• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಡಿಸಿಎಂ ಡಿಕೆಶಿ ವಿರುದ್ಧ ಹೆಚ್​ಡಿಕೆ ಕೆಂಡಾಮಂಡಲ : 40% ಕಮಿಷನ್​ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸವಾಲು

Any Mind by Any Mind
June 12, 2023
in ರಾಜಕೀಯ
0
ಡಿಸಿಎಂ ಡಿಕೆಶಿ ವಿರುದ್ಧ ಹೆಚ್​ಡಿಕೆ ಕೆಂಡಾಮಂಡಲ : 40% ಕಮಿಷನ್​ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸವಾಲು
Share on WhatsAppShare on FacebookShare on Telegram

ರಾಮನಗರ/ಚೆನ್ನಪಟ್ಟಣ : ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿರುವುದಕ್ಕೆ ಹೇಳಿಕೆಗೆ ತಿರುಗೇಟು ನೀಡಿದ ಅವರು: ಹಿಂದೆ ಇದೇ ಜನ ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ್ದರು. ಆ ಆರೋಪವನ್ನು ಅವರು ಸಾಬೀತು ಮಾಡಿದ್ದರಾ? ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರಾ? ಈಗ ನೋಡಿದರೆ ನನಗೆ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ADVERTISEMENT

ಈಗ ಕಾಂಗ್ರೆಸ್ ನವರದ್ದೇ ಸರ್ಕಾರ ಇದೆ. 40% ವಿಚಾರವನ್ನು ತನಿಖೆ ಮಾಡಿಸಲಿ, ಸತ್ಯ ಜನರ ಮುಂದೆ ಇಡಲಿ. ಆರೋಪ ಮಾಡಿದವರ ಬಳಿ ಸಾಕ್ಷ್ಯ ಇರಲೇಬೇಕಲ್ಲವೇ? ಗುತ್ತಿಗೆದಾರರ ಸಂಘದವರು ದೂರು ಕೊಟ್ಟಿದ್ದರಲ್ಲ, ಅವರು ಸಾಕ್ಷಿ ಇಟ್ಟಿದ್ರಾ.? ಲೋಕಾಯುಕ್ತಕ್ಕೆ ದೂರು ನೀಡಲು ಅಡ್ಡಿ ಮಾಡಿದ್ದವರು ಯಾರು? ಎಂದು ಅವರು ಪ್ರಶ್ನಿಸಿದರು.ಕಳೆದ ಮೇ 8 ರಂದು ಮಹಾನಗರ ಪಾಲಿಕೆಯಲ್ಲಿ 675 ಕೋಟಿ LOC ಹಣವನ್ನ ಯಾಕೆ ರಿಲೀಸ್ ಮಾಡಿಲ್ಲ? ಅದನ್ನು ಯಾಕೆ ಇಟ್ಟುಕೊಂಡಿದ್ದೀರಿ? ಅದರ ಬಗ್ಗೆ ನೀವು ಮೊದಲು ಜನತೆಗೆ ಹೇಳಿ ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಕೆಡಿಪಿ ಸಭೆಯಲ್ಲಿ ಭಾಗವಹಿಸಿದ ಮಾಜಿ ಸಿಎಂ:

ಚುನಾವಣೆ ಮುಗಿದು ಹೊಸ ಸರ್ಕಾರ ರಚನೆ ಆದ ನಂತರ ಚನ್ನಪಟ್ಟಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕುಮಾರಸ್ವಾಮಿ ಅವರು ಭಾಗಿಯಾದರು.ಇಲಾಖಾವಾರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು; ತಾಲೂಕಿನ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿರುವ ವಿಚಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಅವರು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು ಹಾಗೂ ಕಾಡಾನೆ ತಡೆಯಲು ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಸೂಚಿಸಿದರು.ಕೆಡಿಪಿ ಸಭೆಗೂ ಮುನ್ನ ಅವಾರು ಶಾಸಕರ ಕಚೇರಿ ಉದ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರು ಹೆಚ್‌ಡಿಕೆ ಅವರನ್ನು ಸನ್ಮಾನಿಸಿದರು.

Tags: BJP accused of 40 percent commissionDCM DK SivakumarFormer CM HD Kumaraswamy
Previous Post

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಗಾಳಿಸುದ್ದಿ : ಮಾಜಿ ಸಿಎಂ ಹೆಚ್​ಡಿಕೆ

Next Post

ಮಹಿಳೆಯರ ಉಚಿತ ಬಸ್​ ಪ್ರಯಾಣಕ್ಕೆ ಬೇಕಿಲ್ಲ ಒರಿಜಿನಲ್​ ಗುರುತಿನ ಚೀಟಿ : ನಕಲು ಪ್ರತಿಯೇ ಸಾಕು

Related Posts

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ
ರಾಜಕೀಯ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

by ಪ್ರತಿಧ್ವನಿ
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಲೇಜು ದಿನಗಳ ಪ್ರೇಮಕಥೆ ಹಾಗೂ ಸರ್ಕಾರದ ‘ಭಾಗ್ಯ’ ಯೋಜನೆಗಳ ಅರ್ಥ ಕುರಿತು ನೀಡಿದ ಹೇಳಿಕೆ ಇದೀಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.ಇತ್ತೀಚಿನ ಸಂದರ್ಶನವೊಂದರಲ್ಲಿ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ಮಹಿಳೆಯರ ಉಚಿತ ಬಸ್​ ಪ್ರಯಾಣಕ್ಕೆ ಬೇಕಿಲ್ಲ ಒರಿಜಿನಲ್​ ಗುರುತಿನ ಚೀಟಿ : ನಕಲು ಪ್ರತಿಯೇ ಸಾಕು

ಮಹಿಳೆಯರ ಉಚಿತ ಬಸ್​ ಪ್ರಯಾಣಕ್ಕೆ ಬೇಕಿಲ್ಲ ಒರಿಜಿನಲ್​ ಗುರುತಿನ ಚೀಟಿ : ನಕಲು ಪ್ರತಿಯೇ ಸಾಕು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!