• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನಗೆ ಟಿಕೆಟ್ ಕೈ ತಪ್ಪಲು ಮಾಜಿ ಸಿಎಂ ಸಿದ್ದರಾಮಯ್ಯ ಕಾರಣ ; ಮಾಜಿ ಶಾಸಕ ವಾಸು ಆರೋಪ

Any Mind by Any Mind
April 16, 2023
in Top Story, ಅಂಕಣ, ಕರ್ನಾಟಕ, ದೇಶ, ರಾಜಕೀಯ
0
ನನಗೆ ಟಿಕೆಟ್ ಕೈ ತಪ್ಪಲು ಮಾಜಿ ಸಿಎಂ ಸಿದ್ದರಾಮಯ್ಯ ಕಾರಣ ;  ಮಾಜಿ ಶಾಸಕ ವಾಸು ಆರೋಪ
Share on WhatsAppShare on FacebookShare on Telegram

ಬೆಂಗಳೂರು :ಏ.16: ಸೀಟ್ ತಪ್ಪಿಸಿದಕ್ಕೆ ನನ್ನನ್ನು‌ ನಿಯಂತ್ರಿಸಲು ಸಾಧ್ಯವಿಲ್ಲ. ನನಗೆ ಟಿಕೆಟ್ ಕೈ ತಪ್ಪಲು ಮಾಜಿ ಸಿಎಂ ಸಿದ್ದರಾಮಯ್ಯ ಕಾರಣ ಎಂದು ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ದೂರಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಕ್ಷ್ಮಣ ಸವದಿ ವಿರುದ್ಧ ಪ್ರತಿಪಕ್ಷ ನಾಯಕರು ಸದನದಲ್ಲೇ ಗಲಾಟೆ ಮಾಡಿದ್ದರು. ಈಗ ಪಕ್ಷಕ್ಕೆ ಸೇರಿಸಿಕೊಂಡು ಟಿಕೆಟ್ ಕೊಟ್ಟಿದ್ದಾರೆ. ನನಗೆ ಟಿಕೆಟ್ ಕೈ ತಪ್ಪಲು ಮಾಜಿ ಸಿಎಂ ಸಿದ್ದರಾಮಯ್ಯ ಕಾರಣ. ಸಿದ್ದರಾಮಯ್ಯ ಜಾತಿ ರಾಜಕಾರಣವನ್ನ ನಾನು ವಿರೋಧಿಸಿದೆ. ಸಂಪೂರ್ಣ 5 ವರ್ಷ ಅಧಿಕಾರ ನಡಸಿದ ಕಾಂಗ್ರೆಸ್ 2018ರಲ್ಲಿ ಸೋಲು ಕಂಡಿತು. ಇದಕ್ಕೆ ಜಾತಿ ರಾಜಕಾರಣ ಕಾರಣವಾಗಿತ್ತು. 2018ರಲ್ಲಿ ನನ್ನ ಸೋಲಿಸಿದ್ದು ಸಿದ್ದರಾಮಯ್ಯ. ಸಿದ್ದರಾಮಯ್ಯ ಕಡೆ ಇದ್ದವರೆಲ್ಲ ನನ್ನ ವಿರೋಧ ಕೆಲಸ ಮಾಡಿದರು. ಆದರೆ ಪಕ್ಷದಲ್ಲಿ ಇದಕ್ಕೆ‌ ಯಾವುದೇ ಕ್ರಮ ಆಗಲಿಲ್ಲ. ಆದರೆ ಎನ್‌ಆರ್‌. ಕ್ಷೇತ್ರದಲ್ಲಿ ಸತ್ಯ ಮಾತನಾಡಿದ ಶಾಹಿದ್ ನನ್ನ ತೆಗೆದು ಹಾಕಿದ್ರು. ಹುಲಿ ಬಾಯಿಗೆ ಮಗು ಸಿಕ್ಕ ಹಾಕಿಕೊಂಡಿದೆ. ಜೋಪಾನವಾಗಿ ಮಗುವನ್ನು ಬಿಡಿಸಿಕೊಳ್ಳಬೇಕು ಎಂದ ವಾಸು ಸಿದ್ದರಾಮಯ್ಯ ಅವರನ್ನ ಹುಲಿಗೆ, ಪಕ್ಷವನ್ನ ಮಗುವಿಗೆ ಹೋಲಿಸಿದರು.

ADVERTISEMENT

ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷದಲ್ಲೂ ಜೀತದಾಳು ಪದ್ದತಿ ಇದೆ. ನೀನು ಮಾಡಿದ್ದೇ ಸರಿ ಅಣ್ಣ, ನಿನ್ನ ಕುದುರೆ ಓಡುತ್ತೆ ಅಣ್ಣ ಅಂತಾರೆ. ಕೆಲವರಿಗೆ ಗೆಲ್ಲಿಸುವ ಶಕ್ತಿ ಇರುತ್ತೆ. ಅವರ ಬಗ್ಗೆ ಪಕ್ಷದಲ್ಲಿ ಗೌರವ ಇರುತ್ತೆ. ಆದರೆ ಕೆಲವರಿಗೆ ಸೋಲಿಸುವ ಶಕ್ತಿ ಇರುತ್ತೆ. ಅಂಥವರನ್ನು ಕಂಡರೆ ಪಕ್ಷಗಳಿಗೆ ಭಯ. ಸಿದ್ದರಾಮಯ್ಯ ಅವರನ್ನು ಸೋಲಿಸುವ ನಾಯಕ ಎಂದ ವಾಸು ಕಿಡಿಕಾರಿದರು.

ಯಾರ ವೈಯುಕ್ತಿಕ ಹಠನೋ, ಚಟನೋ ಗೊತ್ತಿಲ್ಲ. ನನಗೆ ಟಿಕೆಟ್ ಮಿಸ್ ಆಗಿದೆ. ನನ್ನ ಹೆಸರನ್ನು ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಸೂಚಿಸಿದ್ದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ವಾಸು ಹೇಳಿದರು. ಹಲವು ದಿನಗಳಿಂದ ಟಿಕೆಟ್ ಬಗ್ಗೆ ವಾದವಿವಾದಗಳು ನಡಿತಾ ಇದ್ದವು. 45 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇದ್ರೆ ನಾನು ನಿವೃತ್ತಿಗೆ ರೆಡಿ, ಡಂಡ ಕಟ್ಟಲು ಸಿದ್ಧ. ಕುಟುಂಬಕ್ಕಾಗಲಿ, ಪ್ರತ್ಯಕ್ಷ, ಪರೋಕ್ಷವಾಗಿಯಾಗಲಿ ಸಾರ್ವಜನಿಕ, ಸರ್ಕಾರದ ಪ್ರಾಪರ್ಟಿಯನ್ನ ಅನಧಿಕೃತ ತೆಗೆದುಕೊಂಡಿದ್ರೆ ನಾನು ಸರ್ಕಾರಕ್ಕೆ ಬರೆದು ಕೊಡ್ತೀನಿ. ನನ್ನ ಕೆಲಸದ ಬಗ್ಗೆ ನನಗೆ ತೃಪ್ತಿ ಇದೆ ಎಲ್ಲಾ ಕ್ಷೇತ್ರಗಳಲ್ಲೂ ಕೆಲಸ ಮಾಡಿದ್ದೇನೆ. ನನಗೆ ಟಿಕೆಟ್ ತಪ್ಪಿಸಿದ್ದವ್ರಿಗೆ ದೇವರು ಸನ್ಮಾರ್ಗ ಕೊಡಲಿ. ನನಗೆ ಈ ವರೆಗೆ ಅವಕಾಶ ಕೊಟ್ಟ ಪಕ್ಷವನ್ನು ನಾನೂ ದೂರೋದಿಲ್ಲ. ನನಗೆ ಬಹಳ ಒತ್ತಡವಿದೆ. ನಮ್ಮ ಪಕ್ಷಕ್ಕೆ ಬನ್ನಿ ಅಂತ ಹಲವರು ಕರೆಯುತ್ತಿದ್ದಾರೆ. ಎರಡು ದಿನಗಳಲ್ಲಿಈ ಕುರಿತು ತಿರ್ಮಾನ ಮಾಡ್ತೀನಿ. ಪಕ್ಷ ಬಿಡೋದ್ರಿಂದ ನನಗೆ ಬಂದಿದವ್ರಿಗೆ ಅನ್ಯಾಯ ಆಗುತ್ತೆ. ಪಕ್ಷದಲ್ಲಿ ನನಗೆ ಸಪೋರ್ಟ್ ಮಾಡಿದವ್ರಿಗೆ ಅನ್ಯಾಯ ಮಾಡಿದಂತಾಗುತ್ತದೆ. ನಾನು ಪಕ್ಷ ಬಿಡೋದಿಲ್ಲ. ಪಕ್ಷದಲ್ಲಿ ಇದ್ದುಕೊಂಡು ನನಗೆ ಅನ್ಯಾಯ ಮಾಡಿದವ್ರನ್ನ ಖಂಡಿಸೋದು ದ್ವೇಷಿಸೋದು ನಿಜ. ಸೀಟ್ ತಪ್ಪಿಸೋದ್ರಿಂದ ನನ್ನ ವಾಯ್ಸ್ ಕಂಟ್ರೋಲ್ ಮಾಡಲು ಸಾಧ್ಯವಿಲ್ಲ ಎಂದರು

Tags: 2023 election2023 Election Resultassembly electionBJPBJP GovernmentBSYcmbommaiCongress PartyDKShivakumarElection Commissionelection resultHDKJanasankalpa YatreJDSKarnataka ElectionLaxman SavadiPancharatna YatrePratidhvanisiddaramaiahState ElectionVijayasankalpaಎಚ್ ಡಿ ಕುಮಾರಸ್ವಾಮಿಸಿದ್ದರಾಮಯ್ಯ
Previous Post

ಪುಲ್ವಾಮ ದಾಳಿ: ನಮ್ಮ ಲೋಪದ ಬಗ್ಗೆ ಮಾತಾಡದಂತೆ ಮೋದಿ, ದೋವಲ್‌ ಹೇಳಿದ್ದರು: ಮಾಜಿ ರಾಜ್ಯಪಾಲರ ಸ್ಪೋಟಕ ಹೇಳಿಕೆ

Next Post

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ರಾಜ್ಯದ ಘನತೆ ಹಾಳು ಮಾಡಿದೆ ; ಸಿದ್ದರಾಮಯ್ಯ

Related Posts

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..
Top Story

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..

by ಪ್ರತಿಧ್ವನಿ
September 13, 2026
0

ಶಾಂತಿಯುತ ಗಣೇಶ ಹಬ್ಬ ಆಚರಣೆ ಖಾತರಿಗೆ ಪೊಲೀಸರಿಗೆ ಸೂಚನೆ.. ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ.. ಬೆಂಗಳೂರು :  ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು,...

Read moreDetails
ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

September 13, 2026
730 ನಕಲಿ ಐಎಸ್‌ಐ ಹೆಲ್ಮೆಟ್‌ ಜಪ್ತಿ: ಖರೀದಿಸುವ ಮುನ್ನ  ಇದನ್ನು ಪರಿಶೀಲಿಸಿ!

730 ನಕಲಿ ಐಎಸ್‌ಐ ಹೆಲ್ಮೆಟ್‌ ಜಪ್ತಿ: ಖರೀದಿಸುವ ಮುನ್ನ ಇದನ್ನು ಪರಿಶೀಲಿಸಿ!

September 12, 2026
ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು; ಭಾರತದ ಭದ್ರತಾ ಮಂಡಳಿ ಬೇಡಿಕೆಗೆ ಬ್ರಿಕ್ಸ್ ಬೆಂಬಲ

ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು; ಭಾರತದ ಭದ್ರತಾ ಮಂಡಳಿ ಬೇಡಿಕೆಗೆ ಬ್ರಿಕ್ಸ್ ಬೆಂಬಲ

September 12, 2026
ಸತೀಶ್ ಜಾರಕಿಹೊಳಿ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್; ‘ಆರೋಪಗಳಿವೆ, ಬಲವಾದ ಸಾಕ್ಷ್ಯ ಎಲ್ಲಿದೆ?’

ಸತೀಶ್ ಜಾರಕಿಹೊಳಿ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್; ‘ಆರೋಪಗಳಿವೆ, ಬಲವಾದ ಸಾಕ್ಷ್ಯ ಎಲ್ಲಿದೆ?’

September 12, 2026
Next Post
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ರಾಜ್ಯದ ಘನತೆ ಹಾಳು ಮಾಡಿದೆ ; ಸಿದ್ದರಾಮಯ್ಯ

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ರಾಜ್ಯದ ಘನತೆ ಹಾಳು ಮಾಡಿದೆ ; ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada