
ಬೆಂಗಳೂರು :ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ವಿಧಿವಶರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು.
ಮಾಜಿ ಸಿಎಂ ಎಸ್.ಎಂ. ಕೃಷ್ಣ(92) ನಿಧನರಾಗಿದ್ದಾರೆ. ಅವರು ಬೆಂಗಳೂರನ್ನು ಸಿಂಗಾಪುರ ಮಾಡುವ ಕನಸು ಕಂಡಿದ್ದರು. ಆಧುನಿಕ ಬೆಂಗಳೂರು ನಿರ್ಮಾಣದಲ್ಲಿ ಪ್ರಮುಖ ಪಾತ್ರ ಅವರದ್ದಾಗಿದೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು.ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.
ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇವರ ನಿಧನಕ್ಕೆ ಸಾಕಷ್ಟು ರಾಜಕೀಯ ಧುರೀಣರು ಸಂತಾಪ ವ್ಯಕ್ತಪಡಿಸಿದ್ದಾರೆ.