ಮೈಸೂರು(Mysuru): ಕಾಂಗ್ರೆಸ್ ನ ಮಾಜಿ ಶಾಸಕ ವಾಸು (Vasu) ಅವರು ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ಜಯಲಕ್ಷ್ಮಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಮಾಜಿ ಶಾಸಕ ವಾಸು ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಟಿಕೆಟ್ ಕೈತಪ್ಪಿದ ಬಳಿಕ ರಾಜಕೀಯದಲ್ಲಿ ಸಕ್ರಿಯವಾಗಿ ಇರಲಿಲ್ಲ.
ತಮಗೆ ಟಿಕೆಟ್ ಸಿಗದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ವಾಸು ಅವರ ಪುತ್ರ ಕವೀಶ್ ಗೌಡ (KavishGowda) ಅವರು 2023ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸೇರ್ಪಡೆಯಾಗಿ, ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
#karnataka #mysuru #vasu #exmla #passesaway









