ಮೈಸೂರು: ಮೂಲ ಕಾಂಗ್ರೆಸ್ ನಿಯಮದ ಪ್ರಕಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಬೇಕು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಿಎಂ ಸ್ಥಾನ ಬಿಟ್ಟುಕೊಡುವ ಮನಸ್ಸು ಇಲ್ಲ ಎಂದು ಕಾಂಗ್ರೆಸ್ ಕುರ್ಚಿ ಕದನದ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟು ಕೊಡುತ್ತಾರೆ ಅಂತಾ ಅನಿಸುವುದಿಲ್ಲ. ಸಿದ್ದರಾಮಯ್ಯ ದೇವೇಗೌಡ್ರು ಗರಡಿಯಲ್ಲಿ ಪಳಗಿದವರು. ಅವರ ಜೊತೆಗಿದ್ದು, ಅಭಿವೃದ್ಧಿ ಕೆಲಸ ಕಲಿತಿದ್ದರೆ, ರಾಜ್ಯಕ್ಕೆ ಒಳ್ಳೆಯದಾಗುತ್ತಿತ್ತು. ಆದರೆ ಸಿದ್ದರಾಮಯ್ಯ ಬರೀ ರಾಜಕೀಯ ಕಲಿತರು ಎಂದರು.

ಎರಡೂವರೆ ವರ್ಷ ಒಳ್ಳೆಯ ಕೆಲಸ ಮಾಡಿದ್ದರೆ ಸಿದ್ದರಾಮಯ್ಯ ಅವರೇ ಮುಂದುವರಿಯಲಿ ಅಂತಾ ಜನರೇ ಧ್ವನಿ ಎತ್ತುತ್ತಿದ್ದರು. ಆದರೆ ಈಗ ಜನ ಥೂ..ಛೀ ಅಂತಾ ಮುಖಕ್ಕೆ ಉಗಿಯುತ್ತಿದ್ದಾರೆ. ಪೊಲೀಸರ ಸರ್ಪಗಾವಲಿನಲ್ಲಿ ಬಂದು ಕಾರ್ಯಕ್ರಮ ಮಾಡಿ ಹೋಗುತ್ತೀರಿ. ಒಂದು ವೇಳೆ ಎದುರಿಗೆ ಸಿಕ್ಕರೆ ನಿಮ್ಮ ಮುಖಕ್ಕೆ ಉಗಿಯುತ್ತಿದ್ದರು. ಆ ಸ್ಥಿತಿ ಇದೆ ಈಗ. ಜನರೇ ಇವರನ್ನು ಯಾವಾಗ ತೊಲಗುತ್ತಾರೋ ಎನ್ನುವ ಪರಿಸ್ಥಿತಿ ಇದೆ ಎಂದು ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದರು.












