ಹುಬ್ಬಳ್ಳಿ : ರಾಜ್ಯ ವಿಧಾನಸಭಾ ಚುನಾವಣೆಯ ಕೌಂಟ್ಡೌನ್ ಜೋರಾಗಿದೆ.ಬಿಜೆಪಿಯಲ್ಲಿ ಟಿಕೆಟ್ ಸಿಗದೇ ಕಾಂಗ್ರೆಸ್ಗೆ ಪಲಾಯನ ಮಾಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಆಘಾತ ಎದುರಾಗಿದೆ.

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನಿಸಿರುವ ಜಗದೀಶ್ ಶೆಟ್ಟರ್ ಹಿನ್ನೆಡೆ ಕಂಡಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಗೆದ್ದು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇನೆ ಎಂದಿದ್ದ ಶೆಟ್ಟರ್ಗೆ ಚುನಾವಣಾ ಕೌಂಟಿಂಗ್ ಶಾಕ್ ನೀಡಿದೆ.
ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಮುನ್ನಡೆ ಸಾಧಿಸಿದ್ದಾರೆ.