• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

ಪ್ರತಿಧ್ವನಿ by ಪ್ರತಿಧ್ವನಿ
August 27, 2026
in Top Story, ಕರ್ನಾಟಕ, ರಾಜಕೀಯ
0
ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್
Share on WhatsAppShare on FacebookShare on Telegram
ADVERTISEMENT

ಬೆಳಗಾವಿ: ಸಚಿವ ಸಂಪುಟದಿಂದ ಹೊರಗುಳಿದ ಬಳಿಕ ಮೊದಲ ಬಾರಿಗೆ ಸುದೀರ್ಘವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಸಚಿವೆಯಾಗಿ ಮೂರು ವರ್ಷಗಳ ಕಾಲ ಅವಕಾಶ ನೀಡಿದ ಪಕ್ಷಕ್ಕೆ ಧನ್ಯವಾದ ಸಲ್ಲಿಸುವುದರೊಂದಿಗೆ, ಪಕ್ಷದ ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ.

Krishnabyregowda : ಖಾಲಿ ನಿವೇಶನಗಳ ಕಸ ಕ್ಲೀನ್‌ ಮಾಡದಿದ್ರೆ ದಂಡಾಸ್ತ್ರ ಪ್ರಯೋಗಕ್ಕೆ ಮುಂದಾದ ಜಿಬಿಎ ಮಂತ್ರಿ!

ಮುಂದೆ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ತಿಳಿಸಿರುವ ಅವರು, “ನಾನು ಪಕ್ಷದ ಶಿಸ್ತಿನ ಸಿಪಾಯಿ. ಅವಕಾಶ ಕೊಟ್ಟರೂ, ಕೊಡದಿದ್ದರೂ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

Lakshmi Hebbalkar : ಗೃಹಲಕ್ಷ್ಮೀ ಹಣ ಬಗ್ಗೆ ಕ್ಲಾರಿಟಿ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್.! #congress #Gruhalakshmi

ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಮಂತ್ರಿಮಂಡಲ ರಚನೆಯಾದ ಮೊದಲ ದಿನದಿಂದ ಇಲ್ಲಿಯವರೆಗೆ ಮೂರು ವರ್ಷಗಳ ಕಾಲ ಸಚಿವೆಯಾಗಿ ಕೆಲಸ ಮಾಡಲು ನನಗೆ ಅವಕಾಶ ಮಾಡಿಕೊಟ್ಟ ಸಿದ್ದರಾಮಯ್ಯ ಅವರಿಗೆ ಮೊದಲನೆಯದಾಗಿ ಧನ್ಯವಾದ ಹೇಳುತ್ತೇನೆ. ನನ್ನ ಇಲಾಖೆಯಲ್ಲಿ ಸಾಧ್ಯವಾದಷ್ಟು ಉತ್ತಮ ಕೆಲಸ ಮಾಡುವ ಪ್ರಯತ್ನ ಮಾಡಿದ್ದೇನೆ. ಮುಂದೆ ಪಕ್ಷ ಅವಕಾಶ ಕೊಟ್ಟರೆ ಕೆಲಸ ಮಾಡುತ್ತೇನೆ. ಅವಕಾಶ ಕೊಡದೇ ಇದ್ದರೂ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ” ಎಂದರು.

ಸಚಿವ ಸ್ಥಾನ ಮುಂದುವರಿಸುವಂತೆ ತಾವು ಯಾರನ್ನೂ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ ಹೆಬ್ಬಾಳ್ಕರ್, “ನನಗೆ ಸಚಿವ ಸ್ಥಾನ ನೀಡಬೇಕು ಎಂದು ನಾನು ಯಾರನ್ನೂ ಕೇಳಿಲ್ಲ. ಸಚಿವ ಸ್ಥಾನ ಸಿಗಬೇಕು ಎಂದು ಒತ್ತಾಯ ಮಾಡುವ ಪ್ರಶ್ನೆಯೇ ಇಲ್ಲ. ರಾಜಕಾರಣದಲ್ಲಿ ಇವೆಲ್ಲವೂ ಸಹಜ. ರಾಜಕಾರಣ ಅನ್ನೋದು ಯಾವಾಗ ಏನು ಬೇಕಾದರೂ ಆಗಬಹುದಾದ ಕ್ಷೇತ್ರ. ಎಲ್ಲವೂ ಅನಿಶ್ಚಿತ” ಎಂದು ಹೇಳಿದರು.

Lakshmi Hebbalkar : ಸಂಪುಟದಲ್ಲಿ ಮಹಿಳೆಗೆ ಸ್ಥಾನ ಕೊಟ್ಟೆ ಕೊಡ್ತಾರೆ ಎಂದ ಲಕ್ಷ್ಮಿ ಹೆಬ್ಬಾಳ್ಕರ್..! #congress

ಮಹಿಳೆಯರಿಲ್ಲದ ಸಂಪುಟ ಅಪೂರ್ಣ

“ಮಹಿಳೆಯರಿಲ್ಲದ ಸಂಪುಟ ಅಪೂರ್ಣ ಎನ್ನುವುದು ನನ್ನ ಅಭಿಪ್ರಾಯ. ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಇರಬೇಕು. ಮೂರು ವರ್ಷಗಳ ಕಾಲ ಸಚಿವೆಯಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಮಹಿಳೆಯರ ಸಮಸ್ಯೆಗಳನ್ನು, ಅವರ ನೋವು-ನಲಿವುಗಳನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. ಮಹಿಳೆಯರಿಗೆ ನ್ಯಾಯ ಸಿಗಬೇಕು, ಅವರ ಧ್ವನಿ ಸರ್ಕಾರದಲ್ಲಿ ಇರಬೇಕು. ಜಾರ್ಖಂಡ್, ಹಿಮಾಚಲ ಪ್ರದೇಶ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳ ಕಾಂಗ್ರೆಸ್ ಸರ್ಕಾರಗಳಲ್ಲಿ ಮಹಿಳೆಯರಿಗೆ ಸಚಿವ ಸ್ಥಾನ ನೀಡಲಾಗಿದೆ. ಕರ್ನಾಟಕದಲ್ಲಿ ಏನೋ ಒಂದು ರೀತಿಯ ಲೆಕ್ಕಾಚಾರದಲ್ಲಿ ಈ ಬಾರಿ ಬದಲಾವಣೆ ಆಗಿದೆ. ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಈ ವಿಚಾರದಲ್ಲಿ ನಾನು ಯಾವುದೇ ರೀತಿಯ ತೀಕ್ಷ್ಣ ಹೇಳಿಕೆ ನೀಡಲು ಹೋಗುವುದಿಲ್ಲ. ಮುಖ್ಯಮಂತ್ರಿಗಳು ಕೂಡ ಆದಷ್ಟು ಶೀಘ್ರದಲ್ಲಿ ಮಹಿಳೆಯರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಹೇಳಿದ್ದಾರೆ. ಆ ನಿರ್ಧಾರವನ್ನು ನಾವು ನೋಡೋಣ ” ಎಂದರು.

BR Ramegowda : ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಬಿ.ಆರ್.‌ ರಾಮೇಗೌಡ..! #siddaramaiah #congress

“ಪಕ್ಷದಲ್ಲಿ ಜವಾಬ್ದಾರಿ ನೀಡುವಾಗ ಪ್ರಾದೇಶಿಕತೆ, ಸಾಮಾಜಿಕ ಸಮೀಕರಣ, ಅನುಭವ, ಪಕ್ಷಕ್ಕೆ ಸಲ್ಲಿಸಿದ ಸೇವೆ ಸೇರಿದಂತೆ ಹಲವು ಮಾನದಂಡಗಳನ್ನು ನೋಡಲಾಗುತ್ತದೆ. ಯಾವ ಮಾನದಂಡದಲ್ಲಿ ಯಾರಿಗೆ ಅವಕಾಶ ಸಿಗುತ್ತದೆ ಎನ್ನುವುದು ಪಕ್ಷದ ನಿರ್ಧಾರ. ನನಗೆ ಮೂರು ವರ್ಷಗಳ ಕಾಲ ಅವಕಾಶ ಸಿಕ್ಕಿದೆ. ಆ ಮೂರು ವರ್ಷಗಳಲ್ಲಿ ನನ್ನ ಇಲಾಖೆಯಲ್ಲಿ ಬಹಳ ಒಳ್ಳೆಯ ಕೆಲಸ ಮಾಡಿದ್ದೇನೆ ಎನ್ನುವ ತೃಪ್ತಿ ನನಗಿದೆ”

“ನನ್ನನ್ನು ಮಂತ್ರಿ ಮಾಡಬೇಕು ಎಂದು ನಾನು ಯಾರನ್ನೂ ಕೇಳಿಲ್ಲ. ರಾಜಕಾರಣದಲ್ಲಿ ಯಾರು ಯಾವ ಸ್ಥಾನಕ್ಕೆ ಹೋಗಬೇಕು ಎನ್ನುವುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಅಂತಹ ವಿಚಾರದಲ್ಲಿ ನಾನು ಯಾವುದೇ ರೀತಿಯ ಒತ್ತಡ ಅಥವಾ ಬೇಡಿಕೆ ಇಡುವುದಿಲ್ಲ. ಈಗ ಮುಖ್ಯಮಂತ್ರಿಗಳಿದ್ದಾರೆ. ಅವರ ನಾಯಕತ್ವದಲ್ಲಿ ನಾನು ನನ್ನಿಂದಾಗುವ ಕೆಲಸವನ್ನು ಮಾಡುತ್ತೇನೆ” ಎಂದು ಹೇಳಿದರು.

Shivalinge Gowda on HD Revanna : ಜಿಲ್ಲಾಧಿಕಾರಿಗಳ ಯಾವುದೇ ತಪ್ಪು ಮಾಡಿಲ್ಲ, ಹಾಗೆಲ್ಲ ಮಾತಾಡಬಾರದು..! #jdsmla

ರಾಜ್ಯಾದ್ಯಂತ ಪಕ್ಷ ಸಂಘಟನೆ
.
“ಇನ್ನು ಮುಂದೆಯೂ ನಾನು ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಅಥವಾ ಬೆಳಗಾವಿ ಜಿಲ್ಲೆಗೆ ಮಾತ್ರ ಸೀಮಿತವಾಗಿರುವುದಿಲ್ಲ. ಈ ಹಿಂದೆ ಹೇಗೆ ರಾಜ್ಯಾದ್ಯಂತ ಪ್ರವಾಸ ಮಾಡಿದ್ದೇನೋ, ಅದೇ ರೀತಿಯಲ್ಲಿ ಮುಂದೆಯೂ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷದ ಸಂಘಟನೆಯಲ್ಲಿ ಕೆಲಸ ಮಾಡುತ್ತೇನೆ. ಪಕ್ಷದ ಸಂಘಟನೆಯಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತೇನೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಚೌಕಟ್ಟಿನಲ್ಲಿ ಇದ್ದುಕೊಂಡು ಕೆಲಸ ಮಾಡುವುದು ನನ್ನ ಜವಾಬ್ದಾರಿ. ರಾಜಕಾರಣದಲ್ಲಿ ನಾಯಕರಿಗೆ ಒಮ್ಮೊಮ್ಮೆ ಪರೀಕ್ಷೆಯ ಸಂದರ್ಭ ಬರುತ್ತದೆ. ಅದು ಒಂದು ರೀತಿಯ ಅಗ್ನಿಪರೀಕ್ಷೆ. ಆ ಸಂದರ್ಭದಲ್ಲಿ ನಾವು ತಾಳ್ಮೆಯಿಂದ ಇರಬೇಕು. ಪಕ್ಷದ ಚೌಕಟ್ಟಿನಲ್ಲಿ, ಪಕ್ಷದ ಶಿಸ್ತಿನಲ್ಲಿ ಇದ್ದರೆ ಖಂಡಿತವಾಗಿಯೂ ಮುಂದಿನ ದಿನಗಳಲ್ಲಿ ಅವಕಾಶಗಳು ಬರುತ್ತವೆ” ಎಂದು ಭರವಸೆಯ ಮಾತುಗಳನ್ನು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

DK Shivakumar : ಬರ ಪರಿಹಾರದ ಬಗ್ಗೆ ಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದೇನು..! #congress #BeleParihara
Previous Post

SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

Next Post

ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

Related Posts

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ
Top Story

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ

by ಪ್ರತಿಧ್ವನಿ
August 27, 2026
0

ಬೆಂಗಳೂರು: ಫುಟ್‌ಪಾತ್‌ಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆ ಬಳಿಕ ಮತ್ತೆ ಅತಿಕ್ರಮಣ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಬಿಜೆ ಎಚ್ಚರಿಕೆ ನೀಡಿದ್ದಾರೆ. ಒತ್ತುವರಿ ತೆರವುಗೊಳಿಸಿದ ಬಳಿಕ...

Read moreDetails
2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

August 27, 2026
ದೇಶದ ನಂ.1 ಶ್ರೀಮಂತ ಸಿಎಂ ಡಿಕೆಶಿ;  ಹೇರ್‌ಕಟ್‌ಗೆ ಖರ್ಚು ಮಾಡೋದು ಕೇವಲ ಎಷ್ಟು ಗೊತ್ತೆ ?

ದೇಶದ ನಂ.1 ಶ್ರೀಮಂತ ಸಿಎಂ ಡಿಕೆಶಿ;  ಹೇರ್‌ಕಟ್‌ಗೆ ಖರ್ಚು ಮಾಡೋದು ಕೇವಲ ಎಷ್ಟು ಗೊತ್ತೆ ?

August 27, 2026
ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

August 27, 2026
SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

August 27, 2026
Next Post
ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada