ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಚುನಾವಣಾ ಪ್ರಚಾರದಲ್ಲಿ ಸಖತ್ ಬ್ಯುಸಿಯಾಗಿದ್ದ ಅಭ್ಯರ್ಥಿಗಳು ಸದ್ಯ ರಿಲ್ಯಾಕ್ಸ್ ಮೂಡ್ಗೆ ಜಾರಿದ್ದಾರೆ. ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ .

ಕಾಂಗ್ರೆಸ್ ಪಕ್ಷದ ಹೆಮ್ಮೆಯ ಕಾರ್ಯಕರ್ತರು ಮತ್ತು ಅಭಿಮಾನಿ ಬಂಧುಗಳೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ-ಹಗಲೆನ್ನದೆ, ಊಟ-ತಿಂಡಿ-ವಿಶ್ರಾಂತಿಯನ್ನು ಮರೆತು ನಿರಂತರವಾಗಿ ಕೆಲಸ ಮಾಡಿದ ನಿಮಗೆಲ್ಲರಿಗೂ ಅಭಿನಂದನೆಗಳು ಮತ್ತು ನನ್ನ ಧನ್ಯವಾದಗಳು ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ನಾನು ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಮಾತ್ರವಲ್ಲ, ಬೇರೆ ರಾಜ್ಯಗಳಿಂದಲೂ ಬಂದು ನನ್ನ ಮೇಲಿನ ಪ್ರೀತಿ-ಅಭಿಮಾನದಿಂದ ತಮ್ಮ ಪಾಡಿಗೆ ತಾವು ಪ್ರಚಾರ ಮಾಡಿದ್ದಾರೆ. ಅವರಲ್ಲೆರನ್ನು ನನಗೆ ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಲು ಕೂಡಾ ಸಾಧ್ಯವಾಗಿಲ್ಲ ಎಂದು ಪೋಸ್ಟ್ ಶೇರ್ ಮಾಡಿದ್ದಾರೆ.