ಹುಬ್ಬಳ್ಳಿ : ಕೆಲವು ದಿನಗಳ ಹಿಂದೆಯಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಯನ್ನು ವಿಷಸರ್ಪಕ್ಕೆ ಹೋಲಿಕೆ ಮಾಡಿದ್ದರು. ಇದಾದ ಬಳಿಕ ಬಿಜೆಪಿ ನಾಯಕರು ಮಲ್ಲಿಕಾರ್ಜುನ ಖರ್ಗೆಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಈ ಬೆನ್ನಲ್ಲೇ ಇದೀಗ ಕೆ.ಎಸ್ ಈಶ್ವರಪ್ಪ ಪ್ರಿಯಾಂಕ ಖರ್ಗೆಯನ್ನು ತಿಗಣೆಗೆ ಹೋಲಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇಂತಹ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ತಮ್ಮ ಗೌರವ ತಾವೇ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಕೂಡ ಪ್ರಧಾನಿ ಬಗ್ಗೆ ಇಲ್ಲ ಸಲ್ಲದ ಮಾತನಾಡಿದ್ದಾರೆ. ಆನೆ ಗಾತ್ರದ ಮೋದಿ ಬಗ್ಗೆ ತಿಗಣೆ ಗಾತ್ರದ ಪ್ರಿಯಾಂಕ್ ಖರ್ಗೆ ಮಾತನಾಡುತ್ತಾರೆ ಎಂದು ಈಶ್ವರಪ್ಪ ಗುಡುಗಿದ್ದಾರೆ.






