• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತಗಳ್ಳತನ..ಕುದುರೆ ವ್ಯಾಪಾರ..ಸಂವಿಧಾನ ವಿರೋಧಿ ಮಸೂದೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
June 10, 2026
in Top Story, ಕರ್ನಾಟಕ, ರಾಜಕೀಯ
0
ಮತಗಳ್ಳತನ..ಕುದುರೆ ವ್ಯಾಪಾರ..ಸಂವಿಧಾನ ವಿರೋಧಿ ಮಸೂದೆ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ
Share on WhatsAppShare on FacebookShare on Telegram

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ ಪ್ರಜಾಪ್ರಭುತ್ವದಲ್ಲಿ ಅತಿ ದೀರ್ಘಾವಧಿಗೆ ಚುನಾಯಿತರಾದ ಪ್ರಧಾನಿಯಾಗಿ ದಾಖಲೆ ನಿರ್ಮಿಸಿದ್ದಾರೆ. ಈ ಬಗ್ಗೆ ಹೆಮ್ಮೆ ವ್ಯಕ್ತಪಡಿಸುತ್ತಿರುವ ಬಿಜೆಪಿ(BJP) ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಕಿಡಿಕಾರಿದ್ದಾರೆ.

ADVERTISEMENT
Basavaraj Bommai: ಕಾಂಗ್ರೆಸ್‌ ವಿದೇಶದಿಂದ ಸ್ಥಾಪನೆಯಾಗಿದೆ, RSS ಸ್ವದೇಶದಿಂದ ಸ್ಥಾಪಿಸಲ್ಪಟ್ಟಿದೆ.! #pratidhvani

ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ ನರೇಂದ್ರ ಮೋದಿ ಅವರ ಸಾಧನೆಯ ಬಗ್ಗೆ ಬಿಜೆಪಿ ಸಂಭ್ರಮಿಸುತ್ತಿರುವುದು ಪ್ರಜಾಪ್ರಭುತ್ವದ ವಿರುದ್ಧದ ಅತಿದೊಡ್ಡ ಅಣಕವಾಗಿದೆ. ಇದಕ್ಕೆ ಜ್ವಲಂತ ಉದಾಹರಣೆಯಾಗಿ ಮಧ್ಯಪ್ರದೇಶದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಮೀನಾಕ್ಷಿ ನಟರಾಜನ್‌ಅವರ ನಾಮಪತ್ರವನ್ನು ಮೋದಿಯವರ ಕಪಿಮುಷ್ಠಿಯಲ್ಲಿರುವ ಚುನಾವಣಾ ಆಯೋಗವು ತಿರಸ್ಕಾರ ಮಾಡಿರುವುದು ನಮ್ಮ ಕಣ್ಣ ಮುುಂದಿದೆ.

ಮೋದಿ ಆಡಳಿತದಲ್ಲಿ ದೇಶದ ಪ್ರಜಾಪ್ರಭುತ್ವದ ಪರಿಸ್ಥಿತಿ ಹೇಗಿದೆ ಎಂಬುದಕ್ಕೆ ಪೂರಕ ಉದಾಹರಣೆಯಿದು. ಮೀನಾಕ್ಷಿ ನಟರಾಜನ್‌ಅವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಯಾವುದೇ ಲೋಪದೋಷಗಳಿರಲಿಲ್ಲ. ಆದರೂ ಕೆಲವು ಲೋಪದೋಷಗಳನ್ನು ಸೃಷ್ಟಿ ಮಾಡಿ ತಿರಸ್ಕಾರ ಮಾಡಲಾಗಿದೆ. ಇದು ಸ್ಪಷ್ಟ ಚುನಾವಣಾ ಅಕ್ರಮ ಹಾಗೂ ರಾಜಕೀಯ ಷಡ್ಯಂತ್ರ.

Basavaraj Bommai : ದೇವೇಗೌಡರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಿ ಕಾಂಗ್ರೆಸ್ ದೊಡ್ಡ ಅನ್ಯಾಯ ಮಾಡಿದೆ..!

ಈ ಷಡ್ಯಂತ್ರದ ಭಾಗವಾಗಿ ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಕೇವಲ ಇಬ್ಬರು ಅಭ್ಯರ್ಥಿಗಳನ್ನಷ್ಟೇ ಗೆಲ್ಲಿಸಿಕೊಳ್ಳಬಹುದಾದ ಸಂಖ್ಯಾಬಲ ಹೊಂದಿದ್ದರೂ 3ನೇ ಅಭ್ಯರ್ಥಿಯನ್ನು ಬಿಜೆಪಿ ಕಣಕ್ಕಿಳಿಸಿತ್ತು. ದೊಡ್ಡ ಮೊತ್ತದ ಹಣದ ಆಮೀಷವನ್ನು ಒಡ್ಡುವ ಮೂಲಕ ಕುದುರೆ ವ್ಯಾಪಾರ ನಡೆಸಲು ತಯಾರಿ ನಡೆಸಿತ್ತು. ಕಾಂಗ್ರೆಸ್‌ಶಾಸಕರನ್ನು ಖರೀದಿಸಿ 3ನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವ ಹುನ್ನಾರವನ್ನು ನಡೆಸಿತ್ತು. ಆದರೆ ಕಾಂಗ್ರೆಸ್‌ಶಾಸಕರು ಒಗ್ಗಟ್ಟಾದರು, ಇದರಿಂದ ಬಿಜೆಪಿಯ ಕುದುರೆ ವ್ಯಾಪಾರ ನಡೆಯಲಿಲ್ಲ. ಹಾಗಾಗಿ ಕೊನೆಯ ಅಸ್ತ್ರ ಎಂಬಂತೆ ಚುನಾವಣಾ ಆಯೋಗದ ಮೂಲಕ ಅಭ್ಯರ್ಥಿಯ ನಾಮಪತ್ರವೇ ನೇರವಾಗಿ ತಿರಸ್ಕೃತಗೊಳ್ಳುವಂತೆ ಮಾಡಿದೆ.

HD Kumaraswamy on CM DK : ಡಿಕೆ ಶಿವಕುಮಾರ್ ಮಾತಿಗೆ ಕುಮಾರಸ್ವಾಮಿ ವ್ಯಂಗ್ಯ..! #dkshivakumar #pratidhvani

ಮೀನಾಕ್ಷಿ ನಟರಾಜನ್‌ಅವರ ನಾಮಪತ್ರ ತಿರಸ್ಕಾರವು ಸಂಪೂರ್ಣವಾಗಿ ಕಾನೂನಿಗೆ ವಿರುದ್ಧವಾದ ನಡೆಯಾಗಿದೆ. ಕಾನೂನಿನ ಚೌಕಟ್ಟಿನಡಿ ಮೀನಾಕ್ಷಿ ನಟರಾಜನ್‌ಅವರ ವಿರುದ್ಧ ಯಾವುದೇ ಕ್ರಿಮಿನಲ್‌ಪ್ರಕರಣಗಳಿಲ್ಲ. ಒಂದು ಖಾಸಗಿ ದೂರು ಅಪರಾಧ ಪ್ರಕರಣವಾಗುವುದಿಲ್ಲ. ಪ್ರಸ್ತುತ ಅವರಿಗೆ ನ್ಯಾಯಾಲಯದಿಂದ ಶೋಕಾಸ್‌ನೋಟಿಸ್‌ಮಾತ್ರವೇ ಬಂದಿದ್ದು, ಅದನ್ನು ಅಫಿಡವಿಟ್‌ನಲ್ಲಿ ಸೇರಿಸುವ ಅಗತ್ಯವಿಲ್ಲ. ಈ ಬಗ್ಗೆ ಚುನಾವಣಾ ಆಯೋಗದ ಸೂಚನೆಗಳೇ ಸ್ಪಷ್ಟವಾಗಿ ಹೇಳಿದ್ದರೂ ಮೀನಾಕ್ಷಿ ಅವರ ನಾಮಪತ್ರವನ್ನು ತಿರಸ್ಕಾರ ಮಾಡಲಾಗಿದೆ. ಈ ನಿರ್ಧಾರವು ಪಕ್ಷಪಾತವಾಗಿದ್ದು, ಆಯೋಗವು ಸ್ವತಂತ್ರವಾಗಿ ತೆಗೆದುಕೊಂಡ ನಿರ್ಧಾರವಾಗಿಲ್ಲ. ಚುನಾವಣೆಯನ್ನು ನ್ಯಾಯಯುತವಾಗಿ ಗೆಲ್ಲಲು ಸಾಧ್ಯವಿಲ್ಲದ ಬಿಜೆಪಿಗೆ ಪರೋಕ್ಷವಾಗಿ ಗೆಲ್ಲಲು ಚುನಾವಣಾ ಆಯೋಗವು ನೀಡುತ್ತಿರುವ ಸಹಕಾರವಾಗಿದೆ.

HD Kumaraswamy on Zameer :  ಜಮೀರ್‌ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು..! #zameerahmedkhan

ಮತಗಳ್ಳತನವನ್ನು ಅಧಿಕೃತ ದಂಧೆಯನ್ನಾಗಿಸಿಕೊಳ್ಳಲಾಗಿದ್ದು, ಎಸ್‌ಐಆರ್‌ಸೇರಿದಂತೆ ಅನೇಕ ಕಳ್ಳಮಾರ್ಗದ ಮೂಲಕ ಬಿಜೆಪಿ ಚುನಾವಣೆಗಳನ್ನು ಗೆಲ್ಲುತ್ತಿದೆ. ರಾಜ್ಯಸಭೆ ಚುನಾವಣೆಯಲ್ಲೂ ಗುರುತರ ಅಕ್ರಮ ಎಸಗುವ ಮೂಲಕ ಸ್ಥಾನಗಳ್ಳತವನ್ನು ತನ್ನ ಮತಗಳ್ಳತನದ ದಂಧೆಗೆ ಸೇರ್ಪಡೆಗೊಳಿಸಿದೆ. ಬಿಜೆಪಿಯ ಮತಗಳ್ಳತನದ ದಂಧೆಯಲ್ಲಿ ಮತದಾರರ ಧಿಕ್ಕು ತಪ್ಪಿಸುವುದು, ಪ್ರಾದೇಶಿಕ ಪಕ್ಷಗಳನ್ನು ಒಡೆಯುವುದು, ಕುದುರೆ ವ್ಯಾಪಾರ ನಡೆಸುವುದು, ಸ್ವತಂತ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವುದು, ಸ್ಥಾನಗಳ್ಳತನ ನಡೆಸುವುದು ಸೇರಿದೆ. ಲೋಕಸಭೆಯಲ್ಲಿ ಕೃತಕ ಸಂಖ್ಯೆಗಳನ್ನು ಸೃಷ್ಟಿಸುವ ಮೂಲಕ ತನ್ನ ಪ್ರಜಾಪ್ರಭುತ್ವ ವಿರೋಧಿ ಮತ್ತು ಸಂವಿಧಾನ ವಿರೋಧಿ ಮಸೂದೆಗಳನ್ನು ಯಾವುದೇ ಪ್ರತಿರೋಧವಿಲ್ಲದೆ ಸಾರಾಸಗಟಾಗಿ ಜಾರಿಗೊಳಿಸಲು ಅಗತ್ಯ ಬಲವನ್ನು ಹೆಚ್ಚಿಸಿಕೊಳ್ಳುವುದು ಬಿಜೆಪಿಯ ಸ್ಪಷ್ಟ ಗುರಿಯಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ದಾಳಿಯನ್ನು ನಮ್ಮ ಪಕ್ಷವು ಬಲವಾಗಿ ವಿರೋಧಿಸುತ್ತದೆ. ನಾವು ದೇಶದ ನಾಗರಿಕರ ಪರವಾಗಿ ನಿಂತು, ಪ್ರತಿಯೊಂದು ಅನ್ಯಾಯದ ವಿರುದ್ಧ ಹೋರಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Previous Post

Shubha Poonja: ವಿಚ್ಛೇದನ ವದಂತಿ ಬಗ್ಗೆ ಮೌನ ಮುರಿದ ನಟಿ ಶುಭಾ ಪೂಂಜಾ

Next Post

ಕಾಂಗ್ರೆಸ್ ಸೇರಿ ಎಡವಿದ್ರಾ ಲಕ್ಷ್ಮಣ್ ಸವದಿ..? ಕೇಸರಿ ಕೋಟೆಯದಲ್ಲಿದ್ದ ಪವರ್‌ಫುಲ್ ನಾಯಕ ಈಗ ‘ಕೈ’ ಪಾಳಯದಲ್ಲಿ ಸೈಡ್ ಲೈನ್..?

Related Posts

ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ
ಕರ್ನಾಟಕ

ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ

by ಪ್ರತಿಧ್ವನಿ
August 5, 2026
0

ಮಹಿಳೆಯರ ಆರೋಗ್ಯ ಮತ್ತು ಋತುಬಂಧ (ಮೆನೋಪಾಸ್) ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, 'ಋತುತಾರೆ' ಎಂಬ ವಿಶೇಷ ಯೋಜನೆಯನ್ನು ಆರಂಭಿಸಿದೆ. ಮಹಿಳೆಯರು...

Read moreDetails
ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

August 5, 2026
 ‘ಜಸ್ಟಿಸ್ ಫಾರ್ ಮಾನಸ’ ಅಭಿಯಾನ ಆರಂಭ:ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ

 ‘ಜಸ್ಟಿಸ್ ಫಾರ್ ಮಾನಸ’ ಅಭಿಯಾನ ಆರಂಭ:ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ

August 5, 2026
ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

August 5, 2026
ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

August 5, 2026
Next Post
ಕಾಂಗ್ರೆಸ್ ಸೇರಿ ಎಡವಿದ್ರಾ ಲಕ್ಷ್ಮಣ್ ಸವದಿ..? ಕೇಸರಿ ಕೋಟೆಯದಲ್ಲಿದ್ದ ಪವರ್‌ಫುಲ್ ನಾಯಕ ಈಗ ‘ಕೈ’ ಪಾಳಯದಲ್ಲಿ ಸೈಡ್ ಲೈನ್..?

ಕಾಂಗ್ರೆಸ್ ಸೇರಿ ಎಡವಿದ್ರಾ ಲಕ್ಷ್ಮಣ್ ಸವದಿ..? ಕೇಸರಿ ಕೋಟೆಯದಲ್ಲಿದ್ದ ಪವರ್‌ಫುಲ್ ನಾಯಕ ಈಗ 'ಕೈ' ಪಾಳಯದಲ್ಲಿ ಸೈಡ್ ಲೈನ್..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada