಡೆಯುತ್ತಾರೆಯೇ?
  7. ಬಿ. ಎಸ್. ಯಡಿಯೂರಪ್ಪನವರು ಅಂದಿನ ರಾಜ್ಯಪಾಲರು ತಮ್ಮ ವಿರುದ್ದ ಬಂದ ಆರೋಪದ ಮೇಲೆ Prosecution ವಿಚಾರಣೆಗೆ ಅನುಮತಿ ನೀಡಿದ್ದನ್ನು ಕರ್ನಾಟಕ ಹೈ ಕೋರ್ಟ್ ನಲ್ಲಿ ರಿಟ್ ಪಿಟಿಷನ್ ಮುಖಾಂತರ ಪ್ರಶ್ನೆ ಮಾಡಿದ್ದು, ಹೈ ಕೋರ್ಟ್ ಇವರ ಅರ್ಜಿಯನ್ನು ಮಾನ್ಯ ಮಾಡಿ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿದ್ದು, ತಪ್ಪು ಎಂದು ಹೇಳಿರುತ್ತದೆ. ಯಡಿಯೂರಪ್ಪನವರು ಈ ತೀರ್ಪುನ್ನು ಒಪ್ಪುತ್ತಾರೆಯೇ ಅಥವಾ ನಿರಾಕರಿಸುತ್ತಾರೆಯೇ?
  8. ಯಡಿಯೂರಪ್ಪನರು ತಮ್ಮ ಪ್ರಕರಣದಲ್ಲಿ ಅರ್ಜಿದಾರರಾದ ಬಾಲರಾಜ್ ಮತ್ತು ಶಿರಾಜಿನ್ ಭಾಷಾ ರವರನ್ನು ಬಳಸಿಕೊಂಡು ಶ್ರೀ ಹೆಚ್. ಡಿ. ದೇವೇಗೌಡರು ತಮ್ಮ ವಿರುದ್ಧ ದೂರು ದಾಖಲಿಸಿದ್ದರು ಎಂದು ಅನೇಕ ಸಂಧರ್ಭಗಳಲ್ಲಿ ಆರೋಪ ಮಾಡಿದ್ದರು. ಯಡಿಯೂರಪ್ಪನವರು ಈ ಆರೋಪವನ್ನು ಹಿಂದಕ್ಕೆ ಪಡೆಯುತ್ತಾರೆಯೇ?
  9. ಯಡಿಯೂರಪ್ಪನವರು ಪಾದಯಾತ್ರೆಯ ಉದ್ಘಾಟನೆಗೆ ತಮ್ಮ ಪ್ರಕರಣದ ದೂರುದಾರರಾದ ಬಾಲರಾಜ್ ಮತ್ತು ಶಿರಾಜಿನ್ ಭಾಷರವರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಲು ತಮ್ಮ ಪಕ್ಷದ ಹೈ ಕಮಾಂಡ್ ನಿಂದ ಯಾವುದೇ ನಿರ್ಬಂಧ ಇತ್ತೇ?
  10. ಮೂಡ ಪ್ರಕರಣದಲ್ಲಿ ಪಾದಯಾತ್ರೆ ಉದ್ಘಾಟಿಸಿದ ಯಡಿಯೂರಪ್ಪನವರು ಬೆಂಗಳೂರು ದಕ್ಷಿಣ ತಾಲೂಕು, ಉತ್ತರಹಳ್ಳಿ ಹೋಬಳಿ ಬಿ. ಎಂ. ಕಾವಲು ಗ್ರಾಮದ ಸುಮಾರು 2500 ಎಕರೆ ಅಕ್ರಮ ಭೂಮಿ ಹಂಚಿಕೆ ಆರೋಪದ ಸಂಬಂಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಿರುದ್ಧ ತನಿಖೆಗೆ ಒತ್ತಾಯಿಸುವರೇ?

ಮಾನ್ಯ ಯಡಿಯೂರಪ್ಪನವರು ಈ ರಾಜ್ಯದ ಒಬ್ಬ ಜನನಾಯಕರಾಗಿದ್ದು, ಸದನದ ಒಳಗಡೆ ಅವರು ಹೆಚ್. ಡಿ. ಕುಮಾರಸ್ವಾಮಿ ಮತ್ತು ಅವರ ಕುಟುಂಬದ ಮೇಲೆ ಆರೋಪಗಳನ್ನು ಮಾಡಿದ್ದು, ಇವುಗಳು ಅಧಿಕೃತ ದಾಖಲೆಗಳಾಗಿ ಉಳಿದುಕೊಂಡಿರುತ್ತವೆ. ಮಾನ್ಯ ಯಡಿಯೂರಪ್ಪನವರು ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಅವರ ನಾಯಕತ್ವಕ್ಕೆ ಅನುಗುಣವಾಗಿ ಮೇಲಿನ 10 ಪ್ರಶ್ನೆಗಳಿಗೆ ಉತ್ತರಿಸಲು ಕೋರುತ್ತೇನೆ.

ವಂದನೆಗಳೊಂದಿಗೆ,

ರಮೇಶ್ ಬಾಬು,
ಅಧ್ಯಕ್ಷರು, ಮಾಧ್ಯಮ ಮತ್ತು ಸಂವಹನ ವಿಭಾಗ,
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ,
ಬೆಂಗಳೂರು

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೀದರ್‌ | ಆರು ಪಿಡಿಒಗಳ ವಿರುದ್ಧ ಕ್ರಮಕ್ಕೆ ಶಿಫಾರಸು

Next Post

ಮೃತ PSI ಪರಶುರಾಮ ಪೋಸ್ಟ್ ಮಾರ್ಟಮ್ ಪ್ರೊಸಿಜರ್ ಮೇಲೂ ಮೂಡಿದ ಅನುಮಾನ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

ಮೃತ PSI ಪರಶುರಾಮ ಪೋಸ್ಟ್ ಮಾರ್ಟಮ್ ಪ್ರೊಸಿಜರ್ ಮೇಲೂ ಮೂಡಿದ ಅನುಮಾನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada