ಕೆಲ ವಿರೋಧ ಪಕ್ಷಗಳ ಅನುಪಸ್ಥಿತಿಯಲ್ಲೂ ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಸಂಸತ್ ಭವನ ಉದ್ಘಾಟನಾ (NewParliamentBuilding) ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಭಾಗವಹಿಸಿದ್ದಾರೆ. ಇತ್ತೀಚಿಗೆ ಮಾಜಿ ಪ್ರಧಾನಿ ದೇವೇಗೌಡ ಅವರು (HD DEVEGOWDA) ಮಾಧ್ಯಮಗಳ ಜೊತೆ ಮಾತನಾಡಿ, ನಾನು ಖಂಡಿತವಾಗಿಯೂ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು ಮಾಜಿ ಪ್ರಧಾನಿ ನೂತನ ಸಂಸತ್ನಲ್ಲಿ ಉಪಸ್ಥಿತರಿದ್ದರು.
ಇನ್ನು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ (PM PRATAPSIMHA) ನೂತನ ಸಂಸತ್ ಭವನದಲ್ಲಿ ಮಾಜಿ ಹೆಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಫೋಟೋ ಗಳನ್ನ ಹಂಚಿಕೊಂಡು ಸಂತಸ ವ್ಯಕ್ತಪಡಿಸಿರುವ ಪ್ರತಾಪ್ ಸಿಂಹ, ಹೊಸ ಸಂಸತ್ ಭವನದ (NewParliamentBuilding) ಉದ್ಘಾಟನೆ ಸಂದರ್ಭದಲ್ಲಿ ಹಿರಿಯ ಚೇತನ, ಮಾಜಿ ಪ್ರಧಾನಿ ದೇವೇಗೌಡರಿಂದ ಆಶೀರ್ವಾದ ಪಡೆದುಕೊಂಡೆ ಎಂದು ಬರೆದುಕೊಂಡಿದ್ದಾರೆ.