• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೃದಯಾಘಾತದಿಂದ ಮಾಜಿ ಸಂಸದ ಆರ್.‌ ಧ್ರುವ ನಾರಾಯಣ ನಿಧನ

ಪ್ರತಿಧ್ವನಿ by ಪ್ರತಿಧ್ವನಿ
March 11, 2023
in Top Story
0
ಹೃದಯಾಘಾತದಿಂದ ಮಾಜಿ ಸಂಸದ ಆರ್.‌ ಧ್ರುವ ನಾರಾಯಣ ನಿಧನ
Share on WhatsAppShare on FacebookShare on Telegram

ಮೈಸೂರು: ಚಾಮರಾಜನಗರದ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ  ಆರ್.‌ ಧ್ರುವ ನಾರಾಯಣ (60) ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ.

ADVERTISEMENT

ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಅವರು ಬದುಕುಳಿದಿಲ್ಲ. ಧ್ರುವನಾಯಣ ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

1983 ರಲ್ಲಿ  ಕಾಂಗ್ರೆಸ್‌  ಸೇರುವ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದ ಅವರು, ಸಂತೇಮರಹಳ್ಳಿ ಕ್ಷೇತ್ರದಿಂದ ಒಂದು ಶಾಸಕರಾಗಿ ಆಯ್ಕೆಯಾಗಿ, ಎರಡನೇ ಬಾರಿ ಕೊಳ್ಳೇಗಾಲ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಚಾಮರಾಜನಗರ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್‌ ಅವರ ಎದುರು ಸೋಲು ಕಂಡಿದ್ದ ಅವರು, ಸದ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು.

ಸಿದ್ದರಾಮಯ್ಯ ನಂತರ ಮೈಸೂರಿನ ಪ್ರಭಾವಿ ನಾಯಕರು ಎಂದರೆ ಅದು ಆರ್.‌ಧ್ರುವ ನಾರಾಯಣರಾಗಿದ್ದರು.  ಶ್ರಿನಿವಾಸ್‌ ಪ್ರಸಾದ್‌ ಅವರ ಬಳಿಕ ಮೈಸೂರಿನ ಭಾಗದಲ್ಲಿ ದಲಿತ ಸಮುದಾಯವನ್ನು ಪ್ರತಿನಿಧಿಸಿದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದರು.

ಕೇಂದ್ರದ ಅನುದಾನವನ್ನು ಉತ್ತಮವಾಗಿ ಬಳಸಿ ಅಭಿವೃದ್ದಿಗೆ ನೆರವಾದ ಅವರು ಜನರಿಂದ
ಅತ್ಯುತ್ತಮ ಸಂಸದ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇತ್ತೀಚಿಗೆ ಆರೋಗ್ಯ ಸಮಸ್ಯೆ ಇದ್ದರೂ ರಾಜಕೀಯ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸುತ್ತಿದ್ದರು.

ಆಸ್ಪತ್ರೆಗೆ ಕೈ ನಾಯಕರ ದಂಡು..

ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಶಾಸಕರಾದ ಮಂಜುನಾಥ್ , ಯತೀಂದ್ರ ಸಿದ್ದರಾಮಯ್ಯ , ಅನಿಲ್ ಚಿಕ್ಕಮಾದು , ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಸೇರಿದಂತೆ ಅನೇಕ ಜನರು ಕಣ್ಣೀರಿಟ್ಟರು. ಆಸ್ಪತ್ರೆಯಲ್ಲಿ ಗೋಳಾಡಿದ್ರು.

ಸಂಜೆ ಅಂತ್ಯಕ್ರಿಯೆ..?
ಧ್ರುವನಾರಾಯಣ ಅವರ ಅಂತ್ಯಕ್ರಿಯೆ ಸಂಜೆ ಮೈಸೂರಲ್ಲಿ ನಡೆಯಲಿದೆ ಅಂತ ಹೇಳಲಾಗುತ್ತಿದೆ. ಧ್ರುವನಾರಾಯಣ್ ಕುಟುಂಬಸ್ಥರು ಶಾಕ್ ಗೆ ಒಳಗಾಗಿದ್ದು ಶೋಕ ಸಾಗರದಲ್ಲಿ ಮುಳುಗಿದ್ರು. ಅಂತಿಮ ದರ್ಶನಕ್ಕೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುತ್ತಿದ್ದು , ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸು ತ್ತಿದ್ದಾರೆ.

ರಾಜಕೀಯ ಹಿನ್ನೆಲೆ

1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಇವರು ಬೆಂಗಳೂರಿನ ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು.1983 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಧ್ರುವನಾರಾಯಣ್‌ 1984 ರಲ್ಲಿ ಜಿಕೆವಿಕೆಯ ಎನ್ ಎಸ್ ಯುಐ ಅಧ್ಯಕ್ಷನಾಗಿ ಆಯ್ಕೆಯಾದರು. ನಂತರ 1986 ರಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು, ಆದರೆ 1999ರಲ್ಲಿ ಮೊದಲ ಬಾರಿಗೆ ಸಂತೆಮಾರಳ್ಳಿ ಕ್ಷೇತ್ರದಿಂದ ವಿಧಾನಸಭೆಗೆ ಮೊದಲ ಬಾರಿ ಸ್ಪರ್ಧಿಸಿ ಸೋಲನ್ನನುಭವಿಸಿದ್ದರು. ಆದರೆ 2004 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ 1 ಮತದ ಅಂತರದ ಗೆಲುವು ಸಾಧಿಸಿ ಇತಿಹಾಸವನ್ನು ಸೃಷ್ಟಿಸಿದ್ದರು.ನಂತರ 2008ರಲ್ಲಿ ಕೊಳ್ಳೆಗಾಲ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅದಾದ ಬಳಿಕ 2009 ಹಾಗೂ 2014 ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ್ದರು

Tags: ChamarajanagaraCongress PartyMysorer druvanarayan
Previous Post

ದಶಪಥ ಹೆದ್ದಾರಿ ಸಿದ್ದರಾಮಯ್ಯ, ನನ್ನ ಕನಸು: ಡಾ.ಎಚ್‌.ಸಿ.ಮಹದೇವಪ್ಪ

Next Post

ಆಟವಾಡುತ್ತಾ ಅಪಾರ್ಟ್ ಮೆಂಟ್’ನ 3ನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಗಂಭೀರ ಗಾಯ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
ಆಟವಾಡುತ್ತಾ ಅಪಾರ್ಟ್ ಮೆಂಟ್’ನ 3ನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಗಂಭೀರ ಗಾಯ

ಆಟವಾಡುತ್ತಾ ಅಪಾರ್ಟ್ ಮೆಂಟ್’ನ 3ನೇ ಮಹಡಿಯಿಂದ ಕೆಳಗೆ ಬಿದ್ದ ಮಗು: ಗಂಭೀರ ಗಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada