ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದ ಮಾಜಿ ಸಚಿವ ಡಾ. ಸಿಎನ್ ಅಶ್ವತ್ಥ ನಾರಾಯಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಡ್ಯದ ಸಾತನೂರಿನಲ್ಲಿ ಉದ್ರೇಕದ ಭಾಷಣ ಮಾಡಿದ್ದ ಅಶ್ವತ್ಥ ನಾರಾಯಣ ಸಿಎಂ ಸಿದ್ದರಾಮಯ್ಯ ವಿರುದ್ಧ ನಾಲಗೆ ಹರಿಬಿಟ್ಟಿದ್ದರು. ಈ ಸಂಬಂಧ ಮೈಸೂರಿನ ದೇವರಾಜ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಉರಿಗೌಡ, ನಂಜೇಗೌಡರನ್ನು ಹೊಡೆದು ಹಾಕಿದ ರೀತಿಯಲ್ಲಿ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಡಾ. ಅಶ್ವತ್ಥ ನಾರಾಯಣ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈ ಹಿಂದೆ ಕೊಡಗು ಜಿಲ್ಲೆಯಲ್ಲೂ ಕೊಲೆಗೆ ಯತ್ನ ನಡೆದಿತ್ತು . ಒಂದು ವರ್ಗ ಕೊಲೆಗೆ ಯತ್ನ ಮಾಡಿತ್ತು .ಮತ್ತೊಮ್ಮೆ ಸಮಾಜ ದ್ರೋಹಿ , ಕೊಲೆ ಮಾಡಲು ಯತ್ನಿಸುವ ಸಾಧ್ಯತೆಗಳಿವೆ ಎಂದು ಆರೋಪಿಸಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ದೂರು ದಾಖಲಿಸಿದ್ದಾರೆ.
ಮೈಸೂರಿನ ಯಾದವಗಿರಿ ನಿವಾಸಿಯಾಗಿರುವ ಕೆಪಿಸಿಸಿ ವಕ್ತಾರ ಲಕ್ಷ್ಮಣ ಈ ದೂರನ್ನು ದಾಖಲಿಸಿದ್ದಾರೆ.

