ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಸರ್ಕಾರ(Government) ಎಂದು ಮಾಜಿ ಮುಖ್ಯಮಂತ್ರಿ(Former Chief minister) ಎಚ್.ಡಿ.ಕುಮಾರಸ್ವಾಮಿ(HDKumaraswamy) ಕಟುವಾಗಿ ಟೀಕಿಸಿದ್ದಾರೆ.
ಒಂದು ಕಡೆ ಬರಗಾಲ, ಕೇಂದ್ರ ಸರ್ಕಾರ(Union Government)ದಿಂದ ಹಣ ಬರುತ್ತಿಲ್ಲ ಎನ್ನುವ ಸರ್ಕಾರ ಇಲ್ಲಿ ನೋಡಿದರೆ ಗಂಜಿ ಕೇಂದ್ರಗಳನ್ನು ಸೃಷ್ಟಿ ಮಾಡಿ 90 ಮಂದಿಗೆ ಸಂಪುಟ ದರ್ಜೆ ನೀಡಿದೆ. ಅದರಲ್ಲಿ 77 ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ನೀಡಿದ್ದರೆ, ಸಿಎಂ ಕಚೇರಿಯಲ್ಲಿ 9 ಜನರಿಗೆ ಸಂಪುಟ ಭಾಗ್ಯ ಕರುಣಿಸಲಾಗಿದೆ. ರಾಜ್ಯದ ಆಡಳಿತಾತ್ಮಕ ಇತಿಹಾಸದಲ್ಲಿಯೂ ಇಷ್ಟು ಬೇಕಾಬಿಟ್ಟಿಯಾಗಿ ಅಧಿಕಾರ ಹಂಚಿಕೆ ಮಾಡಿ ಖಜಾನೆಗೆ ನಷ್ಟ ಉಂಟು ಮಾಡಲಾಗಿದೆ ಎಂದು ಅವರು ದೂರಿದರು.

ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಲಾದ ರಾಜ್ಯಪಾಲರ(Governor) ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕ್ಯಾಬಿನೆಟ್ ದರ್ಜೆ ಅದಕ್ಕೊಂದು ಲೆಕ್ಕ ಬೇಡವೇ? ಉಪ ಮುಖ್ಯಮಂತ್ರಿ(Deputy ChiefMinister) ಅವರ ಆರೋಗ್ಯ ತಪಾಸಣೆ ಮಾಡುವ ವೈದ್ಯರಿಗೂ ಕ್ಯಾಬಿನೆಟ್ ದರ್ಜೆ! ಕಲೆಕ್ಷನ್(Collection) ಮಾಡಿಕೊಡುವ ಅಸಾಮಿಗೂ ಕ್ಯಾಬಿನೆಟ್ ದರ್ಜೆ!! ಕರ್ನಾಟಕ ಹಣಕಾಸು ಸಂಸ್ಥೆ(KSFC) ಅಧ್ಯಕ್ಷರನ್ನಾಗಿ ಶಾಸಕರನ್ನು ನೇಮಕ ಮಾಡುತ್ತಿರುವುದು ಉಂಟಾ? ಎಂದು ಸರ್ಕಾರವನ್ನು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಬರಕ್ಕೆ ತುತ್ತಾದ ರೈತರಿಗೆ ಪರಿಹಾರ ಕೊಡಲು ಇವರಲ್ಲಿ ಹಣವಿಲ್ಲ. ಆದರೆ, ಸಂಪುಟ ದರ್ಜೆ ಭಾಗ್ಯಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆ. ಇದನ್ನು ಏನೆಂದು ಕರೆಯಬೇಕು? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.
ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಪ್ರತೀ ವರ್ಷ ನಡೆಯುವ ಶಾಸ್ತ್ರವಷ್ಟೇ. ಪ್ರತಿ ವರ್ಷದ ಸಂಪ್ರದಾಯದಂತೆ ವಿಧಾನಸಭೆ ಕಲಾಪಗಳು ನಡೆಯುತ್ತವೆ. ಸರಕಾರದ ಮುಂದಿನ ವರ್ಷದ ನೀಲನಕ್ಷೆ ಹಾಗೂ ಸಾಧನೆಗಳ ನೋಟವನ್ನು ಕೊಡಬೇಕು. ಅದನ್ನು ಮಾಡದ ಕೆಲಸಗಳ ಬಗ್ಗೆ ಡಂಗುರ ಹೊಡೆಯುವ ಕೆಲಸ ಅಷ್ಟೇ ಆಯಿತು. ಸರ್ಕಾರದ ಸಾಧನೆಗಳ ಬಗ್ಗೆ ರಾಜ್ಯಪಾಲರಿಂದ ಭಾಷಣ ಕೇಳಿದ್ದೇವೆ. ಆದರೆ, ಈ ಭಾಷಣ ಹಾಡಿದ್ದೇ ಹಾಡೋ ಕಿಸಬಾಯಿ ದಾಸ ಎನ್ನುವ ರೀತಿಯಲ್ಲಿದೆ ಎಂದು ಅವರು ಟೀಕಿಸಿದರು. ಇವರಿಗೆ ಸ್ಪಷ್ಟ ಬಹುಮತದ ಸರ್ಕಾರ ಕೊಟ್ಟಿದ್ದಾರೆ ಜನ. ಆದರೆ, ಇವರು ಅಸ್ಪಷ್ಟವಾಗಿ ಆಡಳಿತ ನಡೆಸುತ್ತಿದ್ದಾರೆ. ಗ್ಯಾರಂಟಿಗಳ ಬಗ್ಗೆ ಪ್ರತಿದಿನವೂ ಮಾಧ್ಯಮಗಳಲ್ಲಿ ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಂಡು ಹೋಗುತ್ತಿದ್ದಾರೆ. ಆದರೆ, ಕೇವಲ ಜನರಿಗೆ ಸರಿಯಾಗಿ ತಲುಪದ ಗ್ಯಾರೆಂಟಿಗಳ ಬಗ್ಗೆ ಗೌರವಾನ್ವಿತ ರಾಜ್ಯಪಾಲರಿಂದ ಸುಳ್ಳು ಭಾಷಣ ಮಾಡಿಸಿದ್ದಾರೆ.

ವಿಶೇಷವಾಗಿ ಬೆಂಗಳೂರಿನಲ್ಲಿ ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆಂದು ದೊಡ್ಡ ದೊಡ್ಡ ಹೇಳಿಕೆಗಳನ್ನು ಕೊಟ್ಟಿದ್ದನ್ನು ನೋಡಿದ್ದೇವೆ. ಸಂಗಮದಿಂದ ಮೇಕೆದಾಟು ಪಾದಾಯಾತ್ರೆ ಮಾಡಿದ್ದನ್ನೂ ನೋಡಿದ್ದೇವೆ. ಆ ಮೇಕೆದಾಟು ಕಳೆದ 8 ತಿಂಗಳಲ್ಲಿ ಎಲ್ಲಿ ಶುರುವಾಯಿತೋ ಈಗಲೂ ಅಲ್ಲಿಯೇ ನಿಂತಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಏನಾಯಿತು, ಎಲ್ಲಿಗೆ ಬಂತು? ಅಭಿವೃದ್ಧಿ ಯೋಜನೆಗಳಿಗೆ ಹಣ ಕೇಳಲೇಬೇಡಿ ಎನ್ನುವಂತೆ ಇದೆ ಪರಿಸ್ಥಿತಿ ಎಂದು ಕುಮಾರಸ್ವಾಮಿ ಅವರು ಅಸಮಾಧಾನ ವ್ಯಕ್ತಪಡಿಸಿದರು. ಈ ಸರ್ಕಾರ ನುಡಿದಂತೆ ನಡೆದಿದ್ದರೆ ನಾನು ಖಂಡಿತಾ ಮೆಚ್ಚುತ್ತಿದ್ದೆ. ಆದರೆ ಇವರು ಎಲ್ಲಿಯೂ ನುಡಿದಂತೆ ನಡೆದಿಲ್ಲ. ಅದಕ್ಕೆ ನಾನು ಹೇಳಿದ್ದು, ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಖಾರ ಉಳಿ ಇಲ್ಲಾ ಎಂದು. ಇದರ ನಾನು ಏನು ಮಾತಾಡಲಿ? ಹದಿನೈದು ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯನವರು, ಎರಡನೇ ಮುಖ್ಯಮಂತ್ರಿ ಆದವರು ರಾಜ್ಯಪಾಲರಿಂದ ಮಾಡಿಸುವ ಭಾಷಣವೇ ಇದು? ಇದು ಅತ್ಯಂತ ಕಳಪೆ ಭಾಷಣ ಎಂದು ಪ್ರತಿಪಾದಿಸಿದರು.

ಬಸ್ಸಿನಲ್ಲಿ ಜನರನ್ನು ಕರೆತಂದು ಜನತಾದರ್ಶನ:
ನಾನು ಸಿಎಂ ಆಗಿದ್ದಾಗ ಜನತಾದರ್ಶನ ಮಾಡಿದ್ದೆ. ಅದಕ್ಕೆ ಬಸ್ ನಲ್ಲಿ ಜನರನ್ನು ಕರೆತಂದಿರಲಿಲ್ಲ. ರಾತ್ರಿ ಮೂರು ಗಂಟೆಗೆ ಬಂದು ಜನ ಕಾಯುತ್ತಿದ್ದರು. ಬೆಳಗ್ಗೆ 9 ಗಂಟೆಯಿಂದ ಮಧ್ಯರಾತ್ರಿವರೆಗೂ ಆ ಜನರ ಅಹವಾಲು ಕೇಳಿ ಸ್ಥಳದಲ್ಲಿಯೇ ಅವರ ಸಂಕಷ್ಟ ನಿವಾರಣೆ ಮಾಡಿದ್ದೇನೆ. ಆದರೆ, ನಾನೆಂದೂ ಜಾಹೀರಾತು ಕೊಟ್ಟುಕೊಂಡು ಪ್ರಚಾರ ಪಡೆದುಕೊಳ್ಳಲಿಲ್ಲ. ದಿನಕ್ಕೆ 100 ಸುಳ್ಳು ಹೇಳಿಕೊಂಡು ಓಡಾಡುವ ಇವರು, ರಾಜ್ಯಪಾಲರಿಂದಲು ಸುಳ್ಳು ಭಾಷಣ ಮಾಡಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
#HDK #HDKumarswamy #JDS #BudetSession #Governor #Congress