• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನಿಮ್ಮ ಮೈತ್ರಿಕೂಟ ಬದಲಾವಣೆ ಪ್ರಶ್ನೆಯೇ ಇಲ್ಲ : ಮೋದಿಗೆ ಗೌಡರ ಅಭಯ..!

ನಾನು ನಿಮ್ಮ (ಎನ್‌ಡಿಎ) ಜತೆಯಲ್ಲಿಯೇ ಇರುತ್ತೇನೆ. ನನ್ನ ಮಗ ನಿಮ್ಮ ಸಂಪುಟದಲ್ಲಿ ಇದ್ದಾನೆ. ನಾವು ಮುಂದೆಯೂ ನಿಮ್ಮ ಜತೆಗೇ ಇರುತ್ತೇವೆ ಹಾಗೂ ಮೈತ್ರಿಕೂಟ ಬದಲಾವಣೆ ಮಾಡುವ ಯಾವ ಪ್ರಶ್ನೆಯೇ ಇಲ್ಲ ಎಂದ ದೊಡ್ಡಗೌಡರು..

ಪ್ರತಿಧ್ವನಿ by ಪ್ರತಿಧ್ವನಿ
February 4, 2026
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ನಿಮ್ಮ ಮೈತ್ರಿಕೂಟ ಬದಲಾವಣೆ ಪ್ರಶ್ನೆಯೇ ಇಲ್ಲ :  ಮೋದಿಗೆ ಗೌಡರ ಅಭಯ..!
Share on WhatsAppShare on FacebookShare on Telegram

ನವದೆಹಲಿ : ಕರ್ನಾಟಕ ರಾಜ್ಯದ ಅನೇಕ ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಆ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ರಾಜ್ಯ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯಸಭೆಯ ಹಿರಿಯ ಸದಸ್ಯ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ  ಕೇಂದ್ರ ಸರ್ಕಾರಕ್ಕೆ ಕೈ ಮುಗಿದು ವಿನಂತಿಸಿದ್ದಾರೆ.

ADVERTISEMENT

ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಪಾಲ್ಗೊಂಡು ಕರ್ನಾಟಕ ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ರಾಜ್ಯಸಭೆಯಲ್ಲಿ ಗದ್ಗದಿತರಾಗಿ ಮಾತಾನಾಡಿ, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ದಯಮಾಡಿ ಪರಿಹರಿಸಿ ಎಂದು ಕೇಂದ್ರ ಸರಕಾರವನ್ನು ಮನವಿ ಮಾಡಿಕೊಂಡಿದ್ದಾರೆ.

G B Vinaykumar on union Budget : ದಾವಣಗೆರೆಗೆ ಏರ್ಪೋಟ್‌ ನಿರ್ಮಾಣ ಆಗೋಕೆ ಎಲ್ಲ ನಾಯಕರು ಮೋದಿ ಭೇಟಿಯಾಗಬೇಕು..

ತಮ್ಮ ಸಂಕ್ಷಿಪ್ತ ಭಾಷಣದಲ್ಲಿ ರಾಜ್ಯದ ನೀರಾವರಿ ಬಿಕ್ಕಟ್ಟನ್ನು ಎಳೆಎಳೆಯಾಗಿ ಬಿಡಿಸಿಟ್ಟ ದೇವೇಗೌಡರು, ನನ್ನ ರಾಜ್ಯಸಭಾ ಅವಧಿ ಇನ್ನೊಂದು ತಿಂಗಳಲ್ಲಿ ಮುಗಿಯಲಿದೆ. ನನ್ನ ರಾಜ್ಯದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರ ಹಿತಕಾಯಿರಿ. ನಾವೆಲ್ಲರೂ ಮನುಷ್ಯರು, ಮಳೆ ಬಿದ್ದರೆ ನೀರು, ಇಲ್ಲವಾದರೆ ಇಲ್ಲ. ಈ ಸದನದ ಎಲ್ಲಾ ಸದಸ್ಯರು ಕರ್ನಾಟಕದ ರಕ್ಷಣೆ ಮಾಡಬೇಕು ಎಂಬುದಾಗಿ ನಾನು ಕೈ ಮುಗಿದು ಬೇಡುತ್ತೇನೆ ಎಂದು ಮನವಿ ಮಾಡಿದ್ದಾರೆ.

ಕರ್ನಾಟಕ ನಿರಂತರವಾಗಿ ನೆರೆ ರಾಜ್ಯಗಳ ಜತೆ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸುತ್ತಿದೆ. ನಾನು ಕೂಡ ನೀರಿಗಾಗಿ 65 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇನೆ. ಈ ಸದನದಲ್ಲಿ ನಾನು ನ್ಯಾಯಮಂಡಳಿಗಳು ನೀಡಿರುವ ತೀರ್ಪುಗಳ ಬಗ್ಗೆ ಚರ್ಚಿಸಲು ಬಯಸುವುದಿಲ್ಲ. ಕರ್ನಾಟಕ ರಾಜ್ಯಕ್ಕೆ ನೀರಿನದೇ ಬಹುದೊಡ್ಡ ಬಿಕ್ಕಟ್ಟಾಗಿದೆ. ಒಂದೆಡೆ ತಮಿಳುನಾಡು, ಮತ್ತೊಂದೆಡೆಯಲ್ಲಿ ಆಂಧ್ರ ಪ್ರದೇಶ, ಇನ್ನೊಂದು ಕಡೆಯಲ್ಲಿ ಗೋವಾದಿಂದ ತೊಂದರೆ ಎದುರಿಸುತ್ತಿದೆ. ನಾನು ಜೀವನದ ಕೊನೆಕಾಲದಲ್ಲಿ ಇದ್ದೇನೆ. ಈ ವೃದ್ಧನ ಮನವಿಗೆ ಮಾನವೀಯತೆಯಿಂದ ಸ್ಪಂದಿಸಿ ಎಂದು ದೇವೇಗೌಡ ಭಾವುಕರಾಗಿ ಬೇಡಿಕೊಂಡಿದ್ದಾರೆ.

