ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ ಮೇಲೆ ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿತ್ತು. ಇದೀಗ ಈ ಕೇಸ್ ಗೆ ಸಂಬಂಧಪಟ್ಟಂತೆ ಕರ್ನಾಟಕ ಲೋಕಾಯುಕ್ತ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ, ಪುತ್ರ ಕೆ.ಈ ಕಾಂತೇಶ್ ಮತ್ತು ಸೊಸೆ ಆರ್. ಶಾಲಿನಿ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ, ಕೆ.ಎಸ್ ಜಲಸಮೊನ್ಮೂಲ ಇಲಾಖೆಯ ಸಚಿವರಾಗಿದ್ದ ವೇಳೆ ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪ ಹೊರಿಸಲಾಗಿದ್ದು , ವಕೀಲ ಬಿ.ವಿನೋದ್ ಎಂಬುವವರ ದೂರಿನ ಆಧಾರದ ಮೇಲೆ 2012 ರಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್‌ನಲ್ಲಿ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರಿಗೆ ಸೂಚಿಸಿತ್ತು.ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಅನ್ವಯ ಇದೀಗ ಲೋಕಾಯುಕ್ತ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದು, ಕೇವಲ ಈಶ್ವರಪ್ಪ ಮಾತ್ರವಲ್ಲದೆ ಅವರ ಇಡೀ ಕುಟುಂಬಕ್ಕೆ ಈಗ ಸಂಕಷ್ಟ ಎದುರಾಗಿದೆ.