ದಾವಣಗೆರೆ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಮಾಜಿ ಸಚಿವ ಆರ್.ಶಂಕರ್ ಕೈ ತಪ್ಪಿದೆ. ಇದರಿಂದ ಬೇಸರಗೊಂಡಿರುವ ಆರ್.ಶಂಕರ್ ಇಂದು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಬಿಜೆಪಿ ರಾಣೆಬೆನ್ನೂರು ಕ್ಷೇತ್ರಕ್ಕೆ ಶಾಸಕ ಅರುಣ್ ಕುಮಾರ್ಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ಗೆ ಹೋಗಲಾಗದೇ ಬಿಜೆಪಿಯಲ್ಲಿ ಇರಲಾರದೇ ಸಂಕಷ್ಟಕ್ಕೆ ಸಿಲುಕಿರುವ ಆರ್.ಶಂಕರ್ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ನಿರ್ಧಾರ ಮಾಡಿದ್ದಾರೆ.
ಇಂದು ಸಭಾಪತಿ ಬಸವರಾಜ ಹೊರಟ್ಟಿ ಬಳಿ ಆರ್.ಶಂಕರ್ ರಾಜೀನಾಮೆ ಪತ್ರ ನೀಡಲಿದ್ದಾರೆ.







