ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡಿದೆ. 20 ವರ್ಷಗಳಿಂದ ಚಿಕ್ಕಮಗಳೂರಿನಲ್ಲಿ ಶಾಸಕನಾಗಿ ಆಯ್ಕೆಯಾಗುತ್ತಿದ್ದ ಬಿಜೆಪಿ ಪ್ರಭಾವಿ ನಾಯಕ ಸಿ.ಟಿ ರವಿ ಕೂಡ ಈ ಬಾರಿ ಸೋತು ಮನೆ ಸೇರಿದ್ದಾರೆ. ಈ ಬಗ್ಗೆ ಮೂಡಿಗೆರೆ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ .
ಮೂಡಿಗೆರೆಯಲ್ಲಿ ಬಿಜೆಪಿಗೆ ಜೀವ ತುಂಬಿದ್ದೇ ನಾವು. ಆದರೆ ಈ ಸಿ.ಟಿ ರವಿ ನನ್ನನ್ನು ಬಿಜೆಪಿಯಿಂದ ಹೊರ ಹೋಗುವಂತೆ ಮಾಡಿದರು. ಆದರೆ ಇದೀಗ ಕ್ಷೇತ್ರದ ಜನತೆ ಅವರನ್ನೂ ಹೊರಗೆ ಕಳುಸಿದ್ದಾರೆ ಎಂದು ಎಂಪಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಸಿ.ಟಿ ರವಿ ಕ್ಷೇತ್ರದಲ್ಲಿ ದತ್ತ ಮಾಲೆ ವಿಚಾರವನ್ನೇ ಮುಂದಿಟ್ಟುಕೊಂಡು ಗೆಲ್ಲುವ ಪ್ರಯತ್ನ ಮಾಡಿದರು. ಆದರೆ ಅದ್ಯಾವುದೂ ವರ್ಕೌಟ್ ಆಗಲಿಲ್ಲ ಎಂದು ಲೇವಡಿ ಮಾಡಿದ್ದಾರೆ.