2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಈಗಾಗಲೇ ಪಕ್ಷದ ನಾಯಕರು ಹಾಗೂ ಮುಖಂಡರು ಆಯಾ ಪಕ್ಷಗಳ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಾಜಿ ಸಚಿವ ಬಿ. ಸೋಮಶೇಖರ್ ಹಾಗೂ ಮೈಸೂರು ಮೂಡಾ ಮಾಜಿ ಅಧ್ಯಕ್ಷ ಬಸವೇಗೌಡ ಅವರು ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮಶೇಖರ್ ಹಾಗೂ ಬಸವೇಗೌಡ ಅವರನ್ನು ಪಕ್ಷಕ್ಕೆ ಸ್ವಾಗತಿಸಿ ಶುಭ ಕೋರಿದರು. ಇದೇ ವೇಳೆ ಜೆಡಿಎಸ್ ಮುಖಂಡ ಅಬ್ದುಲ್ಲಾ ಅವರೂ ಸಹ ಕಾಂಗ್ರೆಸ್ ಸೇರ್ಪಡೆಯಾದರು.