ಇದನ್ನೂ ಓದಿ : ಜ್ಯೋತಿಷಿ ಕಮಲಾಕರ ಭಟ್‌ ಜೊತೆಗೆ ಬಿಜೆಪಿ ಶಾಸಕ : ಹರಿಪ್ರಸಾದ್ ಸ್ಫೋಟಕ ಆರೋಪಗಳೇನು..?

ನರೇಂದ್ರ ಮೋದಿ ಸರ್ಕಾರ ಈ ಬಿಕ್ಕಟ್ಟಿಗೆ ಪರಿಹಾರ ನೀಡಬೇಕು. ನಾನು ನಿಮ್ಮ (ಎನ್‌ಡಿಎ) ಜತೆಯಲ್ಲಿಯೇ ಇರುತ್ತೇನೆ. ನನ್ನ ಮಗ ನಿಮ್ಮ ಸಂಪುಟದಲ್ಲಿ ಇದ್ದಾನೆ. ನಾವು ಮುಂದೆಯೂ ನಿಮ್ಮ ಜತೆಗೇ ಇರುತ್ತೇವೆ ಹಾಗೂ ಮೈತ್ರಿಕೂಟ ಬದಲಾವಣೆ ಮಾಡುವ ಯಾವ ಪ್ರಶ್ನೆಯೇ ಇಲ್ಲ. ರಾಜ್ಯದ ಜನರಿಗೆ ನ್ಯಾಯ ಒದಗಿಸಿ ಎಂಬುದಷ್ಟೇ ನನ್ನ ಏಕೈಕ ಮನವಿ ಎಂದು ಮಾಜಿ ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಯುರೋಪಿಯನ್ ಒಕ್ಕೂಟ ಹಾಗೂ ಅಮೆರಿಕ ಜತೆ ಯಶಸ್ವಿಯಾಗಿ ವ್ಯಾಪಾರ ಒಪ್ಪಂದ ಮಾಡಿಕೊಂಡ ಭಾರತದ ರಾಜತಾಂತ್ರಿಕ ಜಾಣ್ಮೆಯನ್ನು ಕೊಂಡಾಡಿದ ಮಾಜಿ ಪ್ರಧಾನಿ, ಇದಕ್ಕೆ ಕಾರಣೀಭೂತರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ಬಗ್ಗೆ ನಾನು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂಬ ಅಂಶವನ್ನು ಅವರು ಉಲ್ಲೇಖಿಸಿದರು.

ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಆಗಿದ್ದು, ಜನರ ಆದಾಯ ಹೆಚ್ಚಳ ಆಗುತ್ತಿದೆ ಹಾಗೂ ರೈತಪರವಾಗಿ ಈ ಸರ್ಕಾರ ಕೆಲಸ ಮಾಡುತ್ತಿದೆ. 2047ಕ್ಕೆ ಭಾರತವು ಮೋದಿ ಅವರ ನೇತೃತ್ವದಲ್ಲಿ ವಿಕಸಿತ ಭಾರತ ಆಗುವುದರಲ್ಲಿ ಯಾವುದೇ ಸಂಶಯ ಇಲ್ಲವೆಂದು ಪ್ರತಿಪಕ್ಷಗಳನ್ನು ದೇವೇಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ.

Tags: formers problemsGovaernment Of IndiaHD DevegowdaHD KumaraswamyJDS Karnatakakannada newskarnataka newsKarnataka PoliticsKarnataka water ProblemsNarendra ModiNDA allianceNew DelhiParliment Budget SessionPratidhvaniPrime MinisterUnion Budget 2026union government
Previous Post

ಲೋಕಸಭೆ ಕಲಾಪದಲ್ಲಿ ಇಂದು ಮೋದಿ ಭಾಷಣ ರದ್ದು: ಕಾರಣವೇನು ?

Next Post

ಬಿಜೆಪಿ ಸರ್ಕಾರದ ಅಕ್ರಮದಲ್ಲಿ ಯಾರಾದ್ರು ರಾಜೀನಾಮೆ ಕೊಟ್ಟಿದ್ರಾ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

February 7, 2026
Next Post
ಬಿಜೆಪಿ ಸರ್ಕಾರದ ಅಕ್ರಮದಲ್ಲಿ ಯಾರಾದ್ರು ರಾಜೀನಾಮೆ ಕೊಟ್ಟಿದ್ರಾ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಬಿಜೆಪಿ ಸರ್ಕಾರದ ಅಕ್ರಮದಲ್ಲಿ ಯಾರಾದ್ರು ರಾಜೀನಾಮೆ ಕೊಟ್ಟಿದ್ರಾ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada